ಉಡುಪಿ | ಪರಿಶಿಷ್ಟ ಜಾತಿಯ ಒಳಮೀಸಲಾತಿ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಿ : ಜಿಲ್ಲಾಧಿಕಾರಿ

Date:

ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮೀಕ್ಷಾ ಕಾರ್ಯವನ್ನು ಗಣತಿದಾರರು ವೈಜ್ಞಾನಿಕ ಹಾಗೂ ಸಮರ್ಪಕವಾಗಿ ನಿರ್ವಹಿಸುವುದರೊಂದಿಗೆ ಯಾರೊಬ್ಬರೂ ಕೂಡ ಸಮೀಕ್ಷೆಯಿಂದ ಬಿಟ್ಟುಹೋಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

- Advertisement -

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ಇವರ ಸಹಯೋಗದಲ್ಲಿ ಪರಿಶಿಷ್ಟ ಜಾತಿ/ಉಪಜಾತಿ ಸಮಗ್ರ ಸಮೀಕ್ಷೆಗೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಮಾಸ್ಟರ್ ಟ್ರೆನರ್ಸ್ ಗಳಗೆ ಆಯೋಜಿಸಲಾದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ, ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತಂತೆ ನ್ಯಾಯಮೂರ್ತಿ ಹೆಚ್.ಎನ್, ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಮೀಕ್ಷೆ ನಡೆಸುವ ಸಂಬಂಧ ಮೊಬೈಲ್ ಆಪ್ ಮೂಲಕ ಜಿಲ್ಲೆಯಲ್ಲಿ ಮೂರು ಹಂತಗಳಲ್ಲಿ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು, ಇದಕ್ಕಾಗಿ ತಾಲೂಕು ಮಟ್ಟದ ಮಾಸ್ಟರ್ ಟ್ರೆನರ್ಸ್ ಗಳಾದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರುಗಳಿಗೆ ತರಬೇತಿ ಹಮ್ಮಿಕೊಳ್ಳಲಾಗಿದೆ. ತರಬೇತಿ ಪಡೆದ ಗಣತಿದಾರರು ನಿಗಧಿತ ಅವಧಿಯಲ್ಲಿ ನಿಖರ ಮಾಹಿತಿಯನ್ನು ಕಲೆ ಹಾಕಬೇಕು ಎಂದರು.

ವಿಭಿನ್ನ ಸ್ಥಳಗಳಲ್ಲಿ ವಾಸವಾಗಿರುವ, ವಿವಿಧ ವೃತ್ತಿಗಳಲ್ಲಿ ತೊಡಗಿರುವ ವ್ಯಕ್ತಿಗಳು ಹಾಗೂ ಜನ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಹಾಗೂ ಆರ್ಥಿಕ ಅಸಮಾನತೆಯನ್ನು ಕಡಿಮೆ ಮಾಡುವುದರೊಂದಿಗೆ ಭವಿಷ್ಯದಲ್ಲಿ ಸರಕಾರದ ಸೌಲಭ್ಯಗಳ ಪ್ರಯೋಜನ ಪಡೆದುಕೊಳ್ಳಲು ಈ ಸಮೀಕ್ಷೆಯು ಅನುಕೂಲಕರವಾಗಲಿದ್ದು, ಮನೆ ಮನೆ ಭೇಟಿ ನೀಡುವ ಶಿಕ್ಷಕರುಗಳಿಗೆ ಪರಿಶಿಷ್ಟ ಜಾತಿಯ ಸಮುದಾಯದವರು ಮಾಹಿತಿ ನೀಡುವ ಮೂಲಕ ಅಗತ್ಯ ಸಹಕಾರ ನೀಡಬೇಕು ಎಂದರು.

ಜಿಲ್ಲೆಯಲ್ಲಿ ಮೇ 5 ರಿಂದ ಮೂರು ಹಂತಗಳಲ್ಲಿ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಂಗ್ರಹಿಸುವ ಸಮೀಕ್ಷಾ ಕಾರ್ಯವು ನಡೆಯಲಿದ್ದು, ಮೊದಲನೇ ಹಂತದಲ್ಲಿ ಮೇ 5 ರಿಂದ 17 ರ ವರೆಗೆ ಸಮೀಕ್ಷಾದಾರರು ಮನೆ ಮನೆ ಭೇಟಿ ನೀಡಲಿದ್ದಾರೆ. ಎರಡನೇ ಹಂತದಲ್ಲಿ ಮೇ 19 ರಿಂದ 21 ರ ವರೆಗೆ ವಿಶೇಷ ಶಿಬಿರಗಳನ್ನು ಕೈಗೊಳ್ಳುವ ಮೂಲಕ ಮನೆ ಮನೆ ಭೇಟಿಯ ಅವಧಿಯಲ್ಲಿ ಬಿಟ್ಟುಹೋದ ಪರಿಶಿಷ್ಟ ಜಾತಿ ಕುಟುಂಬಗಳ ಮಾಹಿತಿಯನ್ನು ಸಂಗ್ರಹಿಸಲಾಗುವುದು ಎಂದ ಅವರು, ಅವರು ಮೂರನೇ ಹಂತದಲ್ಲಿ ಆನ್‌ಲೈನ್ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳಿದ್ದು, ಒಂದೊಂದು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 200 ರಿಂದ 250 ಗಣತಿದಾರರ ಅವಶ್ಯವಿದ್ದು, ಇದಕ್ಕಾಗಿ ಒಟ್ಟು 1112 ಜನ ಶಿಕ್ಷಕರುಗಳಿಗೆ ತರಬೇತಿ ನೀಡಿ, ದತ್ತಾಂಶ ಸಂಗ್ರಹ ಕಾರ್ಯಕ್ಕೆ ನೇಮಿಸಲಾಗುತ್ತಿದೆ ಎಂದ ಅವರು, ತರಬೇತಿ ಪಡೆದ ಮಾಸ್ಟರ್ ಟ್ರೈನರ್ಸ್ ಗಳು ಮೂಲ ಜಾತಿಯನ್ನು ಸಮೀಕ್ಷೆಯಲ್ಲಿ ಸೇರಿಸಲು ಹೆಚ್ಚು ಒತ್ತು ನೀಡಬೇಕು ಎಂದ ಅವರು, ಪ್ರತೀ 10 ರಿಂದ 12 ಸಮೀಕ್ಷೆದಾರರಿಗೆ ಓರ್ವ ಮೇಲ್ವಿಚಾರಕರನ್ನು ನೇಮಿಸಲಾಗುವುದು ಎಂದರು.

