ಉಡುಪಿ | ಶೋಷಿತ ಸಮುದಾಯದವರಿಗಾಗಿ ತನ್ನ ಇಡೀ ಜೀವನನ್ನೇ ಮುಡಿಪಾಗಿಟ್ಟವರು ಅಂಬೇಡ್ಕರ್ – ಡಿವೈಎಸ್ಪಿ ಡಿ.ಟಿ.ಪ್ರಭು

Date:

ಬಾಬಾ ಸಾಹೇಬ್ ಅಂಬೇಡ್ಕರ್ ರವರು ಸ್ವಾಭಿಮಾನ ಮತ್ತು ತ್ಯಾಗದ ಸಂಕೇತ ತನ್ನ ಸ್ವಂತ ಮಗ ತೀರಿಕೊಂಡಾಗಲೂ ಮಗನ ಮುಖ ನೋಡಲಾಗದೇ ದುಖಃವನ್ನು ನುಂಗಿಕೊಂಡು ತನ್ನ ಶೋಷಿತ ಸಮುದಾಯದವರಿಗಾಗಿ ತನ್ನ ಇಡೀ ಜೀವನನ್ನೇ ಮುಡಿಪಾಗಿಟ್ಟವರು ಅಂಬೇಡ್ಕರ್ ರವರು. ಸತತ ಎರಡು ವರ್ಷಕ್ಕೂ ಹೆಚ್ಚು ಕಾಲ ವಿಶ್ರಾಂತಿ ತೆಗೆದುಕೊಳ್ಳದೇ, ಯಾರು ಗೈರಾದರೂ ಛಲಬಿಡದೇ, ಶ್ರಮವಹಿಸಿ ಸಂವಿಧಾನ ರಚಿಸಿ ಈ ದೇಶಕ್ಕೆ ನೀಡಿದವರು ಬಾಬಾಸಾಹೇಬರು.

- Advertisement -

ನೀರೇ ಮುಟ್ಟುವ ಹಾಗಿರದ ಸಂದರ್ಭದಲ್ಲಿ ಚೌಧಾರ್ ಕೆರೆಯ ನೀರು ಕುಡಿದು ಪ್ರತಿಭಟಿಸಿದರು. ಶೋಷಿತರಿಗೆ ದೇವಸ್ಥಾನ ಪ್ರವೇಶ ನಿಷಿಧ್ಧ ಇದ್ದ ಸಂಧರ್ಭದಲ್ಲಿ ಕಾಳಾರಾಮ ದೇವಸ್ಥಾನ ಪ್ರವೇಶ ಮಾಡಿ ಈ ದೇಶದಲ್ಲಿ ನಮಗೂ ದೇವಸ್ಥಾನ ಪ್ರವೇಶಿಸುವ ಹಕ್ಕು ಇದೇ ಎಂದು ತೋರಿಸಿಕೊಟ್ಟವರು. ಬಾಬಾಸಾಹೇಬರು ಕೊಟ್ಟ ಸಂವಿಧಾನದಿಂದಲೇ ನಾನಿಂದು ಒಬ್ಬ ಅಧಿಕಾರಿಯಾಗಿ ನಿಮ್ಮ ಮುಂದೆ ನಿಂತಿದ್ದೇನೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಡಿ ಶೇಮಿಂಗ್ ತಮಾಷೆಯಲ್ಲ; ಮಾನಸಿಕ ಆರೋಗ್ಯದ ಮೇಲಾಗುವ ಮಾಯದ...

