ಉಡುಪಿ | ಅನರ್ಹರು ಪಡಿತರ ಚೀಟಿಯನ್ನು ಹಿಂದಿರುಗಿಸಲು ಜಿಲ್ಲಾಧಿಕಾರಿ ಸೂಚನೆ

Date:

ಉಡುಪಿ ಜಿಲ್ಲೆಯಲ್ಲಿ ಅನರ್ಹರು ಒಂದು ವೇಳೆ ಪಡಿತರ ಚೀಟಿಯನ್ನು ಹೊಂದಿದ್ದರೆ, ಕೂಡಲೇ ಹಿಂದಿರುಗಿಸಬೇಕು ಎಂದು ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಸೂಚನೆ ನೀಡಿದ್ದಾರೆ.

- Advertisement -

ಜಿಲ್ಲೆಯಲ್ಲಿ ವೇತನವನ್ನು ಗಣನೆಗೆ ತೆಗೆದುಕೊಳ್ಳದ ಎಲ್ಲಾ ಖಾಯಂ ನೌಕರರು ಅಂದರೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು/ ನಿಗಮಗಳು/ ಸ್ವಾಯತ್ತತೆ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ/ ಸೇವಾತೆರಿಗೆ/ ವ್ಯಾಟ್/ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು, ಗ್ರಾಮೀಣ ಭಾಗದಲ್ಲಿ ಮೂರು ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶದಲ್ಲಿ ಒಂದು ಸಾವಿರ ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನವನ್ನು ಹೊಂದಿರುವ ಎಲ್ಲಾ ಕುಟುಂಬಗಳು ಹಾಗೂ 1.20 ಲಕ್ಷ ರೂ. ಗಳಿಗಿಂತಲೂ ಹೆಚ್ಚು ವಾರ್ಷಿಕ ಆದಾಯ ಇರುವ ಕುಟುಂಬಗಳು ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಪಡೆಯಲು (ಬಿ.ಪಿ.ಎಲ್) ಅರ್ಹರಿರುವುದಿಲ್ಲ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸರ್ಕಾರ ನಿಗದಿಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ (ಬಿ.ಪಿ.ಎಲ್) ಪಡಿತರ ಚೀಟಿ ಹೊಂದಿರುವ ಸಾರ್ವಜನಿಕರು ತಕ್ಷಣವೇ ತಾಲೂಕಿನ ತಹಶೀಲ್ದಾರರ ಕಛೇರಿಗೆ ಪಡಿತರ ಚೀಟಿಯನ್ನು ಒಪ್ಪಿಸಿ ಆದ್ಯತೇತರ (ಎ.ಪಿ.ಎಲ್) ಪಡಿತರ ಚೀಟಿ ಪಡೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ.

ಜಿಲ್ಲಾಮಟ್ಟದಲ್ಲಿ ಅನರ್ಹ ಪಡಿತರ ಚೀಟಿದಾರರನ್ನು ಪತ್ತೆ ಹಚ್ಚಲು ತಪಾಸಣಾ ತಂಡವನ್ನು ರಚಿಸಲಾಗುತ್ತಿದ್ದು, ತಪಾಸಣಾ ಸಮಯದಲ್ಲಿ ಅನರ್ಹರು ಎಂದು ಕಂಡು ಬಂದಲ್ಲಿ ಅವರು ಪಡೆದಿರುವ ಆಹಾರಧಾನ್ಯಕ್ಕೆ ಮುಕ್ತ ಮಾರುಕಟ್ಟೆ ದರದಲ್ಲಿ ದಂಡ ವಸೂಲಾತಿ ಮಾಡುವುದರೊಂದಿಗೆ ಅಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ಧ ಕರ್ನಾಟಕ ಅನಧಿಕೃತ ಪಡಿತರ ಚೀಟಿ ಅನ್ವಯ 1977ರಡಿ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...