ಉಡುಪಿ | ಹಿಂದುಳಿದ ವರ್ಗಗಳ ಆಯೋಗ ನಡೆಸುವ ಸಮೀಕ್ಷಾ ಕಾರ್ಯ ಯಶಸ್ವಿಗೊಳಿಸಿ – ಡಿಸಿ ಸ್ವರೂಪ ಟಿ.ಕೆ

Date:

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯಾದ್ಯಂತ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಿದ್ದು, ಇದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ವ್ಯವಸ್ಥಿತ ರೀತಿಯಲ್ಲಿ ಮಾಡಿಕೊಳ್ಳುವುದರೊಂದಿಗೆ ಸಮಿಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಅಗತ್ಯವಿರುವ ಪೂರ್ವ ಸಿದ್ಧತೆಗಳ ಕುರಿತು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಎಲ್ಲ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುವ ಪ್ರಕ್ರಿಯೆಯನ್ನು ಆರಂಭಿಸಿದೆ. ಜಿಲ್ಲೆಯಲ್ಲಿ ನಗರ ವ್ಯಾಪ್ತಿಯಲ್ಲಿ 1.05 ಲಕ್ಷ ಹಾಗೂ ಗ್ರಾಮೀಣ ಭಾಗದಲ್ಲಿ 2.14 ಲಕ್ಷ ಸೇರಿದಂತೆ ಒಟ್ಟು ಸುಮಾರು 3.19 ಲಕ್ಷ ಕುಟುಂಬಗಳಿದ್ದು, ಎಲ್ಲ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಗಬೇಕು. ಯಾವುದೇ ಕುಟುಂಬಗಳು ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರ ವಹಿಸಿ ಸಮೀಕ್ಷೆ ನಡೆಸಬೇಕು ಎಂದರು.

1007057929

ಸಾಮಾನ್ಯವಾಗಿ ಎಲ್ಲ ವಾಸದ ಮನೆಗಳಿಗೆ ವಿದ್ಯುತ್ ಸಂಪರ್ಕ ಇರುವುದರಿಂದ ವಾಸದ ಮನೆಗಳ ಆರ್.ಆರ್. ಮೀಟರ್ ಆಧಾರದ ಮೆಲೆ ಮನೆಗಳನ್ನು ಗುರುತಿಸಿ, ಅಲ್ಲಿರುವ ಜನರ ಸಮೀಕ್ಷೆ ಮಾಡುವುದರಿಂದ ಯಾವುದೇ ಮನೆಗಳು ಸಮೀಕ್ಷಾ ವ್ಯಾಪ್ತಿಯಿಂದ ತಪ್ಪಿ ಹೋಗುವುದಿಲ್ಲ. ಹೀಗಾಗಿ ಮೊದಲ ಹಂತದಲ್ಲಿ ಜಿಲ್ಲೆಯಲ್ಲಿರುವ ಎಲ್ಲ ಮನೆಗಳ ವಿದ್ಯುತ್ ಮೀಟರ್ ರೀಡರ್‌ಗಳಿಂದ ಕುಟುಂಬಗಳ ಪಟ್ಟಿ ಮಾಡಿ, ಮನೆಗಳಿಗೆ ಜಿಯೋ ಟ್ಯಾಗಿಂಗ್‌ಗಾಗಿ ಸ್ಟಿಕ್ಕರ್‌ಗಳನ್ನು ಅಳವಡಿಸುವ ಕಾರ್ಯ ಆರಂಭಿಸಲಾಗಿದ್ದು, ಸೆಪ್ಟಂಬರ್ 10 ರ ಒಳಗಾಗಿ ಜಿಯೋ ಟ್ಯಾಗಿಂಗ್ ಮಾಡುವ ಕಾರ್ಯವನ್ನು ಮೆಸ್ಕಾಂ ಇಲಾಖೆಯವರು ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.

