ಉಡುಪಿ | ಆರೈಕೆದಾರರಿಗೆ ಸರಿಯಾದ ಮಾಹಿತಿ ನೀಡಿದರೆ ವಿಶೇಷಚೇತನರ ಬದುಕಿಗೆ ಬೆಳಕು ಮೂಡುತ್ತದೆ : ಡಾ. ಬಸವರಾಜ ಹುಬ್ಬಳ್ಳಿ

Date:

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಉಡುಪಿ, ಆಶಾ ನಿಲಯ ವಿಶೇಷ ಶಾಲೆ ಉಡುಪಿ ಮತ್ತು ಅಂಗವಿಕಲರ ಗ್ರಾಮೀಣ ಮತ್ತು ನಗರ ಪುನರ್ವಸತಿ ಯೋಜನೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ನಗರದ ಆಶಾ ನಿಲಯ ವಿಶೇಷ ಶಾಲೆಯಲ್ಲಿ ನಡೆದ ವಿಶ್ವ ಆರೈಕೆದಾರರ ದಿನಾಚರಣೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ ಉದ್ಘಾಟಿಸಿ, ಆರೈಕೆದಾರರಿಗೆ ಸರಿಯಾದ ಮಾಹಿತಿಯನ್ನು ನೀಡಿದ್ದಲ್ಲಿ ವಿಶೇಷಚೇತನರ ಬದುಕಿಗೆ ಬೆಳಕು ನೀಡಿದಂತಾಗುತ್ತದೆ ಎಂದರು.

- Advertisement -

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ. ಆರೈಕೆದಾರರಿಗಿರುವ ಪ್ರೋತ್ಸಾಹಧನದ ಬಗ್ಗೆ ಮಾಹಿತಿ ನೀಡಿದರು. ಉಡುಪಿ ತಾಲೂಕು ವಿವಿದ್ದೋದ್ಧೇಶ ಪುನರ್ವಸತಿ ಕಾರ್ಯಕರ್ತರಾದ ಮಧುಸೂಧನ್ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಬೆಂಗಳೂರು ಇದರ ನಿವೃತ್ತ ಸಹಾಯಕ ನಿರ್ದೇಶಕ ನಿರಂಜನ ಭಟ್
ಉಪನ್ಯಾಸ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಕಾರ್ಯಕ್ರಮದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಇಲಾಖೆಯ ಕಲ್ಯಾಣಾಧಿಕಾರಿ ರತ್ನಾ ಸುವರ್ಣ, ಆಶಾ ನಿಲಯ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯ ಯೂನಿಸ್ ಕ್ರಿಸ್ಟಬೆಲ್, ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕುಗಳ ಗ್ರಾಮೀಣ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರು, ನಗರ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರು, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಸಿಬ್ಬಂದಿಗಳು, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಸಿಬ್ಬಂದಿಗಳು, ಹಿರಿಯ ನಾಗರೀಕರ ಸಹಾಯವಾಣಿ ಕೇಂದ್ರದ ಸಿಬ್ಬಂದಿಗಳು, ಆಶಾನಿಲಯ ವಿಶೇಷ ಶಾಲೆಯ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ವಿಲಚೇತನರ ಪುನರ್ವಸತಿ ಕೇಂದ್ರದ ಸದಸ್ಯ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಜಯಶ್ರೀ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...