ಉಡುಪಿ ಜಿಲ್ಲೆಯಾದ್ಯಂತ ಗಣೇಶ ಹಬ್ಬದ ಆಚರಣೆಯ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ, ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿಯ ಮದ್ಯ
ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರನ್ನಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಆಗಸ್ಟ್ 27 ರಂದು ಜಿಲ್ಲೆಯಾದ್ಯಂತ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಹಾಗೂ ಉಡುಪಿ ನಗರ ವ್ಯಾಪ್ತಿಯಲ್ಲಿ ಆಗಸ್ಟ್ 29 ಮತ್ತು 31 ರಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್, ರೆಸ್ಟೋರೆಂಟ್ ಮತ್ತು ವೈನ್ ಶಾಪ್‌ಗಳ ಮದ್ಯ ಮಾರಾಟವನ್ನು ನಿಷೇಧಿಸಿ, ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಮೇಲೆ ತಿಳಿಸಲಾದ ದಿನಗಳಂದು ಜಿಲ್ಲೆಯಲ್ಲಿ ಹಾಗೂ ಉಡುಪಿ ನಗರ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.

ಉಡುಪಿ | ಗಣೇಶ ಹಬ್ಬ ಆಚರಣೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ – ಜಿಲ್ಲಾಧಿಕಾರಿ
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: