ಉಡುಪಿ | ಕ್ರೀಡಾಕೂಟಗಳಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವರ್ಧನೆ : ಜಿಲ್ಲಾಧಿಕಾರಿ

Date:

ಕ್ರೀಡಾಕೂಟಗಳು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವರ್ಧಿಸುತ್ತವೆ. ಒತ್ತಡ ಪೂರ್ಣ ಸನ್ನಿವೇಶಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಇಲಾಖೆಯು ಆಯೋಜಿಸಿರುವ ಕ್ರೀಡಾಕೂಟದಿಂದ ಪೊಲೀಸರ ದೈಹಿಕ ಆರೋಗ್ಯದ ಜೊತೆಗೆ ಮನಸ್ಸು ಕೂಡ ಲವಲವಿಕೆಯಿಂದೊಡಗೂಡಿ ಅವರ ಕಾರ್ಯಕ್ಷಮತೆ ಹೆಚ್ಚುತ್ತದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಹೇಳಿದರು.

- Advertisement -

ಅವರು ಇಂದು ನಗರದ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪೊಲೀಸ್ ಇಲಾಖೆಯ ವಾರ್ಷಿಕ ಕ್ರೀಡಾಕೂಟ- 2025 ಅನ್ನು ಉದ್ಘಾಟಿಸಿ ಮಾತನಾಡಿದರು. ಪೊಲೀಸ್ ಇಲಾಖೆಯು ಅಚ್ಚುಕಟ್ಟಾಗಿ ಮತ್ತು ಶಿಸ್ತುಬದ್ಧವಾಗಿ ಕ್ರೀಡಾಕೂಟವನ್ನು ಆಯೋಜಿಸಿದೆ. ಕ್ರೀಡಾಮನೋಭಾವನೆಯನ್ನು ಹೆಚ್ಚಿಸುವ ಇಂತಹ ಕ್ರೀಡಾಕೂಟಗಳು ನಿಯಮಿತವಾಗಿ ನಡೆಯುತ್ತಿದ್ದಾಗ ದೇಹ ಸುಸ್ಥಿತಿಯಲ್ಲಿರುತ್ತದೆ. ಪೊಲೀಸರು ಹಲವಾರು ದಿನಗಳವರೆಗೆ ನಿರಂತರವಾಗಿ ಕೆಲಸ ಮಾಡುವ ಸನ್ನಿವೇಶಗಳು ಎದುರಾಗುತ್ತವೆ. ಈ ಸಮಯದಲ್ಲಿ ದೈಹಿಕ ಹಾಗೂ ಮಾನಸಿಕವಾಗಿ ಫಿಟ್ ಆಗಿರಬೇಕಾಗುತ್ತದೆ. ನಿತ್ಯವೂ ಕ್ರೀಡೆ ಅಥವಾ ವ್ಯಾಯಾಮಗಳಲ್ಲಿ ತೊಡಗಿಸಿಕೊಂಡಾಗ ಫಿಟ್ನೆಸ್ ಅನ್ನು ಕಾಪಾಡಿಕೊಳ್ಳಬಹುದು. ಇತರ ಇಲಾಖೆಗಳು ಕೂಡ ಪೊಲೀಸ್ ಇಲಾಖೆಯಿಂದ ಸ್ಪೂರ್ತಿ ಪಡೆದು ಕ್ರೀಡಾಕೂಟಗಳನ್ನು ಆಯೋಜಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...
ರೆದಸಸಸ

ಉದ್ಘಾಟನೆಗೂ ಮುನ್ನ ಪೊಲೀಸ್ ಇಲಾಖೆಯ ವಿವಿಧ ವಿಭಾಗದ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಅತಿಥಿಗಳು ಸಾಮೂಹಿಕ ಗೌರವ ರಕ್ಷೆ ಸ್ವೀಕರಿಸಿದ ಬಳಿಕ ಕ್ರೀಡಾ ಜ್ಯೋತಿ ಪ್ರದರ್ಶನ ನಡೆಯಿತು. ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಸ್ವಾಗತಿಸಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದಲ್ಲಿ ಪರೀಕ್ಷಾ ಅಕ್ರಮ: KSOU ಕೇಂದ್ರದಲ್ಲಿ ಪುಸ್ತಕ, ಮೊಬೈಲ್ ಬಳಸಿ ‘ಕಾಪಿ’ ಮಾಡಲು ಅವಕಾಶ; ವಿಡಿಯೋ ವೈರಲ್

ಶಿವಮೊಗ್ಗದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಪ್ರಾದೇಶಿಕ ಪರೀಕ್ಷಾ ಕೇಂದ್ರದಲ್ಲಿ...

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗಣಂಗೂರು ಟೋಲ್‌ನಲ್ಲಿ ರೈತರಿಂದ ಹೆದ್ದಾರಿ ತಡೆ

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವುದು, ಸಕ್ಕರೆ ಬೆಲೆ ಪರಿಷ್ಕರಣೆ, ಕಳೆದ ಸಾಲಿನ...

ಕರ್ನಾಟಕ ಪಶ್ಚಿಮ ಪದವೀಧರ ಚುನಾವಣೆ: ಜಿಲ್ಲೆಗಳಲ್ಲಿ  ಶೇ.75.62 ರಷ್ಟು ಮತದಾನ

"ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರ ವ್ಯಾಪ್ತಿಯ ಧಾರವಾಡ, ಹಾವೇರಿ, ಗದಗ ಮತ್ತು...

ಗದಗ | ಇಂದು ಅಮರ ಮಹಾವೀರ ಕವನ ಸಂಕಲನ ಲೋಕಾರ್ಪಣೆ

ಅಮರ ಮಾಹಾವೀರ ಕವನ ಸಂಕಲನ ಲೋಕಾರ್ಪಣೆ ಸಮಾರಂಭದಲ್ಲಿ ಕವನ ಸ್ಪರ್ಧೆಗಳಲ್ಲಿನ ವಿಜೇತರಿಗೆ...