ಉಡುಪಿ | ಪ್ರವಾಸೋದ್ಯಮ ಉತ್ತೇಜನದಿಂದ ಸ್ಥಳೀಯರಿಗೆ ಉದ್ಯೋಗಾವಕಾಶ

Date:

Advertisements

ಉಡುಪಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಜಿಲ್ಲೆಯ ಪ್ರವಾಸಿ ತಾಣಗಳ ಸೌಂದರ್ಯವನ್ನು ಸವಿಯಲು ಅನುಕೂಲವಾಗುವಂತೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ
ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಜಿಲ್ಲೆಯ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಈಗಾಗಲೇ ಜಾಗಗಳನ್ನು ಗುರುತಿಸಿರುವ ಕೋಡಿ ಕುಂದಾಪುರ ಬೀಚ್, ಕೋಡಿ ಕನ್ಯಾನ ಬೀಚ್ ಹಾಗೂ ತ್ರಾಸಿ-ಮರವಂತೆ ಬೀಚ್ ಮಾಸ್ಟರ್ ಪ್ಲ್ಯಾನ್ ಅನ್ನು ಆಧುನಿಕ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ತಯಾರಿಸಬೇಕು. ಮಟ್ಟುವಿನಿಂದ ಪಡುಬಿದ್ರೆ ಕಡಲ ತೀರದವರೆಗೆ 10 ಕೋಟಿ ವೆಚ್ಚದಲ್ಲಿ ಸೈಕಲ್‌ಟ್ರಾಕ್ ನಿರ್ಮಾಣ ಮಾಡುವ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದ ಅವರು, ಜಿಲ್ಲೆಯ ಪ್ರವಾಸೋದ್ಯಮ ಉತ್ತೇಜನದಿಂದ ಸ್ಥಳೀಯರಿಗೆ ಉದ್ಯೋಗಾವಕಾಶಗಳು ಹೆಚ್ಚುತ್ತವೆ. ಇದಕ್ಕೆ ಒತ್ತು ನೀಡಬೇಕು ಎಂದರು.

Tourism Meet 4

ಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ ಪ್ರವಾಸಿಗರಿಗೆ ಕ್ಷಿಪ್ರಗತಿಯಲ್ಲಿ ಮಾಹಿತಿ ದೊರೆಯಲು ಅನುಕೂಲವಾಗುವಂತೆ ಪ್ರವಾಸೋದ್ಯಮ ಇಲಾಖೆಯ ವೆಬ್‌ಸೈಟ್‌ನಲ್ಲಿ ಎಲ್ಲಾ ರೀತಿಯ ಮಾಹಿತಿಗಳನ್ನು, ಪ್ರವಾಸಿ ತಾಣಗಳ ಉತ್ತಮ ವಿಡಿಯೋ ಮತ್ತು ಛಾಯಾಚಿತ್ರಗಳನ್ನು ಅಪ್ಲೋಡ್ ಮಾಡುವಂತೆ ಸೂಚನೆ ನೀಡಿದರು. ಕಡಲ ತೀರದಲ್ಲಿ ಯಾವುದೇ ರೀತಿಯ ಬೀಚ್‌ಗಳಲ್ಲಿ ಜಲ ಸಾಹಸ ಕ್ರೀಡಾ ಚಟುವಟಿಕೆ, ಅಡ್ವೆಂಚರ್ಸ್ ಗೇಮ್ಸ್ಗಳು ಸೇರಿದಂತೆ ಬೀಚ್ ನಿರ್ವಹಣೆಗಳನ್ನು ನೀಡುವಾಗ ಪ್ರತಿಯೊಂದು ಚಟುವಟಿಕೆಗಳಿಗೂ ಟೆಂಡರ್ ಪ್ರಕ್ರಿಯೆಗೊಳಿಸಿ, ನೀಡಬೇಕು ಎಂದು ಸೂಚನೆ ನೀಡಿದ ಅವರು, ಜಿಲ್ಲೆಯಲ್ಲಿ ಪ್ರವಾಸಿ ತಾಣಗಳ ನಿರ್ವಹಣೆಯನ್ನು ಗುತ್ತಿಗೆ ಪಡೆದಿರುವವರು, ನಿರ್ವಹಣೆ ಒಪ್ಪಂದದಲ್ಲಿನ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿರುವ ಬಗ್ಗೆ ಗಮನಹರಿಸಬೇಕು ಎಂದರು. ಪ್ರವಾಸೋದ್ಯಮ ಇಲಾಖೆಯ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅಗತ್ಯವಿರುವ ಯೋಜನೆಗಳನ್ನು ರೂಪಿಸಲು ವಿವಿಧ ಖಾಸಗಿ ಸಂಸ್ಥೆಗಳ ಸಹಕಾರದೊಂದಿಗೆ ಅಭಿವೃದ್ಧಿ ಯೋಜನೆಗಳನ್ನು ಸಿದ್ಧಪಡಿಸುವಂತೆ ತಿಳಿಸಿದರು. ಜಿಲ್ಲೆಯ ವಿವಿಧ ಕಡಲ ತೀರಕ್ಕೆ ಆಗಮಿಸುವ ಪ್ರವಾಸಿಗರಿಗೆ ಸ್ಥಳೀಯ ಕಡಲಿನ ಆಳ ಸೇರಿದಂತೆ ಸಮುದ್ರದ ಪ್ರಕ್ಷುಬ್ದ ವಾತಾವರಣದ ಬಗ್ಗೆ ಮಾಹಿತಿಯ ಕೊರತೆಯಿಂದಾಗಿ ಅಪಘಾತಗಳ ಸುಳಿಯಲ್ಲಿ ಸಿಲುಕಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆಗಳು ಇರುತ್ತವೆ. ಈ ಹಿನ್ನೆಲೆ ಬೀಚ್‌ಗಳಲ್ಲಿ ಜೀವ ರಕ್ಷಕ ಸಿಬ್ಬಂದಿಗಳನ್ನು ನಿಯೋಜಿಸುವುದು ಒಳಿತು ಎಂದರು.

