ಉಡುಪಿ | ಫೆ.10,11ರಂದು ವಕೀಲರಿಗಾಗಿ ರಾಜ್ಯ ಮಟ್ಟದ ಸಾಂಸ್ಕೃತಿಕ ಹಬ್ಬ

Date:

ವಕೀಲರ ಸಮುದಾಯದಲ್ಲಿ ಚೈತನ್ಯ, ಉತ್ಸಾಹ, ಹುರುಪು ತುಂಬಿ ಅವರಲ್ಲಿರುವ ಪ್ರತಿಭೆಗೆ ಉತ್ತಮ ಅವಕಾಶ, ವೇದಿಕೆ ಒದಗಿಸುವ ನಿಟ್ಟಿನಲ್ಲಿ ಉಡುಪಿ ವಕೀಲರ ಸಂಘವ ಕರ್ನಾಟಕ ರಾಜ್ಯದ ವಿವಿಧ ವಕೀಲರ ಸಂಘಗಳ ಸದಸ್ಯರಿಗಾಗಿ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ “ಕಲಾ ಸಂಭ್ರಮ”ವನ್ನು 2024ರ ಫೆಬ್ರವರಿ 10 ಮತ್ತು 11ರಂದು ಉಡುಪಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಿರ್ಮಿಸಿರುವ ತೆರೆದ ಸಭಾಂಗಣದಲ್ಲಿ ಆಯೋಜಿಸಿದೆ ಎಂದು ಉಡುಪಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಹೇಳಿದರು.

ಉಡುಪಿ ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರೀಕಾಗೋಷ್ಟಿ ಉದ್ದೇಶಿಸಿ ಮಾತನಾಡಿದರು. “ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪಿ ಎಸ್ ದಿನೇಶ್ ಕುಮಾರ್ “ಕಲಾ ಸಂಭ್ರಮ” ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್ ಅಧ್ಯಕ್ಷತೆ ವಹಿಸಲಿದ್ದು, ಸಿ ಎಂ ಜೋಷಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ” ಎಂದು ಹೇಳಿದರು.

“ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು ಟಿ ಖಾದರ್ ಅವರು ಗೌರವ ಅತಿಥಿಗಳಾಗಿಯೂ, ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಅವರು ವಿಶೇಷ ಆಹ್ವಾನಿತರಾಗಿಯೂ ಭಾಗವಹಿಸಲಿದ್ದಾರೆ. ಅದೇ ದಿನ ಸಾಯಂಕಾಲ 5ಕ್ಕೆ ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ “ಸಾಂಸ್ಕೃತಿಕ ವೈಭವ” ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ವಕೀಲರ ಸಂಘಗಳ 20 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸ್ಪರ್ಧಾ ಕೂಟದ ಸಮಗ್ರ ವಿಜೇತ ತಂಡಕ್ಕೆ ₹33,333 ನಗದು ಮತ್ತು ಶಾಶ್ವತ ಫಲಕ, ಸಮಗ್ರ ರನ್ನರ್ ಅಪ್ ತಂಡಕ್ಕೆ ₹22,222 ನಗದು ಮತ್ತು ಶಾಶ್ವತ ಫಲಕ ಹಾಗೂ ತೃತೀಯ ಸಮಗ್ರ ತಂಡಕ್ಕೆ ₹11,111 ನಗದು ಮತ್ತು ಶಾಶ್ವತ ಫಲಕ ನೀಡಿ ಗೌರವಿಸಲಾಗುವುದು. ಅಲ್ಲದೆ ‘ಅತ್ಯುತ್ತಮ ಕಾರ್ಯಕ್ರಮ ನಿರೂಪಕ’, ‘ಅತ್ಯುತ್ತಮ ಸಮೂಹ ನೃತ್ಯ’, ‘ಅತ್ಯುತ್ತಮ ಸಮೂಹ ಗಾಯನ’, ‘ಅತ್ಯುತ್ತಮ ವಿಶೇಷ ಪ್ರತಿಭೆ’, ‘ಅತ್ಯುತ್ತಮ ಶಿಸ್ತು ಬದ್ಧ ತಂಡ ಪ್ರದರ್ಶನ’ ಮತ್ತು ‘ಅತ್ಯುತ್ತಮ ಸೃಜನಶೀಲ ಪ್ರದರ್ಶನ’ಗಳಿಗೆ ಪ್ರತ್ಯೇಕವಾಗಿ ವೈಯಕ್ತಿಕ ಬಹುಮಾನಗಳನ್ನು ನೀಡಿ ಗೌರವಿಸಲಾಗುವುದು. ಸ್ಪರ್ಧಾ ಕೂಟದಲ್ಲಿ ಭಾಗವಹಿಸಿದ ಪ್ರತಿಯೊಂದು ವಕೀಲರ ಸಂಘಕ್ಕೂ ಸ್ಮರಣಿಕೆ ನೀಡಿ ಗೌರವಿಸಲಾಗುವುದು” ಎಂದು ಹೇಳಿದರು.

