ಉಡುಪಿ | ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಂಸದರ ಕಚೇರಿ ಎದುರು ಧರಣಿ

Date:

Advertisements

ದೇಶದ ಮಾನವ ಸಂಪನ್ಮೂಲದ ಬೆಳವಣಿಗೆಗೆ ಪೂರಕವಾಗಿ 1974ರಲ್ಲಿ ಆರಂಭವಾದ ರಾಷ್ಟ್ರೀಯ ಮಕ್ಕಳ ನೀತಿಗೆ ಸಂಬಂದಿಸಿದ ಐಸಿಡಿಎಸ್‌-1975 ಜಾರಿಗೆ ಬಂದು 45ವರ್ಷಗಳು ಕಳೆದಿವೆ. ಆದರೂ, ಈ ಯೋಜನೆಯನ್ನು ಬಲಿಷ್ಠಗೊಳಿಸಲು ಇಲಾಖೆಯಾಗಿ ಪರಿಗಣಿಸದೆ, ಸತತವಾಗಿ ಅನುದಾನ ಕಡಿತಗೊಳಿಸಿ ಬಲಹೀನಗೊಳಿಸಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಪ್ರತಿಭಟನೆ ನಡೆಸಿದೆ.

ಉಡುಪಿಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರ ಕಚೇರಿ ಎದುರು ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. “ಐಸಿಡಿಎಸ್‌ ಯೋಜನೆಯಡಿ ದೇಶದಲ್ಲಿ ಸುಮಾರು 11 ಕೋಟಿ ಮಕ್ಕಳು ಮತ್ತು 2 ಕೋಟಿ ಗರ್ಭಿಣಿ, ಬಾಣಂತಿಯರು ಫಲಾನುಭವಿಗಳಾಗಿದ್ದಾರೆ. ಯೋಜನೆಯಿಂದ ಅಪೌಷ್ಠಿಕತೆ, ತಾಯಿ ಮಕ್ಕಳ ಮರಣ ತಡೆಯಲು ಸಾಧ್ಯವಾಗಿದೆ. ಆದರೆ, ಅನುದಾನ ಕಡಿತದಿಂದಾಗಿ ಯೋಜನೆಯ ಫಲಾನುಭವಿಗಳಿಗೆ ಆಹಾರ, ಶಿಕ್ಷಣಕ್ಕೆ ತುಂಬಾ ತೊಂದರೆಯಾಗಲಿದೆ. ಇದರಿಂದ ಅಪೌಷ್ಠಿಕತೆಯ ಮಟ್ಟ ಹೆಚ್ಚಾಗಲಿದೆ” ಎಂದು ಹೇಳಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷೆ ಭಾರತಿ, “ಈಗಾಗಲೇ ಭಾರತ ಹಸಿವಿನ ಸೂಚ್ಯಾಂಕದಲ್ಲಿ 112ನೇ ಸ್ಥಾನದಲ್ಲಿದೆ. 68% ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ. ದೇಶದಲ್ಲಿ ಪ್ರತೀ ಮೂರು ಮಕ್ಕಳಲ್ಲಿ ಒಂದು ಮಗು ಕಡಿಮೆ ತೂಕ ಹೊಂದಿರುವುದಾಗಿ ಎನ್‌ಎಫ್‌ಎಚ್ಎಸ್‌-5ರ ಅಂಕಿ ಅಂಶಗಳೇ ಹೇಳುತ್ತಿವೆ. ಅಲ್ಲದೆ, ದೇಶದಲ್ಲಿ ಐಸಿಡಿಎಸ್‌ ಯೋಜನೆಯ 2,000 ಪ್ರಾಜೆಕ್ಟ್‌ಗಳಲ್ಲಿ ಸುಮಾರು 13.5 ಲಕ್ಷ ಅಂಗನವಾಡಿ ಕೇಂದ್ರಗಳಲ್ಲಿ  26 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಸುಮಾರು 49 ವರ್ಷಗಳಿಂದ ದುಡಿಯುತ್ತಿದ್ದಾರೆ. ಅವರಿಗೆ ಕನಿಷ್ಠ ವೇತನ, ಪಿಎಫ್, ಇಎಸ್‌ಐ, ಪಿಂಚಣಿ ಮುಂತಾದ ಸೌಲಭ್ಯಗಳು ದೊರೆಯುತ್ತಿಲ್ಲ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