ಶಾಸಕರಾದ ಯಶ್‌ಪಾಲ್ ಎ ಸುವರ್ಣ ಮಾತನಾಡಿ, ಮಲ್ಪೆ ಬೀಚ್‌ಗೆ ರಾಜ್ಯದ ವಿವಿಧ ಮೂಲೆಗಳಿಂದ ದಿನದಿಂದ ದಿನಕ್ಕೆ ಹೆಚ್ಚು ಹೆಚ್ಚು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಅಲ್ಲಿನ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಬೀದಿ ದೀಪಗಳ ನಿರ್ವಹಣೆ ಮಾಡಬೇಕು. ಕೆಲವು ದಿನಗಳಿಂದ ಬೀದಿ ದೀಪಗಳ ನಿರ್ವಹಣೆ ಸರಿಯಿಲ್ಲದೇ ಪ್ರವಾಸಿಗರರಿಗೆ ಅನಾನುಕೂಲತೆ ಉಂಟಾಗುತ್ತಿದೆ. ಹೀಗಾಗದಂತೆ ನೋಡಿಕೊಳ್ಳಬೇಕಿದೆ ಎಂದರು.

ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಸಮುದ್ರದ ಹಿನ್ನಿರಿನಲ್ಲಿಯೂ ಪ್ರವಾಸೋದ್ಯಮ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ರೀತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಲ್ಲಿ ಪ್ರವಾಸಿಗರಿಗೆ ಅನುಕೂಲವಾಗುತ್ತದೆ. ಇದಕ್ಕೆ ಒತ್ತು ನೀಡಬೇಕು. ಕುಂದಾಪುರದ ಕೋಡಿ ಕನ್ಯಾನ ಹಾಗೂ ಬಬ್ಬು ಕುದ್ರು ಐಲ್ಯಾಂಡ್‌ನಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವಂತೆ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳಬೇಕು ಎಂದರು. ಸಭೆಯಲ್ಲಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಸಹಾಯಕ ಕಮಿಷನರ್ ರಶ್ಮಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ನಿಧೀಶ ಕೆ.ಜೆ, ವಿವಿಧ
ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X