ಉಡುಪಿ | ಯುವ ಜನತೆ ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ಪಣ ತೊಡಬೇಕು : ಜಿಲ್ಲಾಧಿಕಾರಿ ಸ್ವರೂಪ ಟಿ ಕೆ

Date:

ಯುವಕರು ದೇಶದ ಭವಿಷ್ಯ. ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ದೇಶವನ್ನು ಮುನ್ನಡೆಸುವ ಯುವಜನರು ಮಾದಕ ವಸ್ತುಗಳಿಂದ ದೂರವಿದ್ದು ಉತ್ತಮ ಆರೋಗ್ಯ ಹೊಂದಿ ಭವಿಷ್ಯದಲ್ಲಿ ಸದೃಢ ಭಾರತ ನಿರ್ಮಾಣಕ್ಕೆ
ಮುಂದಾಗಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು.

- Advertisement -

ಅವರು ಇಂದು ಕುಂಜಿಬೆಟ್ಟುವಿನ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ತಂಬಾಕು ಮುಕ್ತ ಯುವ ಅಭಿಯಾನ 3.0 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ತಂಬಾಕು ಸೇವನೆ ಒಂದು ಸಾಮಾಜಿಕ ಪಿಡುಗು. ಸರಕಾರದ ಮುಂದೆ ತಂಬಾಕು ಸೇವನೆಯನ್ನು ನಿಷೇಧಿಸುವ ಸಮಸ್ಯೆ ಒಂದೆಡೆಯಾದರೆ, ಯುವ ಜನತೆಯನ್ನು ತಂಬಾಕು ಚಟದಿಂದ ದೂರ ಇರಿಸುವ ಕಾರ್ಯವನ್ನು ನಿಭಾಯಿಸುವ ಸಮಸ್ಯೆ ಇನ್ನೊಂದೆಡೆ. ತಂಬಾಕು ಸೇವನೆಯಿಂದ ದೈಹಿಕ ಮತ್ತು ಮಾನಸಿಕವಾಗಿ ತೀವ್ರವಾದ ದುಷ್ಪರಿಣಾಮಗಳಾಗುತ್ತವೆ. ಸಮಾಜದಲ್ಲಿ ಇದೊಂದು ಗಂಭೀರ ಸಮಸ್ಯೆ ಆಗಿದ್ದು ಸರಕಾರವು ನಾನಾ ಕಾರ್ಯಕ್ರಮಗಳನ್ನು ಕಾನೂನಾತ್ಮಕವಾಗಿ ಹಮ್ಮಿಕೊಳ್ಳುತ್ತಿದೆ. ರಾಜ್ಯದ ಮೂವತ್ತು ಜಿಲ್ಲೆಗಳಲ್ಲಿಯೂ ತಲಾ ಒಂದು ಗ್ರಾಮವನ್ನು ತಂಬಾಕು ಮುಕ್ತ ಗ್ರಾಮವಾಗಿಸುವ ನಿಟ್ಟಿನಲ್ಲಿ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ತಂಬಾಕು ದುಷ್ಪರಿಣಾಮಗಳ ಬಗ್ಗೆ ಜಾಗೃತಿ
ಇದ್ದಾಗ ಯುವಕರು ಆ ದಾರಿಯಲ್ಲಿ ಸಾಗುವುದಿಲ್ಲ ಎಂದರು.

ತಂಬಾಕು ಜಾಹೀರಾತುಗಳ ಪ್ರದರ್ಶನಕ್ಕೆ ಕಡಿವಾಣ ಹಾಕಲಾಗಿದೆ. ಶಾಲಾ ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ನಿಷೇಧಿಸಲಾಗಿದೆ. ತಂಬಾಕು ನಿಯಂತ್ರಣ ಕೇವಲ ಸರಕಾರದಿಂದ ಸಾಧ್ಯವಿಲ್ಲ. ಈ ಪಿಡುಗನ್ನು ಆರಂಭದಲ್ಲೇ ಹತ್ತಿಕ್ಕಲು ಸರಕಾರ ಎಲ್ಲ ರೀತಿಯಲ್ಲೂ ಪ್ರಯತ್ನಿಸುತ್ತಿದೆ. ಅನಧಿಕೃತವಾಗಿ ತಂಬಾಕು ಮಾರುವ ಅಂಗಡಿಗಳ ಮೇಲೆ ನಿರಂತರವಾಗಿ ದಾಳಿ ಮಾಡಲಾಗುತ್ತಿದೆ. ಸರಕಾರದೊಂದಿಗೆ ಯುವಕರು ಈ ಕಾರ್ಯದಲ್ಲಿ ಕೈ ಜೋಡಿಸಬೇಕು. ತಮ್ಮ ಸ್ನೇಹಿತರು, ಕುಟುಂಬದವರು, ನೆರಮನೆಯವರು ತಂಬಾಕು ಚಟಕ್ಕೆ ಬಲಿಯಾಗದಂತೆ ಅವರ ಮನವೊಲಿಸಿ ಸ್ವಸ್ಥ ಸಮಾಜ ನಿರ್ಮಾಣ ಮಾಡಬೇಕು ಎಂದರು.

ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ ನಾಗರತ್ನ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆ.ಎಂ.ಸಿ ಪ್ರಾಧ್ಯಾಪಕ ಡಾ ಮುರಳೀಧರ್ ಕುಲಕರ್ಣಿ ತಂಬಾಕು ಮುಕ್ತ ಯುವ ಅಭಿಯಾನ ಕುರಿತು ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ, ಜಿಲ್ಲೆ ಸಲಹೆಗಾರ್ತಿ ಮಂಜುಳಾ ಶೆಟ್ಟಿ, ಕಾಲೇಜಿನ ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲೆ ಆಶಾ ಕುಮಾರಿ ಸ್ವಾಗತಿಸಿದರು. ಉಪನ್ಯಾಸಕ ರಾಜೇಶ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೌಲಾನಾ ಅಬುಲ್ ಕಲಾಂ ಅಜಾದ್ ಜಯಂತಿ ಆಚರಣೆ

ದೇಶದ ಮೊದಲ ಶಿಕ್ಷಣ ಸಚಿವ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಬುಲ್...

ಬಾಗಲಕೋಟೆ |ಭೋವಿ ಸಮುದಾಯದ ಆರ್ಥಿಕ ಸಬಲೀಕರಣಕ್ಕೆ ವಿವಿಧ ಯೋಜನೆ: ಅರ್ಜಿ ಆಹ್ವಾನ

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ಭೋವಿ ಸಮುದಾಯದ ಆರ್ಥಿಕ...

ಶಿರಸಿ | ಬನವಾಸಿಯಲ್ಲಿ ಸರಣಿ ಮನೆ ಕಳ್ಳತನ: 20 ಗ್ರಾಂ ಚಿನ್ನಾಭರಣ, ₹56 ಸಾವಿರ ನಗದು ಕಳವು

ಶಿರಸಿ: ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಅಂಗನವಾಡಿ ಕಾರ್ಯಕರ್ತೆ ಮನೆ ಹಾಗೂ...

ರಾಯಚೂರು | ಪಡಿತರ ಚೀಟಿ ಇ-ಕೆವೈಸಿ ನ.30 ಕೊನೆ ದಿನ; ಜಿಲ್ಲೆಯಲ್ಲಿ 1.63 ಲಕ್ಷ ಫಲಾನುಭವಿಗಳ ಬಾಕಿ

ಜಿಲ್ಲೆಯ ಎಲ್ಲ ಪಡಿತರ ಚೀಟಿಗಳಲ್ಲಿನ ಸದಸ್ಯರು ಪ್ರತಿ ಐದು ವರ್ಷಗಳಿಗೊಮ್ಮೆ ಇ-ಕೆವೈಸಿ...