ಉಡುಪಿ | ನ್ಯಾಯಮೂರ್ತಿ ಗವಾಯಿ ಮೇಲಿ ಶೂ ಎಸೆಯಲು ಯತ್ನ; ದಲಿತ, ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

Date:

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ ವಿರುದ್ಧ ಯುಎಪಿಎ ಕಾಯ್ದೆಯಡಿ ಕೇಸು ದಾಖಲಿಸಿ ತಕ್ಷಣ ಬಂಧಿಸಬೇಕೆಂದು ಆಗ್ರಹಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಉಡುಪಿ ಜಿಲ್ಲೆ, ಸಹಬಾಳ್ವೆ ವೇದಿಕೆ ಹಾಗೂ ಉಡುಪಿಯ ವಿವಿಧ ಪ್ರಗತಿಪರ ಸಂಘಟನೆಗಳ ಸಹಭಾಗಿತ್ವದಲ್ಲಿ ಶುಕ್ರವಾರ ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಇಂದು ಪ್ರತಿಭಟನೆ ನಡೆಸಲಾಯಿತು.

- Advertisement -
WhatsApp Image 2025 10 10 at 9.41.40 AM

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಉಡುಪಿ ಜಿಲ್ಲಾ ಕಾರ್ಯದರ್ಶಿ ಸುರೇಶ್‌ ಕಲ್ಲಾಗರ, ಇದು ಕೊಳಕು ಮನಸ್ಸಿನ ಕುಕೃತ್ಯ. ಆರ್‌ಎಸ್‌ಎಸ್ ತನ್ನ 100 ವರ್ಷಗಳ ಆಚರಣೆಯ ಸಮಯದಲ್ಲಿ ದೇಶದೊಳಗೆ ಸಾಮಾಜಿಕ ವಿಭಜನೆ ಉಂಟುಮಾಡುವ ಹಾಗೂ ಜನರ ಗಮನ ಬೇರೆಡೆಗೆ ತಿರುಗಿಸುವ ನಿಟ್ಟಿನಲ್ಲಿ ಇಂತಹ ಕೃತ್ಯಗಳನ್ನು ಮುನ್ನಲೆಗೆ ತರುತ್ತಿದೆ. ದೇಶವನ್ನು ಬ್ರಾಹ್ಮಣೀಕರಣ ಮಾಡುವ ಭಾಗವಾಗಿ ಈ ಘಟನೆಗಳು ನಡೆಯುತ್ತಿವೆ. ದಲಿತರು ಮತ್ತು ಹಿಂದುಳಿದ ವರ್ಗದವರು ಈ ಕುತಂತ್ರವನ್ನು ಅರ್ಥಮಾಡಿಕೊಳ್ಳಬೇಕು. ಈ ದಾಳಿ ಕೇವಲ ಮುಖ್ಯ ನ್ಯಾಯಮೂರ್ತಿಗಳ ಮೇಲೆ ನಡೆದದ್ದಲ್ಲ — ಅದು ದಲಿತರು ಹಾಗೂ ಹಿಂದುಳಿದ ವರ್ಗದವರ ಮೇಲಿನ ನೇರ ದಾಳಿ. ಆದ್ದರಿಂದ ಇಂತಹ ಅನ್ಯಾಯದ ವಿರುದ್ಧ ಎಲ್ಲರೂ ಒಗ್ಗಟ್ಟಾಗಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
WhatsApp Image 2025 10 10 at 9.41.38 AM

ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ಮಾತನಾಡಿ, 2014ರಿಂದ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರದಿಂದಲೂ ಇಂತಹ ಕೋಮುವಾದಿ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಈ ದೇಶದಲ್ಲಿ ಕೇವಲ ಶೇ.3ರಷ್ಟು ಮನುವಾದಿಗಳು 144 ಕೋಟಿಯ ಜನರನ್ನು ನಿಯಂತ್ರಿಸಲು ಯತ್ನಿಸುತ್ತಿದ್ದಾರೆ. ಭಾರತವು ದಲಿತರು, ಹಿಂದುಳಿದ ವರ್ಗದವರು ಮತ್ತು ಅಲ್ಪಸಂಖ್ಯಾತರದ್ದೇ ರಾಷ್ಟ್ರ, ಮನುವಾದಿಗಳದ್ದಲ್ಲ. ಇಂತಹ ಕುತಂತ್ರಗಳನ್ನು ಬಿಟ್ಟು ದೇಶದ ಬಹುತ್ವ ಮತ್ತು ಸಂವಿಧಾನದ ಮೌಲ್ಯಗಳನ್ನು ಕಾಪಾಡುವ ಕೆಲಸ ಸರ್ಕಾರ ಮಾಡಬೇಕು. ಇಲ್ಲವಾದರೆ ನೇಪಾಳ, ಶ್ರೀಲಂಕಾ, ಬಾಂಗ್ಲಾದೇಶದಂತೆ ದೇಶ ಅಸ್ಥಿರವಾಗುವ ಪರಿಸ್ಥಿತಿ ಉಂಟಾಗಬಹುದು ಎಂದು ಹೇಳಿದರು.

WhatsApp Image 2025 10 10 at 9.41.37 AM

ದಸಂಸ ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರು, ಖ್ಯಾತ ಚಿಂತಕ, ಹೋರಾಟಗಾರ ಪಣಿರಾಜ್‌, ಧರ್ಮಗುರು ಫಾ.ವಿಲಿಯಂ ಮಾರ್ಟಿಸ್, ಅಲ್ಪಸಂಖ್ಯಾತರ ವೇದಿಕೆಯ ಜಿಲ್ಲಾಧ್ಯಕ್ಷ ಚಾರ್ಲ್ಸ್ ಆ್ಯಂಬ್ಲರ್, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಇದ್ರೀಸ್ ಹೂಡೆ, ವಿದ್ಯಾರ್ಥಿ ಮುಖಂಡ ನಿಹಾಲ್ ಹೂಡೆ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ವಕೀಲ ರಾಕೇಶ್ ಕಿಶೋರ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಆಕ್ರೋಶ ವ್ಯಕ್ತಪಡಿಸಲಾಯಿತು. ಪ್ರತಿಭಟನೆಯಲ್ಲಿ ದಸಂಸ ಮೈಸೂರು ವಿಭಾಗದ ಸಂಘಟನಾ ಸಂಚಾಲಕ ಶ್ಯಾಮ್‌ರಾಜ್ ಬಿರ್ತಿ, ಮುಖಂಡರಾದ ಶ್ಯಾಂಸುಂದರ ತೆಕ್ಕಟ್ಟೆ, ಶಶಿಧರ ಗೊಲ್ಲ, ಅನ್ವರ ಅಲಿ ಕಾಪು, ಕವಿರಾಜ್, ರಾಜು ಬೆಟ್ಟಿನಮನೆ ಮೊದಲಾದವರು ಉಪಸ್ಥಿತರಿದ್ದರು.

WhatsApp Image 2025 10 10 at 9.41.35 AM
WhatsApp Image 2025 10 10 at 9.41.39 AM
WhatsApp Image 2025 10 10 at 9.41.37 AM 2
WhatsApp Image 2025 10 10 at 9.41.37 AM 1
WhatsApp Image 2025 10 10 at 9.41.38 AM 1
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...