ಉಡುಪಿ‌ | ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ ಸ್ಥಗಿತ; ಸಿಐಟಿಯು ಪ್ರತಿಭಟನೆ

Date:

ಎರಡು ವರ್ಷದಿಂದ ಬಾಕಿ ಇರುವ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ (ಸಿಐಟಿಯು) ಒತ್ತಾಯಿಸಿದೆ.

- Advertisement -

ಉಡುಪಿಯ ಮಣಿಪಾಲ ಸಿಂಡಿಕೇಟ್ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಮಿಕರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪ್ರತಿಭಟನೆಯಲ್ಲಿ ಮಾತನಾಡಿದ ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಶಶಿಧರ್ ಗೊಲ್ಲ, “1996ರ ಕಟ್ಟಡ ಕಾರ್ಮಿಕರ ಕಾಯ್ದೆಯ ಪ್ರಕಾರ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ರಚನೆಯಾಗಿದ್ದು, ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ಬಾಲವಾಡಿಯಿಂದ ಉನ್ನತ ಶಿಕ್ಷಣದವರೆಗೆ ₹5,000ದಿಂದ 75,000ದವರೆಗೆ ಶೈಕ್ಷಣಿಕ ಸಹಾಯ ದೊರೆಯುತ್ತಿದ್ದು, ಶಾಲಾ ವಾರ್ಷಿಕ ಅವಧಿಯಲ್ಲಿ ಕಲಿಯುವ ಮಕ್ಕಳಿಗೆ ಹಿಂದಿನ ವರ್ಷಗಳಲ್ಲಿ ಕ್ಲಪ್ತ ಸಮಯದಲ್ಲಿ ಸಹಾಯಧನ ಬರುತ್ತಿತ್ತು. ಕಳೆದ ಎರಡು ಶೈಕ್ಷಣಿಕ ವರ್ಷಗಳಿಂದ ಕಲ್ಯಾಣ ಮಂಡಳಿಯಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಬಿಡುಗಡೆಯಾಗಲಿಲ್ಲ. ಅಲ್ಲದೆ, 2023-24ನೇ ಕಲಿಕೆಯ ವರ್ಷಕ್ಕೆ, ಶೈಕ್ಷಣಿಕ ಸಹಾಯಧನಕ್ಕೆ ಕಲ್ಯಾಣ ಮಂಡಳಿ ಅರ್ಜಿ ಕರೆದಿಲ್ಲದಿರುವುದು ಬಹಳ ನೋವನ್ನುಂಟುಮಾಡಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಎರಡು ದಶಕಗಳಿಂದ ವಾಸ; ಹಕ್ಕುಪತ್ರಕ್ಕೆ ಹರಸಾಹಸ

ಕಟ್ಟಡ ಸಂಘದ ರಾಜ್ಯ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಖಜಾಂಚಿ ಗಣೇಶ್ ನಾಯ್ಕ, ಉಪಾಧ್ಯಕ್ಷ ಸುಭಾಷ್ ನಾಯಕ್, ಮುಖಂಡರುಗಳಾದ ಮುರಳಿ, ರಾಮ ಕಾರ್ಕಡ, ಸೈಯದ್, ರಮೇಶ್, ಸುರೇಶ್ ಪಡುಬಿದ್ರಿ, ಉದಯ ಪೂಜಾರಿ, ಶಾರದ ಗುಡ್ಮಿ, ರಾಘುನಾಥ, ರವಿ, ಶೇಖರ್ ಮರಕಾಲ, ಸಿಐಟಿಯು ಉಡುಪಿ ವಲಯ ಸಂಚಾಲಕ ಕವಿರಾಜ್ ಎಸ್, ಮೊಹನ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...