ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ನಡೆದ ದೋಣಿ ದುರಂತದ ಕುರಿತು ಸಮಗ್ರ ತನಿಖೆ ನಡೆಸುವಂತೆ ಮೀನುಗಾರರ ಮತ್ತು ಮೀನು ಕಾರ್ಮಿಕರ ಸಂಘ(ಸಿಐಟಿಯು) ಅಗ್ರಹಿಸಿದೆ.
“ಜಿಲ್ಲೆಯ ಕುಂದಾಪುರದ ಗಂಗೊಳ್ಳಿ ಬಂದರಿನ ಮ್ಯಾಂಗನೀಸ್ ರಸ್ತೆಯಲ್ಲಿ ನಡೆದ ಅಗ್ನಿ ದುರಂತದಲ್ಲಿ 11 ಮೀನುಗಾರಿಕಾ ಬಂದರು, ಕಾರ್ಮಿಕರ ದ್ವಿಚಕ್ರ ವಾಹನಗಳು ಮತ್ತು ಮೀನುಗಾರಿಕೆಯ ಬಲೆಗಳು ಸೇರಿದಂತೆ ಕೋಟ್ಯಂತರ ರೂಪಾಯಿಯ ನಷ್ಟ ಉಂಟಾಗಿದ್ದು, ಸಮಗ್ರ ತನಿಖೆ ನಡೆಸಬೇಕು ಹಾಗೂ ಬೋಟ್ ಮಾಲೀಕರಿಗೆ ಮತ್ತು ಕಾರ್ಮಿಕರ ದ್ವಿಚಕ್ರ ವಾಹನಕ್ಕೆ ಸರ್ಕಾರ ಸಮರ್ಪಕ ಪರಿಹಾರ ನೀಡಬೇಕು” ಎಂದು ಉಡುಪಿ ಜಿಲ್ಲಾ ಮೀನುಗಾರರ ಮತ್ತು ಮೀನು ಕಾರ್ಮಿಕ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕವಿರಾಜ್ ಎಸ್ ಒತ್ತಾಯಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಉಡುಪಿ | ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಬೆಂಕಿ; ಕೋಟ್ಯಂತರ ರೂ. ನಷ್ಟ
“11 ಬೋಟ್‌ಗಳಲ್ಲಿ ನೂರಾರು ಮೀನುಗಾರಿಕೆ ವ್ರತ್ತಿಯನ್ನು ಅವಲಂಬಿಸಿರುವ ಕಾರ್ಮಿಕರು ಇಂದು ಅತಂತ್ರರಾಗಿದ್ದಾರೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಇರಬೇಕಾದ ಕಾರ್ಮಿಕರು ಹಾಗೂ ಮಾಲೀಕರ ಮನೆಯಲ್ಲಿ ದುಃಖವನ್ನು ಅನುಭವಿಸುವಂತಾಗಿದೆ. ಅದ್ದರಿಂದ ಈ ಕೂಡಲೇ ಪೊಲೀಸ್ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರನ್ನು ಕೂಡಲೇ ತನಿಖೆಗೆ ಒಳಪಡಿಸಬೇಕು” ಎಂದು ಆಗ್ರಹಿಸಿ ಪ್ರಕಟಣೆಗೆ ತಿಳಿಸಿದ್ದಾರೆ.