ದೇಹದ ಬಣ್ಣ, ರೂಪ, ತೂಕ-ಎತ್ತರ, ಮುಖ, ಕೂದಲು ಅಥವಾ ದೈಹಿಕ ವೈಶಿಷ್ಟ್ಯಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯನ್ನು ಹಾಸ್ಯ ಮಾಡುವುದು, ಅವಮಾನಿಸುವುದೇ ಬಾಡಿ ಶೇಮಿಂಗ್. ಇದು ಕೇವಲ ಆ ಕ್ಷಣದ ತಮಾಷೆಯ, ಹಾಸ್ಯ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಅವರು ಇಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ಉಡುಪಿ ವತಿಯಿಂದ , ಮಣಿಪಾಲದ ಪ್ರಗತಿನಗರದಲ್ಲಿ ಹಮ್ಮಿಕೊಂಡಿದ್ದ ಬಾಬಾಸಾಹೇಬ್ ಅಂಬೇಡ್ಕರ್ ರವರ 68 ನೇ ಪರಿನಿಬ್ಬಾಣದ ನುಡಿನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದ ದ.ಸಂ.ಸ.ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ ಮಾಸ್ತರ್ ಮಾತನಾಡಿ ಇಲ್ಲಿನ ಲೇಬರ್ ಕಾಲೋನಿಯಲ್ಲಿ ನಿಮಗೆ ಮನೆ ಕಟ್ಟಿ ಕೊಟ್ಟಿದ್ದು, ರಸ್ತೆ ಮಾಡಿದ್ದು, ಚರಂಡಿ ಮಾಡಿದ್ದು ಯಾವುದೇ ರಾಜಕೀಯ ಪಕ್ಷದವರಲ್ಲಾ, ಇದು ಬಾಬಾಸಾಹೇಬ್ ಅಂಬೇಡ್ಕರ್ ರವರು ಸಂವಿಧಾನದತ್ತವಾಗಿ ಕೊಟ್ಟ ಅನುದಾನದ ಆನುಸಾರ ಸಮಾಜದ ಅಭಿವೃದ್ಧಿ ಕೆಲಸ ಮಾಡಿದ್ದಾರಷ್ಟೇ. ಅದು ಅವರ ಕರ್ತವ್ಯ, ಇಲ್ಲಿರುವ ಎಲ್ಲಾ ಅಕ್ಕ ತಂಗಿಯವರು ಅಣ್ಣ ತಮ್ಮಂದಿರು ತಮ್ಮಂತೆ ಮಕ್ಕಳನ್ನು ಕೂಲಿ ಕೆಲಸಕ್ಕೆ ತಯಾರು ಮಾಡದೇ ತಮ್ಮ ಮಕ್ಕಳನ್ನು ಚೆನ್ನಾಗಿ ಓದಿಸಿ ವಿದ್ಯಾವಂತರನ್ನಾಗಿ ಮಾಡಿ ಸರಕಾರಿ ಅಧಿಕಾರಿಗಳಾಗುವಂತೆ ನೋಡಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕರಾದ ಮಂಜುನಾಥ ಗಿಳಿಯಾರು ರವರು ಇಲ್ಲಿನ ಎಲ್ಲಾ ಅಕ್ಕ ತಂಗಿಯರು ಸ್ವಸಹಾಯ ಸಂಘವನ್ನು ಕಟ್ಟಿ ಸಂಘಟಿತರಾಗಿ ಮುಂದೆ ನಾವು ಆರಂಭಿಸುವ ಬ್ಯಾಂಕ್ ಗೆ ಆಧಾರ ಸ್ಥಂಭವಾಗಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ, ಸುರೇಶ ಹಕ್ಲಾಡಿ, ಮಂಜುನಾಥ್ ನಾಗೂರು, ಶ್ಯಾಮಸುಂದರ್ ತೆಕ್ಕಟ್ಟೆ, ರಾಜೇಂದ್ರ ಮಾಸ್ಟರ್ ಬೆಳ್ಳೆ, ಭಾಸ್ಕರ್ ಮಾಸ್ಟರ್ ಕುಂಜಿಬೆಟ್ಟು, ಪದಾಧಿಕಾರಿಗಳಾದ ಕುಮಾರ್ ಕೋಟ, ರಾಜು ಬೆಟ್ಟಿನಮನೆ, ಶ್ರೀಧರ ಕುಂಜಿಬೆಟ್ಟು , ಮಂಜುನಾಥ್ ಬಾಳ್ಕುದ್ರು ಭಾಸ್ಕರ ಕೆರ್ಗಾಲ್, ಸುರೇಶ ಬಾರ್ಕೂರು, ಶಂಕರ್ ದಾಸ್ ಚೆಂಡ್ಕಳ, ಸುಧಾಕರ ಮಾಸ್ಟರ್ ಗುಜ್ಜರಬೆಟ್ಟು, ಹರೀಶ್ಚಂದ್ರ ಬಿರ್ತಿ, ಪ್ರಶಾಂತ್ ಬಿರ್ತಿ, ಶಿವಾನಂದ ಬಿರ್ತಿ, ರಾಘವೇಂದ್ರ ಬೆಳ್ಳೆ, ಶಿವಾನಂದ ಮೂಡುಬೆಟ್ಟು ಸುರೇಶ್ ಬೆಳ್ಳೆ, ಭೀಮಪ್ಪ ಪ್ರಗತಿ ನಗರ, ಮಂಜು ಅಂಬೇಡ್ಕರ್ ಪ್ರಗತಿ ನಗರ, ಲೋಹಿತ್ ಪ್ರಗತಿನಗರ ಉಪಸ್ಥಿತರಿದ್ದರು‌.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಸೃಷ್ಟಿಸಲು ಯತ್ನಾಳ್ ಯತ್ನ: ಎಂ.ಬಿ ಪಾಟೀಲ್ ಕಿಡಿ

ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನ ಮುಂದುವರಿಕೆಗೆ ವಿರೋಧ ವ್ಯಕ್ತಪಡಿಸಿ ಜಮೀರ್ ಅಹ್ಮದ್...

ರಾಯಚೂರು | ಜೋಳದ ಬಾಕಿ ಹಣ ಪಾವತಿಗೆ ಆಗ್ರಹ: ಪೋತ್ನಾಳದಲ್ಲಿ ರೈತರ ರಸ್ತೆ ತಡೆ

ಖರೀದಿ ಕೇಂದ್ರಗಳ ಮೂಲಕ ಖರೀದಿಸಿರುವ ಜೋಳದ ಬಾಕಿ ಹಣವನ್ನು ಕೂಡಲೇ ಪಾವತಿಸುವಂತೆ...

ನಾಳೆ ‘ನಿರಾಕಾರ ವಿಶ್ವಕರ್ಮ’ ಕೃತಿ ಬಿಡುಗಡೆ

ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ...

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ...