ಉಡುಪಿ | ಮಾನವ ಅಭಿವೃದ್ಧಿ ವರದಿ ಸಿದ್ಧತೆಗೆ ಅಧಿಕಾರಿಗಳಿಗೆ ಡಿಸಿ ಸ್ವರೂಪ ಟಿ ಕೆ ಸೂಚನೆ

Date:

ಉಡುಪಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ- 2025 ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031 ವರದಿಯನ್ನು ಸಿದ್ಧಪಡಿಸಲು ಅಧಿಕಾರಿಗಳು ಕಾಳಜಿ ವಹಿಸುವುದರೊಂದಿಗೆ ನಿಖರ ದತ್ತಾಂಶವನ್ನು ಕಾಲಮಿತಿಯ ಒಳಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು.

- Advertisement -

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ- 2025 ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031 ವರದಿಯನ್ನು ಸಿದ್ಧಪಡಿಸುವ ಕುರಿತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ನಡೆದ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಉಡುಪಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ- 2025 ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031 ವರದಿಯು ಅತೀ ಪ್ರಾಮುಖ್ಯ ದಾಖಲೆಯಾಗಿದ್ದು, ಎಲ್ಲಾ ಇಲಾಖಾಧಿಕಾರಿಗಳು ಇದರ ತಯಾರಿಕೆಯ ಪ್ರಕ್ರಿಯೆಯಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಸಂಬAಧಿಸಿದ ದಾಖಲೆಗಳನ್ನು ಕ್ಲಪ್ತ ಸಮಯದಲ್ಲಿ ಒದಗಿಸುವುದರೊಂದಿಗೆ ಗ್ರಾಮ ಪಂಚಾಯತ್ ಹಂತದಿಂದಲೇ ಮಾನವ ಅಭಿವೃದ್ಧಿಗೆ ಒತ್ತು ನೀಡುವಂತದ್ದಾಗಿರಬೇಕು ಎಂದರು.

ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ – 2031 ವರದಿಗಾಗಿ ಹಲವು ಅಂಶಗಳ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದ್ದು, ಶಿಕ್ಷಣ, ಆರೋಗ್ಯ, ಪೋಷಣಾ ಸ್ಥಿತಿ, ಮೂಲಸೌಕರ್ಯ, ಸಾಮಾಜಿಕ ಒಳಗೊಳ್ಳುವಿಕೆ ಹಾಗೂ ಪರಿಸರದ ಸುಸ್ಥಿರತೆ ಸೇರಿದಂತೆ ವಿವಿಧ ಮಾನವ ಅಭಿವೃದ್ಧಿ ಸೂಚ್ಯಂಕಗಳ ಆಧಾರದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯನ್ನು ಸಾಧಿಸುವುದು ಈ ವರದಿಗಳ ಪ್ರಮುಖ ಗುರಿಯಾಗಿದೆ. ಅಧಿಕಾರಿಗಳು, ದತ್ತಾಂಶ ಸಂಗ್ರಹ, ವಿಶ್ಲೇಷಣೆ, ಇಲಾಖಾವಾರು ಸಹಕಾರದೊಂದಿಗೆ ಮಾಹಿತಿಯನ್ನು ಒದಗಿಸಬೇಕು. ಜಿಲ್ಲೆಯ ಸಮಗ್ರ ಹಾಗೂ ಸಮತೋಲನೆಯ ಅಭಿವೃದ್ಧಿಗೆ ಇಲಾಖೆಗಳ ನಡುವೆ ಪರಸ್ಪರ ಸಮನ್ವಯತೆ ಅಗತ್ಯ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಉಡುಪಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ- 2025 ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031 ವರದಿ ನೀಡುವಾಗ ಎಲ್ಲಾ ಇಲಾಖೆಗಳು ಸಂಬಂಧಪಟ್ಟ ಮಾಹಿತಿಯೊಂದಿಗೆ ಭಾಗವಹಿಸಬೇಕು. ಇದರೊಂದಿಗೆ ಫೀಡ್ ಬ್ಯಾಕ್‌ಗಳನ್ನು ಸಹ ನೀಡಬೇಕು ಎಂದರು.

