ಉಡುಪಿ | ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಜಿಲ್ಲಾಧಿಕಾರಿಗೆ ಮನವಿ

Date:

ಉಡುಪಿ ಜಿಲ್ಲೆಯಲ್ಲಿ ವಿಮಾನಯಾನ ಮಾಡುವ ಪ್ರಯಾಣಿಕರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲೆಗೆ ಸ್ವಂತ ವಿಮಾನ ನಿಲ್ದಾಣದ ಅಗತ್ಯತೆ ತೀವ್ರವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತರು ಮತ್ತು ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.

- Advertisement -

ಉಡುಪಿ, ಮಣಿಪಾಲ, ಬ್ರಹ್ಮಾವರ, ಕುಂದಾಪುರ, ಬೈಂದೂರು, ಕಾರ್ಕಳ, ಹೆಬ್ರಿ ಹಾಗೂ ಕಾಪು ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಉದ್ಯೋಗ, ಶಿಕ್ಷಣ ಮತ್ತು ವೈದ್ಯಕೀಯ ಕಾರಣಗಳಿಗೆ ಹೆಚ್ಚುತ್ತಿರುವ ವಿಮಾನ ಪ್ರಯಾಣಿಕರ ಸಂಖ್ಯೆ ಸ್ಥಳೀಯ ವಿಮಾನ ನಿಲ್ದಾಣದ ಅವಶ್ಯಕತೆಯನ್ನು ಮತ್ತಷ್ಟು ಗಟ್ಟಿಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮನವಿಯಲ್ಲಿ, ಹಾವಂಜೆ ಗ್ರಾಮದ ಕೀಳಂಜೆ ಪ್ರದೇಶವನ್ನು ವಿಮಾನ ನಿಲ್ದಾಣಕ್ಕಾಗಿ ಯೋಗ್ಯ ಸ್ಥಳವೆಂದು ಸೂಚಿಸಲಾಗಿದೆ. ಸುಮಾರು 900 ಏಕರ ಸರಕಾರಿ ಭೂಮಿ ಹೊಂದಿರುವ ಈ ಪ್ರದೇಶವು ಸಮತಟ್ಟಾದ, ಎತ್ತರದ ಭೂ ಭಾಗವಾಗಿದ್ದು, ಅರಣ್ಯ ಇಲಾಖೆಯವರಿಂದ ನೆಡಲಾಗಿರುವ ಆಕೇಶಿಯ ಮರಗಳು ಈಗ ಕಟಾವಿಗೆ ಬಂದಿರುವುದರಿಂದ ಭೂ ಉಪಯೋಗ ಸಾಧ್ಯತೆ ಹೆಚ್ಚಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಈಗಾಗಲೇ ಮೂಲಸೌಕರ್ಯ ಅಭಿವೃದ್ಧಿ ನಡೆಯುತ್ತಿದ್ದು, ಮೂರುವರೆ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ರಿಂಗ್ ರೋಡ್, ಬೃಹತ್ ಸೇತುವೆ ಹಾಗೂ ಸ್ವರ್ಣ ನದಿಯಲ್ಲಿ ನಿರ್ಮಿಸಲಾಗುತ್ತಿರುವ ಅಣೆಕಟ್ಟುಗಳು ಭವಿಷ್ಯದ ವಿಮಾನ ನಿಲ್ದಾಣಕ್ಕೆ ಹಿತಕರವಾಗಿದ್ದಾರೆಂದು ಅಭಿಪ್ರಾಯ ವ್ಯಕ್ತಪಡಿಸಲಾಗಿದೆ. ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಈ ಪ್ರದೇಶ ಅತ್ಯುತ್ತಮವಾಗಿರುವುದರಿಂದ ಜಿಲ್ಲಾಡಳಿತ ವಿಮಾನ ನಿಲ್ದಾಣಕ್ಕೆ ಕೀಳಂಜೆ ಪ್ರದೇಶವನ್ನು ಪರಿಗಣಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್ ಸರಳಬೆಟ್ಟು, ಹಿರಿಯ ಕಾಂಗ್ರೆಸ್ ಮುಖಂಡ ಜಯಶೆಟ್ಟಿ ಬನ್ನಂಜೆ, ಪರಿಸರ ಪ್ರೇಮಿ ಪಾವ್ಲ್ ಡಿ ಅಲ್ಮೆಡಾ, ಅಮೇಡಾ ಡಿಸೋಜ, ತೋಮಸ್ ಡಿಸೋಜ ಹಾಗೂ ಜಾನ್ ಡಿಸೋಜ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...