ಉಡುಪಿ | ಮುಂಗಾರು ಮಳೆ ಪ್ರಾರಂಭ, ಗುಡುಗು-ಸಿಡಿಲಿನಿಂದ ಬಾರಿ ಮಳೆಯಾಗುವ ಸಾಧ್ಯತೆ

Date:

ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಪ್ರಸಕ್ತ ಸಾಲಿನ ಮುಂಗಾರು ಮಳೆ ಪ್ರಾರಂಭವಾಗಿದ್ದು, ಈ ಸಂಧರ್ಭದಲ್ಲಿ ಗುಡುಗು-ಸಿಡಿಲಿನಿಂದ ಹಾಗೂ ಗಾಳಿ-ಮಳೆಯಿಂದ ಸಾರ್ವಜನಿಕ ಮತ್ತು ಜಾನುವಾರು ಪ್ರಾಣಹಾನಿಯಾಗುವ ಸಂಭವವಿರುತ್ತದೆ. ಈ ಹಿಂದಿನ ಸಾಲಿನಲ್ಲಿ ಗುಡುಗು-ಸಿಡಿಲಿನಿಂದ ಮತ್ತು ಗಾಳಿ-ಮಳೆಯಿಂದ ಅಧಿಕ ಪ್ರಮಾಣದಲ್ಲಿ ಜಾನುವಾರು ಹಾಗೂ ಮಾನವ ಹಾನಿ ಸಂಭವಿಸಿದ್ದು, ಅದನ್ನು ತಡೆಗಟ್ಟಲು ಪ್ರಸ್ತುತ ಸಾಲಿನಲ್ಲಿ ಸಾರ್ವಜನಿಕರು ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಹಾಗೂ ಜಿಲ್ಲಾ ಪ್ರಾಧಿಕಾರದಿಂದ ಹೊರಡಿಸುವ ಮುನ್ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಮತ್ತು ಅಂತಹ ಸಂಧರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಆದಷ್ಟೂ ಮನೆಯಲ್ಲಿಯೇ ಇದ್ದು, ಯಾವುದೇ ಅನಾಹುತವಾಗದಂತೆ ಮುನ್ನೆಚ್ಚರಿಕೆ ಕ್ರಮವನ್ನು ವಹಿಸಬೇಕು. ಇದರಿಂದ ಸಂಭವಿಸಬಹುದಾದ ಮಾನವ ಹಾಗೂ ಜಾನುವಾರು ಹಾನಿಯನ್ನು ತಡೆಗಟ್ಟಲು ಸಾಧ್ಯ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...