ಉಡುಪಿ | ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ಯಾಸ್ ವಿತರಣಾ ಸಮಸ್ಯೆಗಳನ್ನು ಕೂಡಲೇ ಪರಿಹರಿಸಿ: ಸ್ವರೂಪ ಟಿ. ಕೆ

Date:

ಉಡುಪಿ ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ರಾಹಕರಿಗೆ ಸಿ.ಎನ್.ಜಿ ಗ್ಯಾಸ್ ವಿತರಣಾ ಕೇಂದ್ರಗಳಲ್ಲಿ ವಾಹನಗಳು ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ಉಂಟಾಗಿದೆ. ಈ ಸಮಸ್ಯೆಯನ್ನು ಕೂಡಲೇ ಪರಿಹರಿಸಿ ಸುಗಮವಾಗಿ ಗ್ಯಾಸ್ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಸೂಚನೆ ನೀಡಿದರು.

- Advertisement -

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಿ.ಎನ್.ಜಿ ಗ್ಯಾಸ್ ಸರಬರಾಜಿನಲ್ಲಿ ಉಂಟಾಗುವ ಸಮಸ್ಯೆಯನ್ನು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಜಿಲ್ಲೆಯಲ್ಲಿ ಸಿ.ಎನ್. ಜಿ ಗ್ಯಾಸ್ ಬಳಸಿ ವಾಹನ ಚಾಲನೆ ಮಾಡುತ್ತಿರುವ ಆಟೋ ಚಾಲಕರು ಸೇರಿದಂತೆ ಮತ್ತಿತರರ ವಾಹನಗಳಿಗೆ ಗ್ಯಾಸ್ ತುಂಬಿಸಲು ಬಂಕ್ ಗಳ ಮುಂದೆ ಎರಡು-ಮೂರು ಗಂಟೆಗಿಂತ ಹೆಚ್ಚು ಕಾಲ ಕಾಯುವ ಪರಿಸ್ಥಿತಿ ಉಂಟಾಗಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುತ್ತಿದೆ. ಇದನ್ನು ಕೂಡಲೇ ಗೈಲ್ ಗ್ಯಾಸ್ ಕಂಪನಿ ಹಾಗೂ ಅದಾನಿ ಕಂಪನಿಯವರ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಿ ಗ್ಯಾಸ್ ವಿತರಣೆಯಲ್ಲಿ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

1009373991

ಜಿಲ್ಲೆಯಲ್ಲಿ ಸಿ.ಎನ್.ಜಿ ಬಳಸುವ ವಾಹನಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಗ್ಯಾಸ್ ವಿತರಣೆಗೆ ಅಗತ್ಯವಿರುವ ಇಲ್ಲಾ ರೀತಿಯ ಕಾರ್ಯ ಚಟುವಟಿಕೆ ಕೈಗೊಂಡು ಬೇಡಿಕೆಗೆ ಅನುಗುಣವಾಗಿ ಪೂರೈಸಬೇಕು ಎಂದು ಅದಾನಿ ಕಂಪನಿ ಪ್ರತಿನಿಧಿಗೆ ಸೂಚಿಸಿದರು.

ಮಂಗಳೂರಿನ ಗ್ಯಾಸ್ ಡಿಪೋದಲ್ಲಿ ಟ್ಯಾಂಕರ್‌ಗಳಿಗೆ ಗ್ಯಾಸ್ ತುಂಬಿಸುವಾಗ ಉಡುಪಿ ಜಿಲ್ಲೆಯ ವಾಹನಗಳಿಗೆ ಆದ್ಯತೆ ನೀಡಿ ಸರತಿ ಸಾಲಿನ ಪ್ರಕಾರ ಗ್ಯಾಸ್ ತುಂಬಿಸಲು ಆದ್ಯತೆ ನೀಡಬೇಕು. ಸಾಧ್ಯವಾದಲ್ಲಿ ನಿಗದಿತ ವೇಳೆಯನ್ನು ನೀಡಿ ಗ್ಯಾಸ್ ಟ್ಯಾಂಕರ್‌ಗಳಿಗೆ ಭರ್ತಿ ಮಾಡಲು ಅವಕಾಶ ಮಾಡಿಕೊಡಬೇಕು ಎಂದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, ಜಿಲ್ಲೆಯಲ್ಲಿ ಸಿ. ಎನ್.ಜಿ ಗ್ಯಾಸ್ ಅಸಮರ್ಪಕ ವಿತರಣೆಯಿಂದಾಗಿ ಆಟೋ ಸೇರಿದಂತೆ ಮತ್ತಿತರ ವಾಹನ ಚಾಲಕರಿಗೆ ಗ್ಯಾಸ್ ತುಂಬಿಸಲು ದಿನಗಟ್ಟಲೆ ನಿಲ್ಲುವ ಪರಿಸ್ಥಿತಿ ಉಂಟಾಗಿದೆ. ಇದರಿಂದ ಕೆಲವರ ವೃತ್ತಿ ಜೀವನದಲ್ಲಿ ತೊಂದರೆ ಉಂಟಾಗುತ್ತಿದೆ. ಸಮರ್ಪಕ ವಿತರಣೆಗೆ ಮುಂದಾಗಬೇಕು ಎಂದು ತಿಳಿಸಿದರು.

