ಉಡುಪಿ | ನಗರ ವ್ಯಾಪ್ತಿಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಕ್ರಮ ವಹಿಸಿ – ಡಿ ಸಿ ಡಾ.ಕೆ ವಿದ್ಯಾಕುಮಾರಿ

Date:

ಉಡುಪಿ ನಗರಸಭಾ ವ್ಯಾಪ್ತಿಯ ಮುಖ್ಯ ರಸ್ತೆಗಳಲ್ಲಿ ವಾಹನ ದಟ್ಟಣೆಯು ದಿನೇ ದಿನೇ ಹೆಚ್ಚಿ, ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಸುಗಮ ಸಂಚಾರಕ್ಕೆ ಅಗತ್ಯವಿರುವ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.

- Advertisement -

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ವಾಣಿಜ್ಯ ಕಟ್ಟಡಗಳು ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಇರುವುದು, ಅನಧಿಕೃತವಾಗಿ ರಚನೆಗೊಂಡಿರುವ ಗೂಡಂಗಡಿಗಳು, ತಳ್ಳುವ ಗಾಡಿಗಳು ರಸ್ತೆಯಲ್ಲಿಯೇ ವ್ಯಾಪಾರ ಕೈಗೊಳ್ಳುವುದು ಸೇರಿದಂತೆ ಮತ್ತಿತರರ ಕಾರಣಗಳಿಂದಾಗಿ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಆಗುತ್ತಿದೆ. ಈ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಉಡುಪಿ ನಗರದ ವ್ಯಾಪ್ತಿಯಲ್ಲಿ 58 ಕ್ಕೂ ಹೆಚ್ಚು ವಾಣಿಜ್ಯ ಕಟ್ಟಡಗಳ ಮುಂಭಾಗ ರಸ್ತೆಯ ಮೇಲೆ ಅಂಗಡಿ ಮಾಲೀಕರು ಹಾಗೂ ಗ್ರಾಹಕರು ಪಾರ್ಕಿಂಗ್ ಮಾಡುವ ಹಿನ್ನೆಲೆ, ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಆಗುತ್ತಿದೆ. ನಗರಸಭೆ ವತಿಯಿಂದ ಕಟ್ಟಡಗಳು ನಿರ್ಮಾಣಕ್ಕೆ ಅನುಮತಿ ಪಡೆದ ಸಂದರ್ಭದಲ್ಲಿ ನಿಯಮಾನುಸರ ಪಾಲಿಸಬೇಕಾದ ಪಾರ್ಕಿಂಗ್ ನಿಯಮಗಳನ್ನು ಪಾಲಿಸದೇ ನಿರ್ಮಾಣ ಮಾಡುವುದು ಕಂಡು ಬಂದಿದೆ. ಕಟ್ಟಡದ ಮಾಲೀಕರಿಗೆ ನೋಟೀಸ್ ನೀಡಿ ಕಟ್ಟಡದಲ್ಲಿ ಪಾರ್ಕಿಂಗ್ ವ್ಯವಸ್ಥೆಗೆ ಅನುವು ಮಾಡಿಕೊಡಬೇಕು ಎಂದರು.
ನಗರದ ಸರ್ವಿಸ್ ಬಸ್ ನಿಲ್ದಾಣದ ಸುತ್ತಮುತ್ತ, ಬೋರ್ಡ್ ಹೈಸ್ಕೂಲ್‌ಗಳ ಮುಂಭಾಗ ಗೂಡಂಗಡಿ ನಿರ್ಮಾಣದಿಂದ ಹಾಗೂ ತಳ್ಳುವ ಗಾಡಿಗಳಲ್ಲಿ ಹಣ್ಣು ಹಂಪಲು ಮಾರಾಟ, ಫಾಸ್ಟ್ ಫುಡ್ ವಾಹನಗಳಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಇವುಗಳನ್ನು ತೆರವುಗೊಳಿಸಲು ಕ್ರಮ ವಹಿಸುವಂತೆ ನಗರಸಭಾ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪೊಲೀಸ್ ಇಲಾಖೆಯಿಂದ ವಿವಿಧ ಮಾರಾಣಾಂತಿಕ ರಸ್ತೆ ಅಪಘಾತ ಮಾಡಿದ 82 ಆರೋಪಿಗಳ ಡ್ರೈವಿಂಗ್ ಲೈಸನ್ಸ್ ಅನ್ನು ಅಮಾನತು ಮಾಡಲು ಶಿಫಾರಸ್ಸು ಮಾಡಲಾಗಿದ್ದು, ಈಗಾಗಲೇ 59 ಜನರ ಲೈಸನ್ಸ್ ಅನ್ನು ರದ್ದು ಮಾಡಲಾಗಿದೆ. ಉಳಿದ 23 ಜನರ ಡ್ರೈವಿಂಗ್ ಲೈಸನ್ಸ್ ಅನ್ನು ಒಂದು ವಾರದ ಒಳಗಾಗಿ ರದ್ದು ಪಡಿಸಲು ಕ್ರಮ ವಹಿಸುವಂತೆ ಸೂಚನೆ ನೀಡಿದರು.

ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳಲ್ಲಿ ಗುರುತಿಸಿರುವ ಕಪ್ಪು ಚುಕ್ಕೆ ಪ್ರದೇಶಗಳಲ್ಲಿ ತಾತ್ಕಾಲಿಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಪ್ರದೇಶಗಳಲ್ಲಿ ಶಾಶ್ವತ ಸುರಕ್ಷತಾ ನಿರ್ವಹಣಾ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು ಎಂದ ಅವರು ರಸ್ತೆಯ ಸಮೀಪವಿರುವ ಶಾಲೆಗಳ ಮುಂಭಾಗ ಸೂಚನಾ ಫಲಕಗಳನ್ನು ಹಾಗೂ ಝೀಬ್ರಾ ಪಟ್ಟಿ ಸಮೇತ ಹಂಪ್‌ಗಳನ್ನು ವೈಜ್ಞಾನಿಕ ರೀತಿಯಲ್ಲಿ ಅಳವಡಿಸಬೇಕು ಎಂದು ಸೂಚನೆ ನೀಡಿದರು.
2023 ಹಾಗೂ 2024 ನೇ ಸಾಲಿನಲ್ಲಿ ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ “ಸಿ”ಅಂತಿಮ ವರದಿ ಸಲ್ಲಿಸಲಾದ 20 ಪ್ರಕರಣಗಳ ಗಾಯಗೊಂಡವರಿಗೆ ಹಾಗೂ ಮೃತಪಟ್ಟ ಕುಟುಂಬಗಳ ಅವಲಂಬಿತ ಸದಸ್ಯರುಗಳಿಗೆ ಸೊಲೋಟಿಯಂ ಯೋಜನೆಯಡಿ ಪರಿಹಾರ ನೀಡಲು ಜನರಲ್ ಇನ್ಸೂರೆನ್ಸ್ ಕಂಪನಿಗೆ ಸೂಚಿಸಲಾಗಿತ್ತು. ಈವರೆಗೆ 13 ಪ್ರಕರಣಗಳಲ್ಲಿ ಪರಿಹಾರವನ್ನು ಮಂಜೂರು ಮಾಡಿರುವುದಿಲ್ಲ. ಕೂಡಲೇ ನಿಯಮಾನುಸಾರ ಮಂಜೂರು ಮಾಡುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಕಾರ್ಯಪಾಲಕ ಅಭಿಯಂತರ ಕಿರಣ್ ಎಸ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ಎನ್.ಹೆಚ್ ನ ಎ.ಐ ಅನಿರುದ್ದ್ ಕಾಮತ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಗುತ್ತಿಗೆದಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...