ನಿಟ್ಟೂರು ರಾಷ್ಟ್ರೀಯ ಹೆದ್ದಾರಿ ಸನಿಹದ ಸರಕಾರಿ ಜಾಗದಲ್ಲಿರುವ, ಪಾಳುಬಿದ್ದ ಶೆಡ್ಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ, ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ರೋಗಿಯನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ಧೃಡಿಕರಿಸಿದರು.
- Advertisement -
ಮೃತ ವ್ಯಕ್ತಿ ಶಿವಮೊಗ್ಗ ಜಿಲ್ಲೆಯ ವಲಸೆ ಕಾರ್ಮಿಕ ಮೈಲಾರಿ ಎಂದು ತಿಳಿದುಬಂದಿದೆ. ಯಾವೊದೋ ಕಾಯಿಲೆಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ. ಸಂಬಂಧಿಕರು ಉಡುಪಿ ನಗರ ಪೋಲಿಸ್ ಠಾಣೆ, ಅಥವಾ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.





