ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ‘ಬಕ್ರೀದ್ ಹಬ್ಬ’ ಆಚರಣೆ

Date:

Advertisements

ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಅಝಾ(ಬಕ್ರೀದ್) ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಿದರು.

ಉಡುಪಿ ನಗರ ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಮುಸ್ಲಿಮರು ಬೆಳಗ್ಗೆ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಝ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಝ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

1005694173

ಉಡುಪಿ ಜಾಮೀಯ ಮಸೀದಿಯಲ್ಲಿ ಮೌಲಾನಾ ಅಬ್ದುರ್ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನ ಇನಾಯುತುಲ್ಲಾ ರಝ್ವಿ ಹಾಗೂ ಬ್ರಹ್ಮಗಿರಿ ಹಾಶಿಮಿ ಮಸೀದಿಯ ಇಮಾಮ್ ಮೌಲಾನಾ ಉಬೇದಾರ್ ರೆಹಮಾನ್ ನದ್ವಿ ನೇತೃತ್ವದಲ್ಲಿ ಈದ್ ನಮಾಝ್ ನಿರ್ವಹಿಸಲಾಯಿತು

Advertisements

ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು.

ಕುಂದಾಪುರ ಜುಮಾ ಮಸೀದಿಯಿಂದ ಬೆಳಗ್ಗೆ  ಈದ್ ಮೆರವಣಿಗೆ ಹೊರಟು, ಕುಂದಾಪುರ ಈದ್ಗಾ ಮೈದಾನದಲ್ಲಿ ಧರ್ಮಗುರು ಮೌಲಾನ ಕರಾರ್ ಹುಸೇನ್  ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ನೆರವೇರಿಸಲಾಯಿತು.

1005694167

ಈ ಸಂದರ್ಭದಲ್ಲಿ ಧರ್ಮಗುರುಗಳು ಶಾಂತಿ, ಸೌಹಾರ್ದತೆಯ ಸಂದೇಶ ನೀಡಿದರು. ಸಾಮಾಜಿಕ ಜಾಲದಲ್ಲಿ ಬೇರೆ ಸಮಾಜದವರನ್ನು ನಿಂದಿಸುವುದು ಅಥವಾ ಅವಹೇಳನ ಮಾಡುವ ಪೋಸ್ಟ್ ಗಳನ್ನು ಹಾಕಬಾರದು ಎಂದು ಬ್ರಹ್ಮಗಿರಿ ಹಾಶಿಮಿ ಮಸೀದಿಯ ಇಮಾಮ್ ಮೌಲಾನಾ ಉಬೇದಾರ್ ರೆಹಮಾನ್ ನದ್ವಿ ಸಂದೇಶದಲ್ಲಿ ಕರೆ ನೀಡಿದ್ದಾರೆ.

ಡ್ರಗ್ಸ್ ಸೇವನೆಯಿಂದ ಹಲವಾರು ಯುವಕರು ತಮ್ಮ ಭವಿಷ್ಯವನ್ನು ಹಾಳು ಮಾಡುತ್ತಿದ್ದಾರೆ. ಈ ಬಗ್ಗೆ ಹೆತ್ತವರು ತಮ್ಮ ಮಕ್ಕಳನ್ನು ಇಂತಹ ವಿಷ ಪದಾರ್ಥದಿಂದ ದೂರ ಇರಲು ಮಕ್ಕಳನ್ನು ಸಲಹೆ ನೀಡಬೇಕೆಂದು ಅವರು ಮನವಿ ಮಾಡಿದರು.

ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಉಡುಪಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X