ಉಡುಪಿ | ಪೌರ ಕಾರ್ಮಿಕರಿಗೆ ಕಾಲಮಿತಿಯಲ್ಲಿ ವೇತನ ನೀಡಲು ಜಿಲ್ಲಾಧಿಕಾರಿ ಸೂಚನೆ

Date:

ಉಡುಪಿ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ವೇತನ ಸೇರಿದಂತೆ ಮತ್ತಿತರ ಸೌಲಭ್ಯಗಳು ವಿಳಂಬವಿಲ್ಲದೇ ಪ್ರತಿ ತಿಂಗಳು ಪಾವತಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿಯ ನಾಲ್ಕನೇ ತ್ರೆöÊಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಲೋಡರ್, ಕ್ಲೀರ‍್ಸ್ ಹಾಗೂ ವಾಹನ ಚಾಲಕರುಗಳಿಗೆ ಪ್ರತಿ ಮಾಹೆಯ ವೇತನವನ್ನು ವಿಳಂಬವಿಲ್ಲದೇ ಕಾಲಕಾಲಕ್ಕೆ ಪಾವತಿಸಬೇಕು ಹಾಗೂ ಅವರುಗಳಿಗೆ ಪಿ.ಎಫ್ ಹಾಗೂ ಇ.ಎಸ್.ಐ ಕಟಾವಣೆ ಆಗುತ್ತಿರುವ ಬಗ್ಗೆ ಖಾತ್ರಿ ಪಡಿಸಿಕೊಂಡು ಹೊರ ಗುತ್ತಿಗೆದಾರರಿಗೆ ಮಾಸಿಕ ಬಿಲ್‌ಗಳನ್ನು ಪಾವತಿಸಬೇಕೆಂದು ತಿಳಿಸಿದರು.

ಸಫಾಯಿ ಕರ್ಮಚಾರಿ ಹಾಗೂ ಗುರುತಿಸಲ್ಪಟ್ಟ ಮಾನ್ಯುಯಲ್ ಸ್ಕ್ಯಾವೆಂಜರ್‌ಗಳು ಹಾಗೂ ಮೃತಪಟ್ಟ ಮಾನ್ಯುಯಲ್ ಸ್ಕ್ಯಾವೆಂಜರ್‌ಗಳ ಕುಟುಂಬದ ಅವಲಂಬಿತರಿಗೆ ಗುರುತಿನ ಚೀಟಿ ನೀಡುವ ಜೊತೆಗೆ ಸರಕಾರದ ಸರಕಾರದ ವಿವಿಧ ಸೌಲಭ್ಯಗಳು ಸೇರಿದಂತೆ ಪುನರ್ವಸತಿ ಯೋಜನೆಗಳನ್ನು ಕಲ್ಪಿಸಬೇಕು ಎಂದರು.

ಸಫಾಯಿ ಕರ್ಮಚಾರಿ ಸಭೆ 1

ಮಾನ್ಯುಯಲ್ ಸ್ಕ್ಯಾವೆಂಜರ್ಸ್ ಪದ್ಧತಿಯು ಈಗಾಗಲೇ ದೇಶಾದ್ಯಂತ ನಿಷೇಧವಿದೆ. ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾನ್ಯುಯಲ್ ಸ್ಕ್ಯಾವೆಂಜರ್ ಅನ್ನು ನೇಮಿಸಿಕೊಂಡು ಕೆಲಸ ಕಾರ್ಯವನ್ನು ಮಾಡಿಸಿದ್ದಲ್ಲಿ ಅಂತಹವರ ಮೇಲೆ ಕಾನೂನಿನ ಕ್ರಮ ಕೈಗೊಳ್ಳಬೇಕು ಎಂದರು.

ಮಾನ್ಯುಯಲ್ ಸ್ಕ್ಯಾವೆಂಜರ್ ವೃತ್ತಿ ನಿಷೇಧ ವಿರುವ ಹಿನ್ನೆಲೆ, ನಗರ ಹಾಗೂ ಗ್ರಾಮೀಣ ಪ್ರದೇಶ ವ್ಯಾಪ್ತಿಗಳಲ್ಲಿ ಕಡ್ಡಾಯವಾಗಿ ಸಕ್ಕಿಂಗ್ ಹಾಗೂ ಜೆಟ್ಟಿಂಗ್ ಯಂತ್ರಗಳ ಬಳಕೆಯೊಂದಿಗೆ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಬೇಕು. ಮಲ ತ್ಯಾಜ್ಯ ನಿರ್ವಹಣೆಯನ್ನು ವೈಜ್ಞಾನಿಕ ರೀತಿಯಲ್ಲಿ ಎಫ್.ಎಸ್.ಎಂ.ಎಸ್ ಘಟಕಗಳಲ್ಲಿ ವಿಲೇವಾರಿ ಮಾಡಬೇಕು ಎಂದ ಅವರು, ಜಿಲ್ಲೆಯಲ್ಲಿ ಕೈಗೊಂಡಿರುವ ಎಫ್.ಎಸ್.ಎಂ.ಎಸ್ ಘಟಕ ಯೋಜನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿ ಅವುಗಳ ಬಳಕೆಯಾಗಲು ಸ್ಥಳೀಯ ಸಂಸ್ಥೆಗಳು ಕ್ರಮವಹಿಸಬೇಕು ಎಂದರು.

ಪೌರ ಕಾರ್ಮಿಕರಿಗೆ ಉತ್ತಮ ಗುಣಮಟ್ಟದ ಆಹಾರವನ್ನು ಒದಗಿಸಬೇಕು ಎಂದ ಅವರು, ದೈನಂದಿನ ಸ್ವಚ್ಛತಾ ಕಾರ್ಯದ ಕರ್ತವ್ಯ ನಿರ್ವಹಿಸುವಾಗ ತಪ್ಪದೆ ಸುರಕ್ಷತಾ ಪರಿಕರಗಳನ್ನು ಬಳಸಿ ಕರ್ತವ್ಯವನ್ನು ನಿರ್ವಹಿಸಬೇಕು. ಇದರಿಂದಾಗಿ ಉತ್ತಮ ಆರೋಗ್ಯವನ್ನು ಹೊಂದಲು ಸಾಧ್ಯ. ಈ ಬಗ್ಗೆ ಮೇಲುಸ್ತುವಾರಿಯನ್ನು ಅಧಿಕಾರಿಗಳು ವಹಿಸಬೇಕು ಎಂದರು.

ಸಫಾಯಿ ಕರ್ಮಚಾರಿಗಳಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಹಾಗೂ ಮಾಸ್ಟರ್ ಹೆಲ್ತ್ ಚೆಕ್‌ಅಪ್ ಅನ್ನು ಆಗಿಂದಾಗ್ಗೆ ಮಾಡಿಸಬೇಕು. ಅಗತ್ಯವಿದ್ದಲ್ಲಿ ಉನ್ನತ ಚಿಕಿತ್ಸೆಗಳನ್ನು ಸಹ ಕೊಡಿಸಬೇಕು ಎಂದ ಅವರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಮಾನ್ಯುಯಲ್ ಸ್ಕ್ಯಾವೆಂಜರ್ ಹಾಗೂ ಪೌರ ಕಾರ್ಮಿಕರ ಮಕ್ಕಳಿಗೆ ಶೇ. 5 ರ ಪ್ರವೇಶ ನೀಡಲು ಕಾರ್ಯಪ್ರವೃತ್ತರಾಗಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ, ಸಹಾಯಕ ಕಮೀಷನರ್ ರಶ್ಮಿ ಎಸ್.ಆರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣ ಸ್ವಾಮಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...