ಉಡುಪಿ | ಮಲ್ಪೆಯ ದ್ವೀಪಗಳಲ್ಲಿ ಪ್ರವಾಸಿಗರ ಅನುಕೂಲಕ್ಕೆ ಮಾಸ್ಟರ್ ಪ್ಲಾನ್ ತಯಾರಿಸಿ – ಡಿಸಿ ಡಾ. ಕೆ ವಿದ್ಯಾಕುಮಾರಿ

Date:

Advertisements

ಮಲ್ಪೆ-ಪಡುಕೆರೆಯ ದರಿಯಾ ಬಹದ್ದೂರ್ ಹಾಗೂ ಮಾಲ್ತಿದ್ವೀಪದಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಪ್ರವಾಸೋದ್ಯಮ ಚಟುವಟಿಕೆಗಳು ಸೇರಿದಂತೆ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ತಯಾರಿಸಿ, ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಮಲ್ಪೆ-ಪಡುಕೆರೆಯ ದರಿಯಾ ಬಹದ್ದೂರ್ ಹಾಗೂ ಮಾಲ್ತಿದ್ವೀಪಗಳು ಪ್ರಾಕೃತಿಕವಾಗಿ ಇದ್ದು, ಇಲ್ಲಿನ ಪ್ರಾಕೃತಿಕ ಸೌಂದರ್ಯ ಸೊಬಗು ಪ್ರವಾಸಿಗರನ್ನು ಮನಸೂರೆಗೊಳಿಸುತ್ತವೆ. ಈ ತಾಣದಲ್ಲಿ ಪ್ರವಾಸಿಗರ ಚಟುವಟಿಕೆಗೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದರು.

Advertisements
1004472303

ಸೋಮೇಶ್ವರ ಕಡಲ ತೀರದಲ್ಲಿ ಪ್ರವಾಸಿಗರ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ಕಾಮಗಾರಿಗಳನ್ನು ಆಧುನಿಕತೆಯ ಸ್ವರೂಪದೊಂದಿಗೆ ಜನಾಕರ್ಷಣೀಯವಾಗಿ ಕೈಗೊಳ್ಳಬೇಕು. ಪ್ರವಾಸಿಗರಿಗೆ ವಾಹನಗಳ ಪಾಕಿಂಗ್ ವ್ಯವಸ್ಥೆ, ಆಸನದ ವ್ಯವಸ್ಥೆ ಸೇರಿದಂತೆ ಮತ್ತಿತರ ಸೌಕರ್ಯಗಳನ್ನು ಕಲ್ಪಿಸಬೇಕು ಎಂದರು.

ತ್ರಾಸಿ ಬೀಚ್‌ನ ನಿರ್ವಹಣೆ ಹಾಗೂ ಜಲ ಸಾಹಸ ಚಟುವಟಿಕೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೀಡಲು ಟೆಂಡರ್ ಕರೆಯಲಾಗಿದ್ದು, ಯಾವುದೇ ಅಭ್ಯರ್ಥಿಗಳು ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸದೇ ಇರುವುದು ಕಂಡುಬಂದಿದೆ. ಕೆಲವು ಗುತ್ತಿಗೆದಾರರು ಕಡಲ ತೀರ ಹಾಗೂ ನದಿಯಲ್ಲಿಯೂ ಜಲಸಾಹಸ ಚಟುವಟಿಕೆ ಕೈಗೊಳ್ಳಲು ಹಾಗೂ ಪಾರ್ಕಿಂಗ್ ವ್ಯವಸ್ಥೆ ಸ್ಥಳ ಬದಲಾವಣೆ ಸೇರಿದಂತೆ ಮತ್ತಿತರ ವ್ಯವಸ್ಥೆಗಳನ್ನು ಕಲ್ಪಿಸಲು ಕೋರಿರುತ್ತಾರೆ. ಇವುಗಳನ್ನು ಪರಿಶೀಲಿಸಿ, ಸೂಕ್ತ ವ್ಯವಸ್ಥೆ ಸೇರಿದಂತೆ ಜಲಸಾಹಸ ಚಟುವಟಿಕೆಗಳಲ್ಲಿ ಭಾಗವಹಿಸುವವರಿಗೆ ಮೂರನೇ ವ್ಯಕ್ತಿಗಳ ವಿಮಾ ಸೌಲಭ್ಯವನ್ನು ಕಲ್ಪಿಸಲು ಸಹ ಷರತ್ತು ವಿಧಿಸಬೇಕು. ತ್ರಾಸಿ ಬೀಚ್ ಪಕ್ಕದ ರಾಷ್ಟ್ರೀಯ ಹೆದ್ದಾರಿ 66 ನ ಬೀಚ್‌ನ ಉದ್ದಕ್ಕೂ ದಾರೀದೀಪ ಅಳವಡಿಸಬೇಕು ಎಂದರು.

ಮಲ್ಪೆ ಬೀಚ್ ಪ್ರದೇಶಗಳಲ್ಲಿ ವ್ಯಾಪಾರ ಮಾಡುವ ಅಂಗಡಿಗಳು, ಕಾರ್ಟೆಜ್ ಸೇರಿದಂತೆ ಮತ್ತಿತರ ಪ್ರವಾಸೋದ್ಯಮ ಚಟುವಟಿಕೆಗಳಿಗೆ ನೀಡಲಾದ ಸ್ಥಳದ ಬಾಡಿಗೆ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಶಾಸಕ ಯಶ್‌ಪಾಲ್ ಎ ಸುವರ್ಣ ಹಾಗೂ ಗುರುರಾಜ್ ಶೆಟ್ಟಿ ಗಂಟಿಹೊಳಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಪೌರಾಯುಕ್ತ ಉದಯ್ ಕುಮಾರ್ ಶೆಟ್ಟಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಸಿ.ಯು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X