ಉಡುಪಿ ಜಿಲ್ಲಾ ಸರ್ಜನ್ ಬದಲಾವಣೆ; ಸರ್ಕಾರದ ಕ್ರಮಕ್ಕೆ ಆಕ್ಷೇಪ

Date:

Advertisements

ಚುನಾವಣಾ ದಿನಾಂಕ ಘೋಷಣೆಯಾಗುವ ಹಂತದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಅವರನ್ನು ಬದಲಾವಣೆ ಮಾಡಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.

‌ಸಾಮಾಜಿಕ ಕಾರ್ಯಕರ್ತ ರಾಮ ದಿವಾಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದು, “ಚುನಾವಣೆ ಘೋಷಣೆಯಾಗುವ ಕೆಲವೇ ಕೆಲವು ದಿನಗಳ ಮೊದಲು ರಾಜ್ಯ ಸರ್ಕಾರ ಮಾಡಿರುವ ಈ ಬದಲಾವಣೆ ಸೂಕ್ತವಾದುದಲ್ಲ. ರಾಜ್ಯ ಚುನಾವಣಾ ಆಯೋಗ ಮತ್ತು ಜಿಲ್ಲಾಡಳಿತ ಈ ಬದಲಾವಣೆಯನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು” ಎಂದು ಹೇಳಿದ್ದಾರೆ.

“ನಿನ್ನೆ ಮೊನ್ನೆಯವರೆಗೂ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಸರ್ಜನ್ ಆಗಿದ್ದವರು ಡಾ ವೀಣಾ ಕುಮಾರಿ. ಇವರು ಪ್ರಾಮಾಣಿಕತೆ ಮತ್ತು ದಕ್ಷತೆಗೆ ಹೆಸರಾದವರು. ಜನಪರ ಕಾಳಜಿಯ ಜನಸೇವಕರು ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವಾಗಿದೆ. ಯಾವುದೇ ರೀತಿಯ ಭ್ರಷ್ಟಾಚಾರಕ್ಕೂ ಅವಕಾಶ ನೀಡದೆ ಕರ್ತವ್ಯ ಪಾಲಿಸುತ್ತಿದ್ದ ಡಾ. ವೀಣಾ ಕುಮಾರಿ ಅವರನ್ನು ಬದಲಾಯಿಸಿರುವ ಸರ್ಕಾರದ ಕ್ರಮ ಅಸ್ವೀಕಾರಾರ್ಹ ಮತ್ತು ಶಂಕಾಸ್ಪದ ನಿರ್ಧಾರವಾಗಿದೆ”‌ ಎಂದು ಹೇಳಿದರು.

Advertisements

“ಡಾ. ವೀಣಾಕುಮಾರಿ ಸೇವಾನುಭವದಲ್ಲೂ ಹಿರಿಯರಾಗಿದ್ದರು. ಇದೀಗ ನಿಯುಕ್ತಿಗೊಂಡ ಡಾ. ಅಶೋಕ್ ಜೂನಿಯರ್ ಆಗಿದ್ದಾರೆ. ಎಂಡಿ ಆಗಿರುವ ಡಾ. ವೀಣಾ ಪರಿಶಿಷ್ಟ ಜಾತಿಯವರಾಗಿದ್ದು, ಇವರ ಬದಲಾವಣೆ ಮಹಿಳೆಯರಿಗೆ ಮತ್ತು ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರ ಮಾಡಿದ ಅನ್ಯಾಯವಾಗಿದೆ”‌ ಎಂದು ಖಂಡಿಸಿದರು.

“ಡಾ. ಅಶೋಕ್ ವಿರುದ್ಧ ಹಲವು ದೂರುಗಳಿವೆ. ಮಹಿಳಾ ಸಿಬ್ಬಂದಿಗಳಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಅಮಾನತುಗೊಂಡವರೂ ಆಗಿದ್ದಾರೆ. ಪ್ರಕರಣಗಳ ತನಿಖೆ ಮುಕ್ತಾಯಗೊಳ್ಳುವ ಮೊದಲೇ ಜಿಲ್ಲಾ ಸರ್ಜನ್ ಆಗಿ ನಿಯುಕ್ತಿ ಮಾಡಿರುವುದು ಸರಿಯಾದ ಕ್ರಮವಲ್ಲ. ಮೂರು ತಿಂಗಳ ಹಿಂದೆಯಷ್ಟೇ ಹೆಬ್ರಿಗೆ ವರ್ಗಾವಣೆಯಾಗಿದ್ದ ಡಾ. ಅಶೋಕ್ ಅವರನ್ನು ಇದೀಗ ಇಷ್ಟು ಅವಸರವಾಗಿ ಚುನಾವಣೆಯ ಸಂದರ್ಭದಲ್ಲಿ ಜಿಲ್ಲಾ ಸರ್ಜನ್ ಆಗಿ ನಿಯುಕ್ತಿಗೊಳಿದ್ದು ಖಂಡನೀಯ” ಎಂದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ

ಡಾ. ಅಶೋಕ್ ಅವರನ್ನು ನೇಮಕ ಮಾಡಿರುವುದು ಅಧಿಕಾರ ದುರುಪಯೋಗ ಮಾಡಲಿಕ್ಕಾಗಿಯೇ ಎಂಬ ಅನುಮಾನ ಸಾರ್ವಜನಿಕರಾದ ನಮಗೆ ಉಂಟಾಗಿದೆ. ಚುನಾವಣಾ ಆಯೋಗ ಈ ವಿಷಯದಲ್ಲಿ ಕೂಡಲೇ ಮಧ್ಯಪ್ರವೇಶಿಸುವ ಮೂಲಕ ರಾಜ್ಯ ಸರ್ಕಾರ ಮಾಡಿದ ನೇಮಕವನ್ನು ಹಿಂತೆಗೆದುಕೊಂಡು ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಮಾಡಬೇಕಾಗಿದೆ”‌ ಎಂದು ರಾಜ್ಯ ಚುನಾವಣಾ ಆಯೋಗ, ಜಿಲ್ಲಾ ಚುನಾವಣಾ ಅಧಿಕಾರಿಗಳು ಮತ್ತು ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X