ಉಡುಪಿ | ಶಿಳ್ಳೆಕ್ಯಾತ ಸಮುದಾಯಕ್ಕೆ ಮೂಲಭೂತ ಸೌಕರ್ಯ ಒದಗಿಸಲು ಒತ್ತಾಯ

Date:

ಶಿಳ್ಳೆಕ್ಯಾತ ಸಮುದಾಯಗಳಿಗೆ ಉಚಿತ ಮನೆ ನಿವೇಶನ ಸಹಿತ ಮೂಲಭೂತ ಸೌಕರ್ಯಗಳ ಕ್ರಮಕೈಗೊಳ್ಳಬೇಕೆಂದು ಕರಾವಳಿ ವೃತ್ತಿನಿರತ ಅಲೆಮಾರಿ ಶಿಳ್ಳೆಕ್ಯಾತ ಹಕ್ಕುಗಳ ಸಮಿತಿಯ ಗೌರವಾಧ್ಯಕ್ಷ ಸಂತೋಷ್ ಬಜಾಲ್ ಒತ್ತಾಯಿಸಿದರು.

- Advertisement -

ಕುಂದಾಪುರದ ಹಂಚು ಕಾರ್ಮಿಕರ ಭವನದಲ್ಲಿ ಉಡುಪಿ ಜಿಲ್ಲೆಯ ಶಿಳ್ಳೆಕ್ಯಾತ ಸಮುದಾಯದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಉಡುಪಿ, ಕುಂದಾಪುರದ ಹಾಲಾಡಿ, ಬ್ರಹ್ಮಾವರ, ಮಲ್ಪೆ, ಕಟ್ ಬೆಳ್ತೂರು, ಕಟಪಾಡಿ, ಪಾಂಗಾಳ ಭಾಗದ ನದಿ ತೀರಗಳಲ್ಲಿ ಅಲೆಮಾರಿ ಬುಡಕಟ್ಟು ಸಮುದಾಯವೆಂದು ಘೋಷಿಸಲಾಗಿರುವ ಶಿಳ್ಳೆಕ್ಯಾತ ಸಮುದಾಯದ ಸುಮಾರು 25 ಕುಟುಂಬಗಳು, ಕಳೆದ ಹಲವು ವರುಷಗಳಿಂದ ತೆಪ್ಪಗಳ ಮೂಲಕ ನದಿಯಲ್ಲಿ ಬಲೆ ಬೀಸಿ ಮೀನು ಹಿಡಿದು ಮಾರಾಟ ಮಾಡುವ ಕಷ್ಟದಾಯಕ ಮತ್ತು ಅಪಾಯಕಾರಿ ವೃತ್ತಿಯಲ್ಲಿ ಜೀವನ ಸಾಗಿಸುತ್ತಿದ್ದಾರೆ ಎಂದರು.

ಈ ಸಮುದಾಯಗಳು ಯಾವುದೇ ಕನಿಷ್ಟ ಮೂಲಭೂತ ಸೌಕರ್ಯಗಳಿಲ್ಲದ ಗುಡಿಸಲುಗಳಲ್ಲಿ ವಾಸಿಸುತ್ತಿರುವುದು ಮಾತ್ರವಲ್ಲದೆ, ಸ್ಥಳೀಯರಿಂದ ಶೋಷಣೆಗೂ ಒಳಗಾಗುತ್ತಿದ್ದಾರೆ. ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯಕ್ಕೆ ಸೇರಿರುವ ಶಿಳ್ಳೆಕ್ಯಾತ ಅಲೆಮಾರಿ ಕುಟುಂಬಗಳಿಗೆ ಉಚಿತ ಮನೆ ನಿವೇಶನ ಸಹಿತ ಸರ್ಕಾರದ ವಿವಿಧ ಸವಲತ್ತುಗಳನ್ನು ಒದಗಿಸಿಕೊಡುವಂತೆ ಜಿಲ್ಲಾಡಳಿತವು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಸರ್ಕಾರ, ಸಮಾಜ ಕಲ್ಯಾಣ ಇಲಾಖೆ ಮತ್ತು ಅಲೆಮಾರಿ ಅಭಿವೃದ್ಧಿ ನಿಗಮದಡಿ ಘೋಷಿಸಿರುವ ಸವಲತ್ತುಗಳು ಈ ಸಮುದಾಯಗಳನ್ನು ತಲುಪುತ್ತಿಲ್ಲ. ಅಲೆಮಾರಿ ಸಮುದಾಯಗಳು ತಮ್ಮ ಗುರುತಿನ ಚೀಟಿ ಸಹಿತ ಯಾವುದೇ ದಾಖಲೆಗಳಿಲ್ಲದೇ, ಸರ್ಕಾರಿ ಸವಲತ್ತುಗಳನ್ನು ಪಡೆಯುವಲ್ಲಿ ವಂಚಿತರಾಗಿದ್ದಾರೆ. ತಲೆತಲಾಂತರಗಳಿಂದ  ಅಲೆಮಾರಿಯಾಗಿ ಬದುಕುತ್ತಿದ್ದ ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳು ಇವತ್ತು, ತಮ್ಮ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗಬಾರದೆಂಬ ಏಕೈಕ ಉದ್ದೇಶಕ್ಕೆ ಒಂದೇ ಕಡೆ ನೆಲೆಯೂರಲು ಪ್ರಯತ್ನಿಸಿದರೂ, ಅಂತಹ ಪ್ರಯತ್ನಕ್ಕೆ ಸರ್ಕಾರಗಳು ಸ್ಪಂದಿಸದೆ ಅಲೆಮಾರಿ ಸಮುದಾಯಗಳ ವಿರೋಧಿಯಾಗಿ ವರ್ತಿಸುತ್ತಿದೆ ಎಂದರು.