“ಸ್ಪರ್ಧಾ ಕೂಟದ ಸಮಾರೋಪ ಸಮಾರಂಭವು ಫೆಬ್ರವರಿ 11ರ ಸಂಜೆ 6.30ಕ್ಕೆ ನಡೆಯಲಿದ್ದು, ಕರ್ನಾಟಕ ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿಯವರು ಸಮಾರೋಪ ಭಾಷಣ ಮಾಡಲಿದ್ದಾರೆ. ಉಡುಪಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ದಿನೇಶ್ ಹೆಗ್ಡೆಯವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ವಕೀಲರ ಪರಿಷತ್‌ನ ಸದಸ್ಯ ಹರೀಶ್ ಎಸ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ವಿಜೇತ ತಂಡಗಳಿಗೆ ಸಮಾರೋಪ ಸಮಾರಂಭದಲ್ಲಿ ಬಹುಮಾನಗಳನ್ನು ವಿತರಿಸಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ತಂಡಗಳಿಗೆ ಊಟ ಮತ್ತು ವಸತಿ ಸೌಲಭ್ಯವನ್ನು ಉಡುಪಿ ವಕೀಲರ ಸಂಘದಿಂದ ವ್ಯವಸ್ಥೆಗೊಳಿಸಲಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಸಂತ, ಮಹನೀಯರ ಜಯಂತಿ ಆಚರಿಸುವಂತೆ ಅಧಿಕಾರಿಗಳಿಗೆ ಸೂಚನೆ

ಪತ್ರಿಕಾಗೋಷ್ಠಿಯಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ಮಿತ್ರ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಾಜೇಶ ಎ ಆರ್, ಸಾಂಸ್ಕೃತಿಕ ಕಾರ್ಯದರ್ಶಿ ಸಂತೋಷ್ ಕುಮಾರ್ ಮೂಡುಬೆಳ್ಳೆ, ಕ್ರೀಡಾ ಕಾರ್ಯದರ್ಶಿ ಸುಮಿತ್ ಎಸ್ ಹೆಗ್ಡೆ, ಖಜಾಂಚಿ ಗಂಗಾಧರ ಎಚ್ ಎಂ, ವಿವಿಧ ಉಪಸಮಿತಿಗಳ ಸಂಚಾಲಕರುಗಳಾದ ಮಟ್ಟಾರ್ ರತ್ನಾಕರ ಹೆಗ್ಡೆ, ಬಿ. ನಾಗರಾಜ್, ರಾಘವೇಂದ್ರ ಶೆಟ್ಟಿ, ಆರೂರ್ ಸುಕೇಶ್ ಶೆಟ್ಟಿ, ಆನಂದ ಮಡಿವಾಳ, ಪೂರ್ಣಿಮಾ ಎಸ್, ಸತೀಶ್ ಪೂಜಾರಿ ಮತ್ತು ರವೀಂದ್ರ ಬೈಲೂರು ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಹಾಳಾಗಿದೆ ಆರೋಗ್ಯ ಉಪಕೇಂದ್ರ; ಗ್ರಾಮಸ್ಥರಿಗೆ ಆರೋಗ್ಯ ಸೇವೆಯೂ ದೂರ

ಚಿಕ್ಕಂದವಾಡಿಯಲ್ಲಿ ಒಂದು ಪ್ರಾಥಮಿಕ ಆರೋಗ್ಯ ಉಪ ಕೇಂದ್ರವಿದೆ. ಆದರೆ, ಅದು ನಿಜಕ್ಕೂ...

ಗದಗ | ಬಡವರ, ಸಣ್ಣ ರೈತರ ಪ್ರಕರಣಗಳ ಪರಿಹಾರಕ್ಕಾಗಿ ಹೊಸ ಕಾನೂನು ಜಾರಿ: ಸಚಿವ ಎಚ್‌.ಕೆ ಪಾಟೀಲ್

ಬಡವರ, ಸಣ್ಣ ರೈತರ ಪ್ರಕರಣಗಳ ಪರಿಹಾರಕ್ಕಾಗಿ ಮಾರ್ಚ್ 4ರಂದು ರಾಜ್ಯಾದ್ಯಂತ ನೂತನ...

ವಿಜಯಪುರ | ಭಾರತೀಯರು ಸಹಬಾಳ್ವೆಯಿಂದ ಜೀವನ ಸಾಗಿಸಬೇಕು: ಡಾ. ಅಸಂಗ ವಾಂಖೇಡೆ

ಭಾರತೀಯರಾದ ಎಲ್ಲರೂ ಸಮಭಾವ ಸಹಬಾಳ್ವೆಯಿಂದ ಜೀವನವನ್ನು ಸಾಗಿಸಬೇಕು ಎಂದು ಅಮೇರಿಕದ ಆಕ್ಸ್‌ಫರ್ಡ್...

ಗದಗ | ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ

ಪ್ರತೀ ತಿಂಗಳು ಪಂಚ ಗ್ಯಾರಂಟಿಗಳಾದ ಅನ್ನಭಾಗ್ಯ ಯೋಜನೆಯಡಿ 12ಕೋಟಿ, ಗೃಹಲಕ್ಷ್ಮಿ ಯೋಜನೆಗೆ...