ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬ್ರಹ್ಮಾವರ ವಲಯ ನಿರ್ಮಲ ಆಂಗ್ಲ ಮಾಧ್ಯಮ ಶಾಲೆ ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ಹ್ಯಾಂಡ್ ಬಾಲ್ ಪಂದ್ಯಾಟವನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರದ ನಿರ್ಮಲಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, “ಕ್ರೀಡೆಯಲ್ಲಿ ಸೋಲು-ಗೆಲುವು ಪ್ರಮುಖವಾದದ್ದು. ಭಾಗವಹಿಸಿದವರು ತಾವು ಎದುರಿಸುವ ತಂಡವನ್ನು ಸ್ನೇಹಿತರಂತೆ ಕಾಣಬೇಕು. ಕ್ರೀಡೆ ನಿಮ್ಮೆಲ್ಲರಲ್ಲಿ ಸಾಮರಸ್ಯದ ಭಾವನೆ ತುಂಬಲಿ” ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫಾದರ್ ವಿನ್ಸೆಂಟ್ ರೋಬೋಟ್ ಕಾರ್ಸ್ಟ, ಮುಖ್ಯ ಅತಿಥಿಗಳಾಗಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಣಪತಿ ಕೆ, ಚಂದ್ರಶೇಖರ ಶೆಟ್ಟಿ, ಶ್ರೀಮತಿ ಪದ್ಮಾವತಿ, ಜಯಕುಮಾರ್ ಶೆಟ್ಟಿ, ಪ್ರಸನ್ನ ಕುಮಾರ್ ಶೆಟ್ಟಿ, ನಿರ್ಮಲ ಆಂಗ್ಲ ಮಾಧ್ಯಮ ಶಾಲೆಯ ಜಂಟಿ ಕಾರ್ಯದರ್ಶಿಗಳಾದ ಫಾದರ್ ಜಾನ್ ಫೆರ್ನಾಂಡಿಸ್, ಮುಖ್ಯೋಪಾಧ್ಯಾಯರಾದ ಸಿಸ್ಟರ್ ಕಾನುಕ, ಆಡಳಿತಾಧಿಕಾರಿ ಫಾದರ್ ಲೆನ್ಸನ್ ಲೋಬೊ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಉದ್ಘಾಟನಾ ಸಮಾರಂಭವು ಕವಿತಾರವರ ನಿರೂಪಣೆ, ಶ್ರೀಮತಿ ಅರ್ಚನಾರವರ ಸ್ವಾಗತ ಹಾಗೂ ಶ್ರೀಮತಿ ಐರಿನ್ ರವರ ವಂದನಾಪಣೆಯೊಂದಿಗೆ ಮುಕ್ತಾಯಗೊಂಡಿತು.