ಕಳೆದ ಸಭೆಯಲ್ಲಿ ಅದಾನಿ ಕಂಪನಿಯವರು ತಮ್ಮದೇ ಸ್ವಂತ ಗ್ಯಾಸ್ ತುಂಬುವ ಡಿಪೋ ವನ್ನು ಶೀಘ್ರವೇ ಪ್ರಾರಂಭಿಸುವುದಾಗಿ ತಿಳಿಸಿದ್ದರು. ಆದರೆ ಇದುವರೆಗೂ ಆಗಿಲ್ಲ. ಇದನ್ನು ಕೂಡಲೇ ಪ್ರಾರಂಭಿಸಲು ಮುಂದಾಗಿ ಜನರಿಗೆ ಗ್ಯಾಸ್ ಸರಬರಾಜಿನಲ್ಲಿ ವ್ಯತ್ಯಾಯ ಉಂಟಾಗದಂತೆ ನೋಡಿಕೊಳ್ಳಬೇಕು ಎಂದ ಅವರು, ಪ್ರಸ್ತುತ 17 ಗ್ಯಾಸ್ ಟ್ಯಾಂಕರ್ ವಾಹನಗಳು ಬಳಕೆ ಮಾಡಿ ಮಂಗಳೂರಿನಿಂದ ತರಲಾಗುತ್ತಿದೆ. ಈ ವಾಹನಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಿದ್ದಲ್ಲಿ ಸಿ.ಎನ್.ಸಿ ಸುಗಮ ಗ್ಯಾಸ್ ಸರಬರಾಜಿಗೆ ಅನುಕೂಲವಾಗಲಿದೆ. ಇದಕ್ಕೆ ಅದಾನಿ ಕಂಪನಿಯವರು ಒತ್ತು ನೀಡಬೇಕು ಎಂದರು.

ಜಿಲ್ಲೆಯ ಸಿ.ಎನ್.ಜಿ ಗ್ಯಾಸ್ ವಿತರಣಾ ಘಟಕಗಳಲ್ಲಿ ಗ್ಯಾಸ್ ತುಂಬಿಸಲು ವಾಹನಗಳು ಗಂಟೆಗಟ್ಟಲೆ ನಿಂತು ತುಂಬಿಸುವ ಅನಿವಾರ್ಯ ಉಂಟಾಗಿದೆ ಹಾಗೂ ಗ್ಯಾಸ್ ತುಂಬುವಾಗ ಒತ್ತಡದ ಕೊರತೆಯಿಂದ ಸಮಸ್ಯೆ ಉಂಟಾಗುತ್ತಿದೆ ಎಂದು ವಾಹನ ಚಾಲಕರು ತಮ್ಮ ಅಹವಾಲು ತೋಡಿಕೊಂಡರು.

ಸಭೆಯಲ್ಲಿ ಶಾಸಕ ಕುಂದಾಪುರ ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ, ಗೈಲ್ ಗ್ಯಾಸ್ ಹಾಗೂ ಅದಾನಿ ಗ್ಯಾಸ್ ಕಂಪನಿ ಯ ಮುಖ್ಯಸ್ಥರುಗಳು, ಆಟೋ ರಿಕ್ಷಾ ಚಾಲಕರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಲೆನಾಡು-ಕರಾವಳಿ ಕೃಷಿ ವಲಯವಾಗಿ ಘೋಷಿಸಬೇಕು; ಸುಧೀರ್ ಕುಮಾರ್ ಮುರೊಳ್ಳಿ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಉಡುಪಿ | ಅನುಚಿತ ವರ್ತನೆಗೆ ಸಂತ್ರಸ್ತರನ್ನು ಹೊಣೆ ಮಾಡಲಾಗದು : ಡಾ. ದಿವ್ಯಾ ರಾಣಿ

ಉಡುಪು, ಸ್ನೇಹ ಅಥವಾ ಸಾಮಾಜಿಕ ಜಾಲತಾಣಗಳ ಬಳಕೆಯಂತಹ ವೈಯಕ್ತಿಕ ಆಯ್ಕೆಗಳು ಯಾವುದೇ...

ಭವಿಷ್ಯದ ಸಮಾಜವನ್ನು ರೂಪಿಸುವ ವಿದ್ಯಾರ್ಥಿ ಸಂಘಗಳ ಅಗತ್ಯವಿದೆ : ಶ್ರೀವರ್ಮ ಅಜ್ರಿ ಎಂ

ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನೂ ಬೆಳೆಸುವ ಕಾಲೇಜು ವಿದ್ಯಾರ್ಥಿ ಸಂಘಗಳು...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...