ಉಡುಪಿ | ಇಪ್ಪತ್ತು ವರ್ಷಗಳ ಬಳಿಕ, ಮನೆ ಸೇರಿದ ಹಿರಿಯ ಜೀವ.

Date:

ಕಳೆದ ಇಪ್ಪತ್ತು ವರ್ಷಗಳಿಂದ, ಮನೆಯವರ ಸಂಪರ್ಕಕ್ಕೆ ಸಿಗದೆ, ದೂರ ಉಳಿದುಕೊಂಡಿದ್ದ ವೃದ್ಧರನ್ನು ಮನೆ ಮಂದಿಗೆ ಹಸ್ತಾಂತರಿಸುವಲ್ಲಿ ಉಡುಪಿ ಜಿಲ್ಲಾ ನಾಗರೀಕ ಸಮಿತಿ, ಹಾಗೂ ಹೊಸಬದುಕು ಆಶ್ರಮ, ಮತ್ತು‌ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರವು ಯಶಸ್ವಿಯಾಗಿದೆ.

- Advertisement -

ನಲವತ್ತು ದಿನಗಳ ಹಿಂದೆ, ಶ್ರೀಕೃಷ್ಣ ಮಠದ‌ ರಥಬೀದಿಯಲ್ಲಿ ವೃದ್ಧರೊಬ್ಬರು ಯಾತ್ರಿಕರಲ್ಲಿ ಭಿಕ್ಷೆ ಯಾಚಿಸುತ್ತಿರುವುದನ್ನು ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ‌ ಒಳಕಾಡುವರು ಗಮನಿಸಿದ್ದರು. ವಿಚಾರಿಸಿದಾಗ ಜೀವನ‌‌‌ ನಿರ್ವಹಣೆಗೆ ಅಸಹಾಯಕತೆ ಎದುರಾಗಿರುವುದರಿಂದ, ಭಿಕ್ಷಾಟನೆಯಿಂದ ಜೀವನ ಸಾಗಿಸುತ್ತಿದ್ದನೆಂದು, ವೃದ್ಧರು ಒಳಕಾಡು ಅವರಲ್ಲಿ ಹೇಳಿಕೊಂಡರು. ಭಿಕ್ಷಾಟನೆ ಕಾನೂನು ಪ್ರಕಾರ ಅಪರಾಧವಾಗಿದೆ ಎಂದು ವೃದ್ಧರ ಮನವೊಲಿಸಿದ ಒಳಕಾಡುವರು, ಬಳಿಕ ಕೋರ್ಟ್ ರಸ್ತೆಯಲ್ಲಿರುವ ಹೊಸಬದುಕು ಆಶ್ರಮದಲ್ಲಿ ಪುರ್ನವಸತಿ ಕಲ್ಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಆಶ್ರಮದ ಸಂಚಾಲಕ ವಿನಯಚಂದ್ರ ಅವರು, ಅದೇಷ್ಟೋ ದಿನಗಳಿಂದ ಸ್ನಾನಾದಿಗಳಿಂದ ದೂರ ಉಳಿದಿದ್ದ ವೃದ್ಧರನ್ನು ಶುಚಿಗೊಳಿಸಿ, ಪೌಷ್ಟಿಕ ಆಹಾರ ಒದಗಿಸಿ ಸಧೃಡವಾಗಿಸಿದರು. ಬಳಿಕ‌ ವೃದ್ಧರ ಪೂರ್ವಾಪರಗಳನ್ನು ಕಲೆ ಹಾಕಿದಾಗ, ವೃದ್ಧರು ಕುಂದಾಪುರ ಭಾಗದವರೆಂದು, ಹೆಸರು ನಾರಾಯಣ ಎಂದು ತಿಳಿದುಬಂದಿತು.‌ ಬಳಿಕ ಒಳಕಾಡುವರು ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಸಿಬ್ಬಂದಿಗಳ ನೆರವು ಪಡೆದು, ಅವರ ಮೂಲಕ ವೃದ್ಧರ ಸಂಬಂಧಿಕರನ್ನು ಆಶ್ರಮಕ್ಕೆ ಬರಮಾಡಿಸಿ ವೃದ್ಧರನ್ನು ಸಂಬಂಧಿಕರಿಗೆ ಒಪ್ಪಿಸಿದರು. ವೈಮನಸ್ಸಿನಿಂದಆಗಿ ವೃದ್ಧರು ಮನೆ ತ್ಯಜಿಸಿದ್ದರೆಂದು ತಿಳಿದುಬಂದಿತು. ಕಾರ್ಯಾಚರಣೆಯಲ್ಲಿ ಜಿಲ್ಲಾ ಯೋಜನಾ ಸಂಯೋಜಕಿ ಅಶ್ವಿನಿ, ಆಪ್ತ ಸಮಾಲೋಚಕ ರೋಶನ್ ಅಮೀನ್ ಭಾಗಿಯಾಗಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...