ಉಡುಪಿ | ಜಿಲ್ಲೆಯಾದ್ಯಂತ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ

Date:

Advertisements

ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಲಾಯಿತು.

ಉಡುಪಿ ನಗರ ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಮುಸ್ಲಿಮರು ಬೆಳಗ್ಗೆ ಅರ್ಹರಿಗೆ ಫಿತರ್ ಝಕಾತ್ ನೀಡಿದ ಬಳಿಕ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಲಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಝ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಝ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

1004872041

ಉಡುಪಿ ಜಾಮೀಯ ಮಸೀದಿಯಲ್ಲಿ ಮೌಲಾನಾ ಅಬ್ದುರ್ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನ ಇನಾಯುತುಲ್ಲಾ ರಝ್ವಿ ನೇತೃತ್ವದಲ್ಲಿ ಈದ್ ನಮಾಝ್ ನಿರ್ವಹಿಸಲಾಯಿತು

Advertisements

ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು.

ಕುಂದಾಪುರ ಜುಮಾ ಮಸೀದಿಯಿಂದ ಬೆಳಗ್ಗೆ  ಈದ್ ಮೆರವಣಿಗೆ ಹೊರಟು, ಕುಂದಾಪುರ ಈದ್ಗಾ ಮೈದಾನದಲ್ಲಿ ಧರ್ಮಗುರು ಮೌಲಾನ ಕರಾರ್ ಹುಸೇನ್  ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ನೆರವೇರಿಸಲಾಯಿತು.

1004872044

ಗಂಗೊಳ್ಳಿಯ ಜುಮ್ಮಾ ಮಸೀದಿಯಲ್ಲಿ ಮೌಲಾನ ಮುಝಮ್ಮಿಲ್ ನದ್ವಿ, ಮೋಹಿದೀನ್ ಜುಮ್ಮಾ ಮಸೀದಿಯಲ್ಲಿ ಖತೀಬ್ ಮೌಲಾನ ಅಬ್ದುಲ್ ಕರೀಂ ನದ್ವಿ,  ಶಾಹಿ ಜುಮ್ಮಾ ಮಸೀದಿಯಲ್ಲಿ ಮೌಲಾನ ರಹಮತುಲ್ಲಾಹ್ ಕೋಲ್ಕಾರ್ ನದ್ವಿ ಅವರ ನೇತೃತ್ವದಲ್ಲಿ ವಿಶೇಷ ನಮಾಝ್ ನಿರ್ವಹಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಗುರುಗಳು ತಮ್ಮ ಈದ್ ಸಂದೇಶದಲ್ಲಿ ಯುವಜನತೆ ಮಾದಕ ವ್ಯಸನಗಳಿಗೆ ಬಲಿಯಾಗದಂತೆ ಜಾಗೃತಿ ಮೂಡಿಸಿದರು. ಅಲ್ಲದೇ ಯುದ್ಧಪೀಡಿತ ಪೆಲೆಸ್ತಿನ್ ಜನತೆಗಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.
ಅಲ್ಲದೆ ಎಲ್ಲರೂ ಪರಸ್ಪರ ಸಹೋದರಂತೆ ಬದುಕಿ ಶಾಂತಿಯ ವಾತಾವರಣ ನಿರ್ಮಿಸುವಂತೆ ಸೌಹಾರ್ದ ಸಂದೇಶ ನೀಡಿದರು.

1004871395

ಹಬ್ಬದ ದಿನ ಯಾವುದೇ ಅಹಿತಕರ ಘಟನೆ ನಡೆದಂತೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X