Advertisements

ಕೇಂದ್ರ ಸರ್ಕಾರದ ಪೋಷಣ್ ಅಭಿಯಾನ, ಪೋಷಣ್ ಟ್ಯಾಕರ್, ಮಾತೃವಂದನ ಸರ್ವೆಗಳು ಸೇರಿದಂತೆ ನಾನಾ ಕೆಲಸಗಳನ್ನು ಅಂಗನವಾಡಿ ಆರ್ಯಕರ್ತೆರು ಮಾಡುತ್ತಿದ್ದಾರೆ. ಆದರೆ, ಅವರಿಗೆ ಕನಿಷ್ಠ ಸೌಲಭ್ಯಗಳನ್ನು ನೀಡದಿರುವುದು ವಿಷಾದನೀಯ. 45 ಮತ್ತು 46ನೇ ಕಾರ್ಮಿಕ ಸಮ್ಮೇಳನದಲ್ಲಿ ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರನ್ನು ಕೆಲಸಗಾರರೆಂದು ಪರಿಗಣಿಸಿ ಅವರಿಗೆ ಕನಿಷ್ಠ ವೇತನ, ಇಎಸ್‌ಐ, ಪಿಎಫ್‌ ಸೌಲಭ್ಯ ನೀಡಿ, ಕೆಲಸವನ್ನು ಕಾಯಂಗೊಳಿಸಬೇಕೆಂದು ಶಿಫಾರಸು ಮಾಡಲಾಗಿದೆ. ಇದೇ ರೀತಿಯ ಶಿಫಾರಸನ್ನು ರಾಜ್ಯ ಸಭೆಯ ಸಂಸದೀಯ ಸಮಿತಿಯೊಂದು ಇತ್ತೀಚಿಗೆ ಮಾಡಿದೆ. ಈ ಕುರಿತಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಗತ್ಯ ರೂಪು ರೇಷೆಗಳನ್ನು ರಚಿಸಬೇಕು” ಎಂದು ಹೇಳಿದ್ದಾರೆ.

ಪ್ರತಿಭಟನಾಕಾರರ ಹಕ್ಕೊತ್ತಾಯಗಳು

1. ದೇಶದ ಎಲ್ಲಾ ಅಂಗನವಾಡಿ ಕಾರ್ಯಕರ್ತೆ, ಸಹಾಯಕರಿಗೆ ಕನಿಷ್ಠವೇತನ 31,000 ಜಾರಿಗೊಳಿಸಬೇಕು

2. ಸಾಮಾಜಿಕ ಭದ್ರತೆಗಳಾದ EȘI, PF, ಪೆನ್ಮನ್, NPS ಬದಲಿಗೆ OP ಜಾರಿಗೊಳಿಸಬೇಕು.

3. ICDSನ್ನು ಇಲಾಖೆಯಾಗಿ ಪರಿಗಣಿಸಿ ನೌಕರರನ್ನು ಕಾಯಂಗೊಳಿಸಬೇಕು.

4. ICDSಗೆ ಕಡಿತಮಾಡಿರುವ 8200 ಕೂಡಲೇ ಬಿಡುಗಡೆಗೊಳಿಸಬೇಕು

5. ಆಹಾರ, ಆರೋಗ್ಯ, ಶಿಕ್ಷಣವನ್ನು ದೇಶದ ಎಲ್ಲಾ ಜನರಿಗೆ ಖಾತ್ರಿಗೊಳಿಸಿ ದೇಶವನ್ನು ಅಭಿವೃದ್ಧಿಪಡಿಸಬೇಕು

ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಶೀಲಾ ನಾಡ, ಉಡುಪಿ ಜಿಲ್ಲಾ ಆಶಾ ಕಾರ್ಯಕರ್ತರ ಸಂಘ, ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಫೆಡರೇಷನ್, ಸಿಐಟಿಯು ಉಡುಪಿ ಜಿಲ್ಲೆಯ ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X