ಉಡುಪಿ | ಜನರ ಹಕ್ಕನ್ನು ಖಚಿತಪಡಿಸುವ ಉಚಿತ ಯೋಜನೆಗಳು ಬಿಟ್ಟಿಯಲ್ಲ: ಎಚ್ ವಿ ವಾಸು

Date:

ತಮಿಳುನಾಡಿನಲ್ಲಿ ಸರ್ಕಾರ ಅತಿ ಹೆಚ್ಚು ಮಹಿಳೆಯರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ. ಅಲ್ಲಿಯ ಜನರು ಎಷ್ಟು ಮಂದಿ ಸೋಮಾರಿಗಳಾಗಿದ್ದಾರೆ? ಉಚಿತ ಯೋಜನೆಗಳನ್ನು ನೀಡುವುದರಿಂದ ಜನರು ಸೋಮಾರಿಗಳಾಗುತ್ತಿದ್ದಾರೆ ಎಂಬುದು ಶುದ್ಧ ಸುಳ್ಳು. ಅದೇ ರೀತಿ ದೇಶ ದಿವಾಳಿ ಆಗುತ್ತದೆ ಎಂಬುದು ಕೂಡ ಸುಳ್ಳು. ಇಂತಹ‌ ಸುಳ್ಳುಗಳನ್ನು ವ್ಯವಸ್ಥಿತವಾಗಿ ಪ್ರಚಾರ ಮಾಡಲಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ, ಈದಿನ.ಕಾಮ್‌ ಮುಖ್ಯಸ್ಥ ಡಾ. ಎಚ್‌.ವಿ ವಾಸು ಹೇಳಿದ್ದಾರೆ.

- Advertisement -

ಉಡುಪಿಯಲ್ಲಿ ನಡೆದ ‘ಜನರ ಹಕ್ಕುನ್ನು ಖಚಿತಪಡಿಸುವ ಉಚಿತ ಯೋಜನೆಗಳು ಬಿಟ್ಟಿಯಲ್ಲ’ ಎಂಬ ವಿಷಯದ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಈಗಾಗಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಉಚಿತ ಯೋಜನೆಗಳನ್ನು ಜಾರಿ ಮಾಡುತ್ತಿದೆ. ಅದರ ಬೆನ್ನಲ್ಲೇ ವಿರೋಧ ಪಕ್ಷಗಳು ‘ಉಚಿತ ಯೋಜನೆಗಳಿಂದ ದೇಶ ದಿವಾಳಿ ಆಗುತ್ತದೆ’ ಎಂದು ಹೇಳುತ್ತಿವೆ. ಆದರೆ, ರಾಜ್ಯ ಸರ್ಕಾರದ ಉಚಿತ ಯೋಜನೆಗಳಿಂದ ನಿಜವಾಗಿಯೂ ದೇಶ ದಿವಾಳಿ ಆಗುತ್ತಾ ಎಂಬುದರ ಕುರಿತು ಅರ್ಥಶಾಸ್ತ್ರರು ಏನು ಹೇಳಿದ್ದಾರೆ ಎಂಬುದನ್ನು ತಿಳಿದುಕೊಳ್ಳಬೇಕು. ನಂತರ ಅದರ ಬಗ್ಗೆ ಮಾತನಾಡಬೇಕು. ಕೇವಲ ವಾಟ್ಸಾಪ್‌ನಲ್ಲಿ ಬಂದ ಸುಳ್ಳು ಸುದ್ದಿಗಳನ್ನು ಓದಿ, ಅದನ್ನೇ ನಂಬಿಕೊಂಡು ಮಾತನಾಡಬಾರದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸಹಬಾಳ್ವೆ ಉಡುಪಿಯ ಸಂಚಾಲಕ ಪ್ರಶಾಂತ್ ಜತ್ತನ್ನ ಮಾತನಾಡಿ, “ಸರ್ಕಾರದ ಎಲ್ಲ ಯೋಜನೆಗಳು ಬಡವರ ಪರವಾಗಿದ್ದು, ಅದನ್ನು ಅರ್ಹ ಬಡವರಿಗೆ ತಲುಪಬೇಕು. ಆಗ ಮಾತ್ರ ರಾಜ್ಯ ಸರ್ಕಾರದ ಯೋಜನೆಗಳು ಸರಿಯಾದ ರೀತಿಯಲ್ಲಿ ಪ್ರಯೋಜನಕಾರಿ ಆಗುತ್ತದೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಈದಿನ.ಕಾಮ್‌ನ ಉಮರ್ ಯು ಹೆಚ್, ಪಂಚಾಯತ್ ರಾಜ್‌ನ ತರಭೇತಿದಾರ ಜಯಂತ್ ರಾವ್, ಸಹಬಾಳ್ವೆ ಉಡುಪಿಯ ವಿರೋನಿಕ ಕರ್ನೇಲಿಯೋ, ಯಾಸೀನ್ ಮಲ್ಪೆ, ನಾಗೇಶ್ ಉದ್ಯಾವರ್, ಫಾದರ್ ವಿಲಿಯಂ ಮಾರ್ಟಿಸ್, ಹುಸೇನ್ ಕೋಡಿಬೆಂಗ್ರೆ, ಅಜೀಝ್ ಉದ್ಯಾವರ್ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...