ಮತದಾರರ ಪಟ್ಟಿಯಲ್ಲಿನ ಮನೆಗಳ ಆಧಾರದ ಮೇಲೆ ಸಮೀಕ್ಷೆಯನ್ನು ಪ್ರಾರಂಭಿಸಬೇಕು. ಸಮೀಕ್ಷೆದಾರರು ಮೊಬೈಲ್ ಆಪ್ ಅನ್ನು ಬಳಕೆ ಮಾಡುವುದರೊಂದಿಗೆ ಸಮೀಕ್ಷೆಯ ಅಪ್ಲಿಕೇಷನ್ ಗೆ ಲಾಗಿನ್ ಆಗಿ ಮೊಬೈಲ್ ಸಂಖ್ಯೆಗೆ ಸ್ವೀಕೃತವಾಗುವ ಒ.ಟಿ.ಪಿ ಯನ್ನು ನಮೂದಿಸಿ, 42 ವಿವಿಧ ಮಾಹಿತಿಗಳನ್ನು, ಕುಟುಂಬ ಸದಸ್ಯರ ಸ್ವಯಂ ಘೋಷಿತ ವಿವರಗಳನ್ನು ದಾಖಲಿಸಬೇಕು ಎಂದರು.

ಪರಿಶಿಷ್ಟ ಜಾತಿಯಲ್ಲಿ 101 ಉಪಜಾತಿಗಳಿವೆ. ಇವೆಲ್ಲವೂಗಳನ್ನು ಸಮೀಕ್ಷೆಯ ಅಡಿಯಲ್ಲಿ ತರಬೇಕು ಎಂಬ ನಿಟ್ಟಿನಲ್ಲಿ ಶಿಕ್ಷಕರುಗಳನ್ನು ದತ್ತಾಂಶ ಸಂಗ್ರಹ ಕಾರ್ಯಕ್ಕೆ ನಿಯೋಜಿಸಲಾಗುತ್ತಿದೆ. ಪರಿಶಿಷ್ಟ ಜಾತಿ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಧ್ಯಯನವನ್ನೂ ಸಹ ಸಮೀಕ್ಷೆಯಲ್ಲಿ ಮಾಡಲಾಗುವುದು ಎಂದರು.
ಕಾರ್ಯಾಗಾರದಲ್ಲಿ ಸಹಾಯಕ ಕಮೀಷನರ್ ರಶ್ಮಿ ಎಸ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣ ಸ್ವಾಮಿ, ತರಬೇತಿಗೆ ನಿಯೋಜಿಸಲಾದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಡಯಟ್ ಉಪಪ್ರಾಂಶುಪಾಲ ಡಾ. ಅಶೋಕ್ ಕಾಮತ್ ಸ್ವಾಗತಿಸಿ, ನಿರೂಪಿಸಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ದ.ಕ. ಜಿಲ್ಲಾ ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ನವೆಂಬರ್‌ 18ರಂದು ಮಂಗಳೂರಿನ ಶ್ರೀ ಕುದ್ಮಲ್‌ ರಂಗರಾವ್‌ ಪುರಭವನದಲ್ಲಿ ಕರ್ನಾಟಕ ಸಾಹಿತ್ಯ...

ಉಡುಪಿ | ಕೋಟದಲ್ಲಿ ಶಿಕ್ಷಕರಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ ಸಮಾರೋಪ

ರಿಷಬ್ ಶೆಟ್ಟಿ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಹಾಗೂ ವಿ-ಶೈನ್ ಕೋಚಿಂಗ್ ಸೆಂಟರ್ ಸಹಭಾಗಿತ್ವದಲ್ಲಿ...

ದಕ್ಷಿಣ ಕನ್ನಡ | ನವೆಂಬರ್‌ 22ರಿಂದ ಜಿಲ್ಲಾ ಮಟ್ಟದ ಯುವಜನೋತ್ಸವ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ನವೆಂಬರ್ 22ರಂದು...

ಬೆಂಗಳೂರಿನ ಜಿಕೆವಿಕೆಯಲ್ಲಿ ಕೃಷಿ ಮೇಳದ ಸಡಗರ

ಬೆಂಗಳೂರಿನ ಜಿಕೆವಿಕೆ ಕೃಷಿ ವಿಜ್ಞಾನ ಕೇಂದ್ರದಲ್ಲಿ 2026ರ ಕೃಷಿ ಮೇಳಕ್ಕೆ ಚಾಲನೆ...