ಉಡುಪಿ | ಜಿಲ್ಲೆಯ ಪ್ರತಿಯೊಂದು ಜಾನುವಾರುಗಳಿಗೂ ಕಾಲುಬಾಯಿ ಲಸಿಕೆಗಳನ್ನು ಹಾಕಿ – ಜಿಲ್ಲಾಧಿಕಾರಿ

Date:

Advertisements

ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಏಳನೇ ಸುತ್ತಿನ ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮವನ್ನು ಏಪ್ರಿಲ್ 26 ರಿಂದ ಜೂನ್ 4 ರ ವರೆಗೆ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಪ್ರತಿಶತಃ ನೂರರಷ್ಟು ಗುರಿ ಸಾಧನೆಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಾನುವಾರು ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆ ಹಾಗೂ ಪಶು ಸಂಜೀವಿನಿ ವಾಹನಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

1005098726

ಜಾನುವಾರುಗಳಲ್ಲಿ ಕಂಡು ಬರುವ ಕಾಲುಬಾಯಿ ರೋಗವು ವೈರಾಣುವಿನಿಂದ ಬರುವ ಅಂಟು ರೋಗವಾಗಿದ್ದು, ಗೊರಸು ಕಾಲುಗಳನ್ನು ಹೊಂದಿರುವ ಎಲ್ಲಾ ಪ್ರಾಣಿಗಳಲ್ಲಿ ಈ ರೋಗವು ಕಂಡುಬರುತ್ತದೆ. ರೈತರಿಗೆ ಆರ್ಥಿಕ ಸಂಕಷ್ಟ ಉಂಟುಮಾಡುವ ಈ ರೋಗವನ್ನು ನಿಯಂತ್ರಿಸಲು ಲಸಿಕೆ ನೀಡುವುದೊಂದೇ ಪರಿಹಾರವಾಗಿದ್ದು, ಪ್ರತೀ ಆರು ತಿಂಗಳಿಗೊಮ್ಮೆ ಲಸಿಕೆ ಹಾಕಿಸುವುದರೊಂದಿಗೆ ರೈತರು ತಮ್ಮ ಜಾನುವಾರುಗಳನ್ನು ಈ ರೋಗದಿಂದ ರಕ್ಷಿಸಿಕೊಳ್ಳಬೇಕು ಎಂದರು.

Advertisements

ಕಾಲುಬಾಯಿ ಲಸಿಕಾ ಕಾರ್ಯಕ್ರಮದಲ್ಲಿ ಜಾನುವಾರುಗಳಿಕೆ ಲಸಿಕೆ ಹಾಕಿಸುವುದರೊಂದಿಗೆ, ಯಾವುದೇ ಜಾನುವಾರುಗಳು ಲಸಿಕೆಯಿಂದ ಬಿಟ್ಟುಹೋಗದಂತೆ ನೋಡಿಕೊಳ್ಳಬೇಕು ಎಂದ ಅವರು, ಈಗಾಗಲೇ ಜಿಲ್ಲೆಗೆ ಅಗತ್ಯವಿರುವ ಲಸಿಕೆ ಹಾಗೂ ಇನ್ನಿತರ ಸಾಮಾಗ್ರಿಗಳನ್ನು ದಾಸ್ತಾನು ಇಟ್ಟುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಪ್ರಸಕ್ತ ಸಾಲಿನಲ್ಲಿ ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ಕಾಲುಬಾಯಿ ರೋಗದ ಲಸಿಕಾ ಕಾರ್ಯಕ್ರಮದೊಂದಿಗೆ ಚರ್ಮಗಂಟು ರೋಗ ಲಸಿಕೆಯನ್ನು ಸಹ ಜಾನುವಾರುಗಳಿಗೆ ನೀಡಲಾಗುತ್ತಿದ್ದು, ಈ ಎರಡೂ ಲಸಿಕೆಗಳನ್ನು ಜಾನುವಾರುಗಳಿಗೆ ಹಾಕಿಸುವುದರ ಮೂಲಕ ಜಾನುವಾರುಗಳ ಉತ್ಪನ್ನ ಹೆಚ್ಚಿಸಲು ಅಗತ್ಯ ಕ್ರಮ ವಹಿಸಬೇಕು ಎಂದರು.
ಪಶುವೈದ್ಯರು, ಸಿಬ್ಬಂದಿ, ಕೆ.ಎಂ.ಎಫ್ ಸಿಬ್ಬಂದಿ ಹಾಗೂ ತರಬೇತಿ ಹೊಂದಿರುವ ಪಶುಸಖಿಯರ ಮೂಲಕ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಇವರುಗಳು ಮನೆ ಭೇಟಿ ನೀಡಿದ ಸಂದರ್ಭದಲ್ಲಿ ರೈತರುಗಳು ಅಗತ್ಯ ಸಹಕಾರ ನೀಡುವಂತೆ ತಿಳಿಸಿದ ಅವರು, ಹೆಚ್ಚಿನ ಸಂಖ್ಯೆಯ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಬೇಕು ಎಂದರು.
ಕಳೆದ ಆರನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮದಲ್ಲಿ ಜಿಲ್ಲೆಯ 2,08,558 ಜಾನುವಾರುಗಳ ಗುರಿ ನಿಗಧಿಪಡಿಸಿ, 2,00,888 ಜಾನುವಾರುಗಳಿಗೆ ಲಸಿಕೆ ಹಾಕಿಸಿ, ಶೇ. 96 ರಷ್ಟು ಪ್ರಗತಿ ಸಾಧಿಸಿದ್ದು, ಏಳನೇ ಸುತ್ತಿನಲ್ಲಿಯೂ ಸಹ ಹೆಚ್ಚಿನ ಸಂಖ್ಯೆಯ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಅವುಗಳ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದರು.

ಜಿಲ್ಲೆಯ ಕಾಪು, ಉಡುಪಿ, ಬೈಂದೂರು, ಹೆಬ್ರಿ, ಕುಂದಾಪುರ, ಕಾರ್ಕಳ ಹಾಗೂ ಬ್ರಹ್ಮಾವರ ತಾಲೂಕು ಮತ್ತು ಉಡುಪಿ ಪಾಲಿಕ್ಲಿನಿಕ್ ನಲ್ಲಿ ತಲಾ ಒಂದರಂತೆ ಒಟ್ಟು 8 ಪಶು ಸಂಜೀವಿನಿ ಆಂಬುಲೆನ್ಸ್ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತೀ ಚಿಕಿತ್ಸಾ ಘಟಕದ ವಾಹನದಲ್ಲಿ ಪಶುವೈದ್ಯರು, ಪಶುವೈದ್ಯ ಸಹಾಯಕ ಹಾಗೂ ವಾಹನ ಚಾಲಕರು ನೇಮಕಗೊಂಡಿದ್ದು, 2024-25 ನೇ ಸಾಲಿನಲ್ಲಿ ಈ ವಾಹನಗಳ ಮೂಲಕ ಒಟ್ಟು 7,488 ಜಾನುವಾರುಗಳಿಗೆ ಚಿಕಿತ್ಸೆ ನೀಡಲಾಗಿರುತ್ತದೆ ಎಂದರು.

ಸಭೆಯಲ್ಲಿ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಂ.ಸಿ ರೆಡ್ಡಪ್ಪ, ಮುಖ್ಯ ಪಶು ವೈದ್ಯಾಧಿಕಾರಿ ಡಾ.ಸಂದೀಪ್, ತಾಲೂಕುಗಳ ಆಡಳಿತ ಮುಖ್ಯ ಪಶುವೈದ್ಯಾಧಿಕಾರಿಗಳು, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X