ಇನ್ನು ಸ್ಥಳೀಯರಿಂದ ಅನ್ಯರೆಂಬ ಅನುಮಾನಕ್ಕೂ, ಅವಮಾನಕ್ಕೂ ಒಳಗಾಗಿ ದಿನನಿತ್ಯ ಕಿರುಕುಳ ದೌರ್ಜನ್ಯಗಳಿಗೆ ಒಳಗಾಗುವ ಹೀನಾಯ ಪರಿಸ್ಥಿತಿ ಉಂಟಾಗಿದೆ. ಈ ರೀತಿ ಅಲೆಮಾರಿ ಸಮುದಾಯಗಳನ್ನು ಕಡೆಗಣಿಸಿರುವ ಬಡಜನ ವಿರೋಧಿ ಸರ್ಕಾರಗಳ ವಿರುದ್ಧ ಮತ್ತು ಸಮುದಾಯದ ಮೇಲಾಗುವ ಕಿರುಕುಳ ದೌರ್ಜನ್ಯಗಳ ವಿರುದ್ಧ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯಗಳು ಧ್ವನಿ ಎತ್ತಬೇಕಾಗಿದೆ ಮತ್ತು ಸಂಘಟಿತ ಹೋರಾಟ ನಡೆಸಲು ಮುಂದಾಗಬೇಕಾಗಿದೆ ಎಂದರು.

ಸಭೆಯನ್ನು ಉದ್ದೇಶಿಸಿ ಉಡುಪಿ ಜಿಲ್ಲಾ ಕಾರ್ಮಿಕ ಸಂಘಟನೆಯ ಮುಖಂಡ ಎಚ್. ನರಸಿಂಹ ಮಾತನಾಡಿದರು. ಉಡುಪಿ ಜಿಲ್ಲಾ ಮೀನುಗಾರರು ಮತ್ತು ಮೀನು ಕಾರ್ಮಿಕರ ಸಂಘದ ಕಾರ್ಯದರ್ಶಿ ಕವಿರಾಜ್ ಕಾಂಚನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ವೆಂಕಟೇಶ್, ಶಂಕರ, ಲೋಕೇಶ, ರಾಮ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಭೆಯಲ್ಲಿ ಕರಾವಳಿ ವೃತ್ತಿನಿರತ ಅಲೆಮಾರಿ ಶಿಳ್ಳೆಕ್ಯಾತ ಹಕ್ಕುಗಳ ಸಮಿತಿಯನ್ನು ರಚಿಸಲಾಯಿತು ಇದರ ಗೌರವಾಧ್ಯಕ್ಷರಾಗಿ ಕವಿರಾಜ್ ಕಾಂಚನ್, ಅಧ್ಯಕ್ಷರಾಗಿ ಶಂಕರ, ಕಾರ್ಯದರ್ಶಿ ರಾಮ, ಕೋಶಾಧಿಕಾರಿಯಾಗಿ ಪ್ರಕಾಶ ಅವರನ್ನು ಆಯ್ಕೆಮಾಡಲಾಯಿತು ಮತ್ತು 25 ಜನರ ನೂತನ ಜಿಲ್ಲಾ ಸಮಿತಿಯನ್ನು ರಚಿಸಲಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜನರ ಬಳಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...