ಜಿಲ್ಲಾ ಮಾನವ ಅಭಿವೃದ್ಧಿ ವರದಿಗೆ ಹೆಚ್ಚಿನ ಬೇಡಿಕೆ ಇದ್ದು, ಇದು ಭವಿಷ್ಯದ ಯೋಜನೆಗಳನ್ನು ರೂಪಿಸಲು ರೆಫರ್ ಮಾಡಬಹುದಾಗಿದೆ. ಈ ಸಾಲಿನ ಜಿಲ್ಲಾ ಮಾನವ ಅಭಿವೃದ್ಧಿ ವರದಿ ಭಿನ್ನವಾಗಿದ್ದು, ಸುಸ್ಥಿರ ಅಭಿವೃದ್ಧಿ ಬೆಳವಣಿಗೆ ಅಭಿವೃದ್ಧಿಗೆ ಇದು ಸಹಕಾರಿಯಾಗಲಿದೆ. ಜನಸಾಮಾನ್ಯರಿಗೆ ಅವರ ಕೈಗೆಟುವ ಹಾಗೆ ಹೆಚ್ಚಿನ ಆಯ್ಕೆಗಳಿದ್ದಲ್ಲಿ ಮಾನವ ಅಭಿವೃದ್ಧಿ ಸಾಧ್ಯವಾಗಲಿದೆ. ಶಿಕ್ಷಣ, ಆರೋಗ್ಯ, ಜನರ ಜೀವನ ಮಟ್ಟದ ಮೇಲೆ ಅಭಿವೃದ್ಧಿಯ ಅಂಶಗಳು ಒಳಪಟ್ಟಿವೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ನಿವೃತ್ತ ಜಂಟಿ ನಿರ್ದೇಶಕ ಶ್ರೀನಿವಾಸ್ ರಾವ್
ಮಾತನಾಡಿ, ಜಿಲ್ಲಾ ಮಾನವ ಅಭಿವೃದ್ಧಿ ವರದಿಗೆ ಅತ್ಯಂತ ಮಹ್ವತ್ವವಾದ ಮೌಲ್ಯವಿದೆ. ಜಿಲ್ಲೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಅಚ್ಚುಕಟ್ಟಾಗಿ ಸ್ಪಷ್ಟ ಮಾಹಿತಿ ನೀಡಿದ್ದಲ್ಲಿ ಇದು ಜಿಲ್ಲೆಯು ಅಭಿವೃದ್ಧಿ ಹೊಂದಲು ಸಹಕಾರಿಯಾಗಲಿದೆ ಎಂದರು.

ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಯೋಜನೆ ರೂಪಿಸುವಾಗ ಎದುರಾಗುವ ಸಮಸ್ಯೆಗಳನ್ನು ಸಹ ತಿಳಿಸಬಹುದು. ಹೊಸ ವಿನೂತನ ಯೋಜನೆಗಳನ್ನೂ ಸಹ ಗುರುತಿಸಿ, ಮಾಹಿತಿ ನೀಡಬಹುದು. ಜೊತೆಗೆ ವರದಿಯೊಂದಿಗೆ ಜನರನ್ನು ಆಕರ್ಷಿಸುವಂತಹ ಸ್ಥಳೀಯ ಕಲೆ, ಸಂಸ್ಕೃತಿ, ವೇಷಭೂಷಣಗಳನ್ನು ಒಳಗೊಂಡ ಛಾಯಾಚಿತ್ರಗಳನ್ನು ನೀಡಿದ್ದಲ್ಲಿ ವರದಿಗೆ ಹೆಚ್ಚಿನ ಮಹತ್ವ ದೊರೆಯಲಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್, ಯೋಜನೆಯ ಅನುಷ್ಠಾನಾಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...