ಉಡುಪಿ‌ | ವಾರದಲ್ಲಿ ನಾಲ್ಕು ದಿನಗಳ ಕಾಲ ಪೌಷ್ಠಿಕ ಆಹಾರವಾಗಿ ಮೊಟ್ಟೆ ವಿತರಣೆಗೆ ಚಾಲನೆ

Date:

ಕೇಂದ್ರ ಪುರಸ್ಕೃತ ಮಧ್ಯಾಹ್ನ ಬಿಸಿಯೂಟ ಯೋಜನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಅನುದಾನದಿಂದ ವಾರಕ್ಕೆ ಎರಡು ದಿನ ಪೂರಕ ಪೌಷ್ಟಿಕ ಆಹಾರವಾಗಿ ಮೊಟ್ಟೆ ಅಥವಾ ಚಿಕ್ಕಿ ಬಾಳೆಹಣ್ಣು ಇವುಗಳನ್ನು ವಿತರಿಸಲಾಗುತ್ತಿತ್ತು. ಅಜೀಮ್ ಪ್ರೇಮ್ ಜಿ ಫೌಂಡೇಶನ್ ವತಿಯಿಂದ ವಾರದ ನಾಲ್ಕು ದಿನಗಳ ಕಾಲ ಹೆಚ್ಚುವರಿಯಾಗಿ ನೀಡುವ ಕಾರ್ಯಕ್ರಮಕ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ (ಬೋರ್ಡ್ ಹೈ ಸ್ಕೂಲ್)ನಲ್ಲಿ ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಚಾಲನೆ ನೀಡಿದರು.

- Advertisement -

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಅಪೌಷ್ಟಿಕತೆಯಿಂದ ಬಳಲಬಾರದು. ಭೌತಿಕವಾಗಿ ಮತ್ತು ಬೌದ್ಧಿಕವಾಗಿ ಬೆಳವಣಿಗೆ ಹೊಂದಲು ಈ ಯೋಜನೆಯು ಸಹಕಾರಿಯಾಗಿದ್ದು, ಸರಕಾರದೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ವಾರದ ಎಲ್ಲಾ ದಿನಗಳಲ್ಲೂ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಬೇಯಿಸಿದ ಮೊಟ್ಟೆ ಅಥವಾ ಶೇಂಗಾ ಚಿಕ್ಕಿ ಅಥವಾ ಬಾಳೆಹಣ್ಣು ವಿತರಿಸಲು ರೂಪಾಯಿ 1500 ಕೋಟಿ ಮಿಕ್ಕಿ ಅನುದಾನವನ್ನು ನೀಡಿರುವ ಕ್ರಮ ಶ್ಲಾಘನೀಯ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಗಣಪತಿ ಕೆ. ಕ್ಷೇತ್ರ ಶಿಕ್ಷಣಾಧಿಕಾರಿ ಡಾಕ್ಟರ್ ಎಲ್ಲಮ್ಮ, ಪಿಎಂ ಪೋಶನ್ ಶಕ್ತಿ ನಿರ್ಮಾಣ- ಅಕ್ಷರ ದಾಸೋಹ ಜಿಲ್ಲಾ ಶಿಕ್ಷಣಾಧಿಕಾರಿ ಡಾ.ಅಶೋಕ ಕಾಮತ್, ಡಯಟ್‌ನ ಉಪನ್ಯಾಸಕ ಯೋಗ ನರಸಿಂಹಸ್ವಾಮಿ, ತಾಲೂಕು ಸಹಾಯಕ ನಿರ್ದೇಶಕರು ವಿವೇಕ ಗಾಂವ್ಕರ್, ಕಾಲೇಜಿನ ಪ್ರಾಂಶುಪಾಲ ಲೀಲಾಬಾಯಿ ಭಟ್, ಉಪ ಪ್ರಾಂಶುಪಾಲೆ ಭಾಗೀರಥಿ, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...