ಉಡುಪಿ | ಅನರ್ಹರ ಪಡಿತರ ಚೀಟಿ ರದ್ದು ಮಾಡಲು ಜಿಲ್ಲಾಧಿಕಾರಿ ಸೂಚನೆ

Date:

Advertisements

ಉಡುಪಿ ಜಿಲ್ಲೆಯಲ್ಲಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ಹೊಂದಿರುವವರು ಸರ್ಕಾರ ವಿಧಿಸಿರುವ ಮಾನದಂಡದ ವಿರುದ್ಧವಾಗಿ ಪಡಿತರ ಚೀಟಿ ಹೊಂದಿದ್ದಲ್ಲಿ, ಸಂಬಂಧಿಸಿದ ತಾಲೂಕು ಕಚೇರಿಯ ಆಹಾರ ಶಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿ, ಪಡಿತರ ಚೀಟಿಯನ್ನು ಆದ್ಯರ್ಪಣೆ (ಸರೆಂಡರ್) ಮಾಡಿಕೊಳ್ಳಬೇಕು. ಯಾವುದೇ ಪಡಿತರ ಚೀಟಿದಾರರು ಸರಕಾರದ ನಿಯಮಾವಳಿಗಳನ್ನು ಮೀರಿ ಒಂದೇ ಮನೆಯಲ್ಲಿ ವಾಸವಿರುವವರು ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಹೊಂದಿದ್ದಲ್ಲಿ ಅಂತಹ ಪಡಿತರ ಚೀಟಿದಾರರು ಸಂಬಂಧಪಟ್ಟ ಆಹಾರ ಶಾಖೆಯ ಅಧಿಕಾರಿಗಳಿಗೆ ಪಡಿತರ ಚೀಟಿಯನ್ನು ನೀಡಿ ಒಂದಕ್ಕಿಂತ ಹೆಚ್ಚಿನ ಪಡಿತರ ಚೀಟಿಯನ್ನು ರದ್ದುಪಡಿಸಿಕೊಳ್ಳಬೇಕು.

ಪಡಿತರ ಚೀಟಿದಾರರಲ್ಲಿ ಕೆಲವರು ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ಒದಗಿಸುವ ಅಕ್ಕಿಯನ್ನು ಹಣದ ಆಸೆಗೆ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಅಕ್ಕಿಯನ್ನು ಸ್ವಂತಕ್ಕೆ ಉಪಯೋಗಿಸದೇ ಮಾರಾಟ ಮಾಡುವುದು ಅಪರಾಧವಾಗಿದ್ದು, ಈ ಬಗ್ಗೆ ಮಾಹಿತಿ ಬಂದಲ್ಲಿ ಅಂತಹ ಕುಟುಂಬಕ್ಕೆ ಪಡಿತರ ವ್ಯವಸ್ಥೆಯಡಿ ಪಡಿತರ ಅಗತ್ಯವಿಲ್ಲವೆಂದು ತಿಳಿದು ಅಂತಹ ಪಡಿತರ ಚೀಟಿಯನ್ನು ರದ್ದುಪಡಿಸಲು ಕ್ರಮವಹಿಸಲಾಗುವುದು.

ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ.ಗಳಿಂಗಿಂತಲೂ ಹೆಚ್ಚು ಇರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು (ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು) ಹೊರತುಪಡಿಸಿ ನಾಲ್ಕು ಚಕ್ರದ ವಾಹನವನ್ನು ಹೊಂದಿರುವ ಕುಟುಂಬಗಳು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ, ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು ಮತ್ತು ವೇತನವನ್ನು ಗಣನೆಗೆ ತೆಗೆದುಕೊಳ್ಳದೇ ಎಲ್ಲಾ ಖಾಯಂ ನೌಕರರು ಅಂದರೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು, ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುತ್ತಿರುವ ಎಲ್ಲಾ ಕುಟುಂಬಗಳು ಆದ್ಯತಾ ಪಡಿತರ ಚೀಟಿ ಹೊಂದಲು ಅನರ್ಹರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X