ಉಡುಪಿ | ಇಂದಿರಾ ಕ್ಯಾಂಟೀನ್‌ನಲ್ಲಿ ಕುಚ್ಚಲಕ್ಕಿ ಗಂಜಿ, ಸಿಗಡಿಚಟ್ನಿ ನೀಡುವಂತೆ ಆಗ್ರಹ

Date:

ಉಡುಪಿ ಕರಾವಳಿ ಭಾಗದ ಜನರಬಹು ದಿನಗಳ ಬೇಡಿಕೆ ಹಾಗೂ ಈ ಭಾಗದ ಆಹಾರ ಪದ್ಧತಿಗಳಲ್ಲಿ ಒಂದಾದ ಕುಚ್ಚಲಕ್ಕಿ ಗಂಜಿ, ಊಟದ ಜೊತೆಗೆ ಸಿಗಡಿ ಚಟ್ನಿ, ವಿವಿಧ ಬಗೆಯ ಒಣ ಮೀನಿನ ವಿವಿಧ ಖಾದ್ಯಗಳನ್ನು ಒಳಗೊಂಡ ಕರಾವಳಿ ಭಾಗದ ಅಡುಗೆ ಶೈಲಿಯನ್ನು ಬಿಂಬಿಸುವಂತೆ ಇಂದಿರಾ ಕ್ಯಾಂಟೀನ್‌ನಲ್ಲಿ ಮೀನಿನ ಖಾದ್ಯಗಳ ಮತ್ತೊಂದು ವಿಭಾಗವನ್ನು ಆರಂಭಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

- Advertisement -

ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್ ಸರಳಬೆಟ್ಟು .ಕಾಂಗ್ರೆಸ್ ಮುಖಂಡ ಜಯ್ ಶೆಟ್ಟಿ ಬನ್ನಂಜೆ ಪರ್ಕಳ, ಮೋಹನ್ ದಾಸ್ ನಾಯಕ್. ರಾಜೇಶ್ ಪ್ರಭು ಪರ್ಕಳ. ಹಿರಿಯಡ್ಕ, ಸುಧೀರ್ ಶೆಟ್ಟಿ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಫೆಡರೇಶನ್ ಅಧ್ಯಕ್ಷರೂ ಅಗಿದ್ದಾರೆ. ಅವರು ಕರಾವಳಿ ಭಾಗದ ಇಂದಿರಾ ಕ್ಯಾಂಟೀನ್‌ಗಳಲ್ಲಿ ಮೀನಿನ ಖಾದ್ಯಗಳನ್ನು ಪೂರೈಕೆ ಮಾಡುವ ಬಗ್ಗೆ ಮುತುವರ್ಜಿ ವಹಿಸಬೇಕು. ಸಬ್ಸಿಡಿ ದರದಲ್ಲಿ ಮೀನನ್ನು ಒದಗಿಸಲು ಕಾರ್ಯಪ್ರವರ್ತರಾಗಬೇಕು, ಮೀನುಗಾರರ ಉತ್ಪನ್ನವನ್ನು ಉತ್ತೇಜಿಸಬೇಕು. ಕರಾವಳಿ ಭಾಗದ ಜನರ ಆಹಾರ ಪದ್ಧತಿಯನ್ನು ಇಂದಿರಾ ಕ್ಯಾಂಟೀನ್‌ನಲ್ಲಿ ಪ್ರಾರಂಭ ಮಾಡಬೇಕು. ಕೆಲವೊಂದು ಮೀನಿನ ಉತ್ಪನ್ನಗಳಾದ ಸಿಗಡಿ ಹಾಗೂ ಇನ್ನಿತರ ಮಿಕ್ಸೆಡ್ ಉಪ್ಪಿನಕಾಯಿ ಮಾರಾಟ ಮಳಿಗೆ ಸ್ಥಾಪಿಸಬೇಕು” ಎಂದು ಆಗ್ರಹಿಸಿದ್ದಾರೆ.

ಕರಾವಳಿ ಭಾಗದ ಬಹುಜನರ ಆಹಾರ ಪದ್ಧತಿಯನ್ನು ಜಾರಿ ಮಾಡಿದರೆ ಸ್ಥಳೀಯ ತುಳು ಜನರಾದ ಬಡ ಮತ್ತು ಮಧ್ಯಮ ವರ್ಗದವರಿಗೆ, ಹೆಚ್ಚಿನ ಕಾರ್ಮಿಕ ವರ್ಗದವರಿಗೂ ಪ್ರಯೋಜನವಾಗಲಿದೆ ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...