ಉಡುಪಿ | ನೀರಿಲ್ಲದೆ ಒಣಗುತ್ತಿವೆ ತೋಟಗಳು

Date:

ರಾಜ್ಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಮಳೆಯಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ. ರಾಜ್ಯದ ವಿವಿಧ ಭಾಗಗಳಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ, ಉಡುಪಿ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯಾಗದೆ, ನೀರಿಲ್ಲದೆ ಅಡಿಕೆ ಸೇರಿದಂತೆ ಧೀರ್ಘಕಾಲದ ಬೆಳೆಗಳು ಒಣಗಲಾರಂಭಿಸಿವೆ. ರೈತರು ಕಂಗಾಲಾಗಿದ್ದಾರೆ.

ಜಿಲ್ಲೆಯ ರೈತರು ಅಡಿಕೆ, ತೆಂಗು, ಬಾಳೆ ಬೆಳೆಗಳನ್ನು ಹೆಚ್ಚಾಗಿ ಬೆಳೆಯುತ್ತಾರೆ. ಆದರೆ, ನೀರಿಲ್ಲದ ಪರಿಣಾಮ ಬೆಳೆಗಳು ಒಣಗುತ್ತಿವೆ. ಸೀತಾನದಿ, ಎಣ್ಣೆಹೊಳೆಯ ನದಿ ಹಾಗೂ ಶಾಂಭವಿ ನದಿಗಳಲ್ಲಿ ನೀರಿಲ್ಲದಂತಾಗಿದೆ. ಬೋರ್‌ವೆಲ್, ಕೆರೆ-ಕಟ್ಟೆಗಳು ಒಣಗಿವೆ. ಸಮುದ್ರ ತೀರದಲ್ಲಿದ್ದರೂ, ಬೆಳೆಗಳಿಗೆ ಬೇಕಾದ ನೀರಿಲ್ಲದೆ ಮಳೆಗಾಗಿ ರೈತರು ಕಾದುಕುಳಿತಿದ್ದಾರೆ.

ಜಿಲ್ಲೆಯ ಹೆಬ್ರಿ ಹಾಗೂ ಕಾರ್ಕಳ ತಾಲೂಕಿನ ಒಟ್ಟು 29,044 ಹೆಕ್ಟೆರ್ ಕೃಷಿ ಭೂಮಿಯಲ್ಲಿ 24,480 ಹೆಕ್ಟೆರ್ ಭೂಮಿಯಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಾಗುತ್ತಿದೆ. ಆದರೆ, ನೀರಿಲ್ಲದೆ ಬೇಸಿಗೆಯ ಬಿಸಿಲಿನಲ್ಲಿ ಅಡಿಕೆ, ತೆಂಗಿನ ಮರಗಳು ಒಣಗಲಾರಂಭಿಸಿವೆ. ಮರಗಳ ಗರಿಗಳು ಕಂದು ಬಣ್ಣಕ್ಕೆ ತಿರುಗಿವೆ. ಇಳುವರಿಯೂ ಕಡಿಮೆಯಾಗಿದ್ದು, ರೈತರು ನಷ್ಟದ ಸುಳಿಗೆ ಸಿಲುಕಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನೀರಿಗಾಗಿ ಸುಮಾರು 600 ರಿಂದ 700 ಅಡಿ ಕೊಳವೆಬಾವಿ ಕೊರೆಸಲಾಗುತ್ತಿದೆ. ಆದರೂ, ಹಲವೆಡೆ ನೀರು ಸಿಗುತ್ತಿಲ್ಲ. ಪರಿಣಾಮ ರೈತರು ಮತ್ತಷ್ಟು ಸಾಲಕ್ಕೆ ತುತ್ತಾಗುತ್ತಿದ್ದಾರೆ. ಕೊರೆಯಲಾಗುತ್ತಿರುವ ಕೊಳವೆಬಾವಿಗಳಿಲ್ಲಿ ಸರಾಸರಿ 50% ಕೊಳವೆಬಾವಿಗಳಲ್ಲಿ ನೀರು ಸಿಗುತ್ತಿಲ್ಲವೆಂದು ತಿಳಿದುಬಂದಿದೆ.

ಒಣಗಿಹೋಗಿರುವ ಬೆಳೆಗಳಿಗೆ ಪರಿಹಾರ ನೀಡಬೇಕೆಂದು ರೈತರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ತಮ್ಮ ಕಷ್ಟಗಳಿಗೆ ನೆರವು ನೀಡುವಂತೆ ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ...

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32...

ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...