ಉಡುಪಿ | ಚಕ್ರವರ್ತಿ ಸೂಲಿಬೆಲೆ ಭಾಷಣಕ್ಕೆ ಅವಕಾಶ ನೀಡಬಾರದೆಂದು ಪೊಲೀಸ್ ಉಪನಿರೀಕ್ಷರಿಗೆ ಮನವಿ

Date:

ಕೋಮು ದ್ವೇಷದ ಭಾಷಣ ಮಾಡಿ ರಾಜ್ಯದ ಸೌಹಾರ್ದ ಪರಂಪರೆಗೆ ಧಕ್ಕೆ ತರುತ್ತಿರುವ ಚಕ್ರವರ್ತಿ ಸೂಲಿಬೆಲೆ ಅವರು ಕುಂದಾಪುರಕ್ಕೆ ಬಂದು ಭಾಷಣ ಮಾಡಲು ಅವಕಾಶ ನೀಡಬಾರದು ಎಂದು ಕುಂದಾಪುರ ಪೊಲೀಸ್ ಉಪನಿರೀಕ್ಷರಿಗೆ ಕರ್ನಾಟಕ ಸೌಹಾರ್ದ ಸಮಿತಿ ಮನವಿ ಮಾಡಿದೆ.

- Advertisement -

ಹಿಂದುತ್ವವಾದಿ ಕೋಮು ಗುಂಪಾದ ನಮೋ ಬ್ರಿಗೇಡ್ ಜುಲೈ 21ರಿಂದ ಮೂರು ದಿನಗಳ ಕಾಲ ಕಾರ್ಯಕ್ರಮ ಆಯೋಜಿಸಿದೆ. ಕಾರ್ಯಕ್ರಮದಲ್ಲಿ ಸೂಲಿಬೆಲೆ, ‘ಇನ್ನೂ ಮಲಗಿದರೆ, ಏಳುವಾಗ ಭಾರತವಿರುವುದಿಲ್ಲ’ ಎಂಬ ವಿಚಾರದ ಕುರಿತು ಮಾತನಾಡಲಿದ್ದಾರೆ. ಅವರು ಕೋಮು ದ್ವೇಷದ ಭಾಷಣ ಮಾಡಿ, ಸೌಹಾರ್ದತೆ ಕದಡಲು ಪ್ರಚೋದನೆ ನೀಡುವ ಸಾಧ್ಯತೆ ಇರುವುದರಿಂದ ಅವರಿಗೆ ಕುಂದಾಪುರ ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಹಿಂದೆ ಸೂಲಿಬೆಲೆ ಅವರ ಸ್ವಂತ ಜಿಲ್ಲೆಯಾದ ಉತ್ತರ ಕನ್ನಡಕ್ಕೆ ಪ್ರವೇಶಿಸದಂತೆ ಅಲ್ಲಿನ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. ಅಂತೆಯೇ ಕುಂದಾಪುರಕ್ಕೂ ಪ್ರವೇಶಿಸದಂತೆ ಆದೇಶಿಸಬೇಕು ಎಂದು ಸೌಹಾರ್ದ ಸಮಿತಿ ಆಗ್ರಹಿಸಿದೆ.

“ಸೂಲಿಬೆಲೆಯವರು ನೇರವಾಗಿ ಹೇಳದಿದ್ದರೂ, ಒಂದು ರಾಜಕೀಯ ಪಕ್ಷದ ಸಕ್ರಿಯ ಕಾರ್ಯಕರ್ತನಂತೆ ಕೆಲಸ ಮಾಡುತ್ತಾರೆ. ಪ್ರಜಾಪ್ರಭುತ್ವ ದೇಶದಲ್ಲಿ ಎಲ್ಲರಿಗೂ ಅವರವರು ನಂಬಿದ ರಾಜಕೀಯ ಪಕ್ಷದ ಧೋರಣೆಗಳನ್ನು ಪ್ರಚಾರ ಮಾಡುವ ಹಕ್ಕಿದೆ. ಆದರೆ ಯುವ ಮನಸ್ಸುಗಳೇ ಹೆಚ್ಚಿರುವ ಕಾಲೇಜಿನ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಿರುವುದು ಆತಂಕ ಉಂಟುಮಾಡಿದೆ. ಅದೇ ಕಾಲೇಜಿನಲ್ಲಿ ಈ ಹಿಂದೆ ಮತೀಯ ದ್ವೇಷದ ವಿವಾದಗಳನ್ನು ಸೃಷ್ಟಿಸಿ, ಹಲವಾರು ಹೆಣ್ಣು ಮಕ್ಕಳು ತಮ್ಮ ವ್ಯಾಸಂಗವನ್ನು ನಿಲ್ಲಿಸುವಂತಾಗಿತ್ತು” ಎಂದು ಸಮಿತಿಯ ಸಂಚಾಲಕ ರಾಜೇಶ್ ವಡೇರ ತಿಳಿಸಿದ್ದಾರೆ.

ಸಾಮಾಜಿಕ ಸಹಬಾಳ್ವೆಯ ಪರಂಪರೆಗೆ ಧಕ್ಕೆ ತರುವ ಕಾರ್ಯಕ್ರಮಗಳನ್ನು ಶಿಕ್ಷಣ ಸಂಸ್ಥೆಗಳಲ್ಲಿ ನಡೆಸಲು ಅವಕಾಶ ನೀಡಬಾರದು ಎಂದು ಕೋರುತ್ತೇವೆ ಅವರು ಒತ್ತಾಯಿಸಿದ್ದಾರೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...