ಉಡುಪಿ | ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ

Date:

Advertisements

ಉಡುಪಿ ಜಿಲ್ಲೆಯ ಅರ್ಹ ಭಾರತೀಯ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರಿಸಲು ಅವಕಾಶವಿದ್ದು, ಅರ್ಹ ದಾಖಲೆಗಳನ್ನು ನೀಡುವುದರೊಂದಿಗೆ ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿ ಮಾತನಾಡುತ್ತಿದ್ದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಉಡುಪಿ ಜಿಲ್ಲಾ ವ್ಯಾಪ್ತಿಯ ಬೈಂದೂರು, ಕುಂದಾಪುರ, ಉಡುಪಿ, ಕಾಪು ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗದ ವೆಬ್‌ಸೈಟ್ www.ceokarnataka.kar.nic.in ಮತ್ತು ಜಿಲ್ಲಾಧಿಕಾರಿಯವರ ಕಚೇರಿಯ ವೆಬ್‌ಸೈಟ್ www.udupi.nic.in ನಲ್ಲಿ ಹಾಗೂ ಜಿಲ್ಲೆಯ ಎಲ್ಲಾ ಮತಗಟ್ಟೆ ಮಟ್ಟದಲ್ಲಿ ನೇಮಕ ಮಾಡಿರುವ ಮತಗಟ್ಟೆ ಮಟ್ಟದ ಅಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಯಾವುದೇ ಆಕ್ಷೇಪಣೆ ಹಾಗೂ ಕ್ಲೇಮ್‌ಗಳನ್ನು ನವೆಂಬರ್ 28ರ ಒಳಗೆ ಸಲ್ಲಿಸಬಹುದಾಗಿದ್ದು, ಇವುಗಳನ್ನು ಡಿಸೆಂಬರ್ 24 ರಂದು ವಿಲೇವಾರಿ ಮಾಡಲಾಗುವುದು. 2025 ರ ಜನವರಿ 6 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದರು.

Advertisements

ಮತದಾರರ ಪಟ್ಟಿಗೆ 2025 ರ ಜನವರಿ 01, ಏಪ್ರಿಲ್ 01, ಜುಲೈ 01, ಅಕ್ಟೋಬರ್ 01 ಕ್ಕೆ 18 ವರ್ಷ ಪೂರ್ಣಗೊಳಿಸಿರುವ ಅರ್ಹ ಭಾರತೀಯ ನಾಗರಿಕರು ವಯಸ್ಸಿನ ಹಾಗೂ ವಾಸ್ತವ್ಯದ ದಾಖಲೆಗಳನ್ನು ಅರ್ಜಿಯೊಂದಿಗೆ ಸಲ್ಲಿಸಿ ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ನೋಂದಾಯಿಸಿಕೊಳ್ಳಬಹುದಾಗಿದೆ ಎಂದ ಅವರು, ವಿಶೇಷ ಮತದಾರರ ನೋಂದಣಿ ಶಿಬಿರಗಳನ್ನು 2024 ರ ನವೆಂಬರ್ 9, 10, 23 ಹಾಗೂ 24 ರಂದು ಪ್ರತಿಯೊಂದು ಮತಗಟ್ಟೆಗಳಲ್ಲಿ ನಡೆಯಲಿದೆ ಎಂದರು.

ಹೊಸ ಮತದಾರರ ಪಟ್ಟಿ ನೋಂದಣಿಗೆ ನಮೂನೆ -6 ರಲ್ಲಿ, ಅನಿವಾಸಿ ಭಾರತೀಯರು 6-ಎ ನಲ್ಲಿ ಸಲ್ಲಿಸಬಹುದಾಗಿದೆ. ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದು ಹಾಕಲು ಅರ್ಜಿ ನಮೂನೆ-7, ಒಂದು ವಿಧಾನಸಬಾ ಕ್ಷೇತ್ರದಿಂದ ವಾಸಸ್ಥಳ ಬದಲಾಯಿಸಲು ನಮೂನೆ-8 ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದರು.

ಅರ್ಜಿದಾರರು ಆನ್‌ಲೈನ್ ಮೂಲಕ ವೆಬ್ವೆಬ್‌ಸೈಟ್ ಹಾಗೂ ವೋಟರ್ ಹೆಲ್ಪ್‌ಲೈನ್ ಆ್ಯಪ್ www.nvsp.in ನಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಹಾಗೂ ತಿದ್ದುಪಡಿಗಳಿಗಾಗಿ ಅವಕಾಶವಿದ್ದು, ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ತೆರೆಯಲಾದ ಜಿಲ್ಲಾ ಮತದಾರರ ಸಹಾಯವಾಣಿ ಉಚಿತ ದೂರವಾಣಿ ಸಂಖ್ಯೆ: 1950 ಅನ್ನು ಸಂಪರ್ಕಿಸಬಹುದಾಗಿದೆ ಎಂದರು.

ಇದನ್ನು ಓದಿದ್ದೀರಾ? ತೆಲಂಗಾಣ | ಮಗ ಮೃತಪಟ್ಟಿರುವುದು ತಿಳಿಯದೆ 4 ದಿನ ಶವದೊಂದಿಗೆ ಕಳೆದ ಅಂಧ ದಂಪತಿ!

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಏನಾದರೂ ಬದಲಾವಣೆಗಳಿದ್ದಲ್ಲಿ ಮತದಾರರು ಸಮೀಪದ ತಾಲೂಕು ಕಚೇರಿಗಳಿಗೆ ಅಥವಾ ವಾಸವಿರುವ ವಿಳಾಸ ವ್ಯಾಪ್ತಿಗೆ ಬರುವ ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ಭೇಟಿಯಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಇದೇ ಸಂದರ್ಭದಲ್ಲಿ ಜಿಲ್ಲೆಯ ಕರಡು ಮತದಾರರ ಪಟ್ಟಿಯನ್ನು ರಾಜ್ಯದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ನೀಡಲಾಯಿತು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಬಿಜೆಪಿಯ ಚಂದ್ರಶೇಖರ ಪ್ರಭು, ಸಿ.ಪಿ.ಐ ನ ಮೋಹನ್ ಜಿ.ಎಂ, ಕಾಂಗ್ರೆಸ್‌ನ ಶ್ರೀನಿವಾಸ ಹೆಬ್ಬಾರ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X