ಅನಧಿಕೃತ ಕಟ್ಟಡಗಳು, ಮತ್ತಿತರ ಪ್ರದೇಶಗಳಲ್ಲಿ ಆರ್. ಆರ್ ನಂಬರ್ ಹೊಂದಿದೇ ಇರುವ ಕುಟುಂಬಗಳು ಜಿಲ್ಲೆಯಲ್ಲಿವೆ. ಅಂತಹವರ ಕುಟುಂಬಗಳೂ ಕೂಡ ಸಮೀಕ್ಷೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು. ಹೀಗಾಗಿ ಅಂತಹ ಕುಟುಂಬಗಳ ಪ್ರತ್ಯೇಕ ಪಟ್ಟಿಯನ್ನು ತಯಾರಿಸಿ, ಸದರಿ ಮನೆಗಳಿಗೂ ಸಹ ಗ್ರಾಮ ಲೆಕ್ಕಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮೂಲಕ ಜಿಯೋ ಟ್ಯಾಗ್ ಮಾಡಲು ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವು, ಸೆಪ್ಟಂಬರ್ 22 ರಿಂದ ಆರಂಭಗೊಂಡು ಅಕ್ಟೋಬರ್ 07 ರೊಳಗೆ ಪೂರ್ಣಗೊಳಿಸುವ ಗುರಿಯನ್ನು ನಿಗದಿಪಡಿಸಲಾಗಿದೆ. ಸಮೀಕ್ಷಾ ಕಾರ್ಯವನ್ನು ಶಾಲಾ ಶಿಕ್ಷಕರು ಕೈಗೊಳ್ಳಲಿದ್ದು, ಸಮೀಕ್ಷೆಗಾಗಿಯೇ ವಿಶೇಷವಾದ ಆಪ್ ಅಭಿವೃದ್ಧಿಪಡಿಸಲಾಗಿದ್ದು, ಈ ಆಪ್ ಮೂಲಕವೇ ಸಮೀಕ್ಷೆ ನಡೆಸಲಾಗುವುದು ಎಂದರು.

ಜಿಲ್ಲೆಯಲ್ಲಿನ ಒಟ್ಟು ಕುಟುಂಬಗಳ ಸಂಖ್ಯೆಗೆ ಅನುಗುಣವಾಗಿ, ಪ್ರತಿ ಸಮೀಕ್ಷೆದಾರರು ಕನಿಷ್ಟ 80 ರಿಂದ 100 ಮನೆಗಳಿಗೆ ಖುದ್ದು ಭೇಟಿ ಮಾಡಿ ಸಮೀಕ್ಷೆ ಮಾಡಬೇಕಾಗುತ್ತದೆ ಎಂದ ಅವರು, ರಾಜ್ಯ ಮಟ್ಟದಲ್ಲಿ ಮಾಸ್ಟರ್ ಟ್ರೈನರ್ಸ್ ಗಳ ತರಬೇತಿಯು ಇದೆ ಸೆಪ್ಟೆಂಬರ್ 8 ರಂದು ನಡೆಯಲಿದ್ದು, ಜಿಲ್ಲಾ ಮಟ್ಟದಲ್ಲಿ ಸೆಪ್ಟೆಂಬರ್ 9 -11 ರ ವರೆಗೆ ತರಬೇತಿ ಆಯೋಜಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಜರುಗುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಸಂಬಂಧ ಸರ್ಕಾರದಿಂದ ನೀಡಲಾಗುವ ಸೂಚನೆಗಳು, ಮಾರ್ಗಸೂಚಿಗಳನ್ನು ಸಂಬಂಧಪಟ್ಟ ಅಧಿಕಾರಿ, ಸಿಬ್ಬಂದಿಗಳು ತಪ್ಪದೆ ಪಾಲಿಸುವುದರೊಂದಿಗೆ ಸಮೀಕ್ಷೆ ಕಾರ್ಯವನ್ನು ಯಶಸ್ವಿ ಗೊಳಿಸಬೇಕು ಎಂದರು.

ಸಮೀಕ್ಷೆ ಕಾರ್ಯವನ್ನು ಜಿಲ್ಲೆಯಲ್ಲಿ ಕೈಗೊಂಡಿರುವ ಬಗ್ಗೆ ಎನ್.ಎಸ್.ಎಸ್ ವಿದ್ಯಾರ್ಥಿಗಳನ್ನು ಬಳಸಿಕೊಂಡು ವ್ಯಾಪಕ ಪ್ರಚಾರ ನೀಡಬೇಕು ಎಂದ ಅವರು, ಸಮೀಕ್ಷೆ ಕಾರ್ಯಗಳ ಮೇಲುಸ್ತುವಾರಿ ಮಾಡಲು ಪ್ರತಿ ತಾಲೂಕಿಗೆ ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಸಹಾಯಕ ಕಮಿಷನರ್ ರಶ್ಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಹಾಕಪ್ಪ ಆರ್ ಲಮಾಣಿ, ವಿವಿಧ ಜಿಲ್ಲಾ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...