ಉಡುಪಿ | ಗ್ರಾಮ ಪಂಚಾಯತ್ ಉಪ ಚುನಾವಣೆ, ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

Date:

  • ಉಡುಪಿ ಜಿಲ್ಲೆಯ ಉಡುಪಿ ತಾಲೂಕಿನ ಉದ್ಯಾವರ ಹಾಗೂ ಕಾಪು ತಾಲೂಕಿನ ಬೆಳ್ಳೆ ಹಾಗೂ ಪಡುಬಿದ್ರೆ ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ತಲಾ 01 ಸದಸ್ಯ ಸ್ಥಾನಗಳೂ ಸೇರಿದಂತೆ ಒಟ್ಟು 3 ಸದಸ್ಯ ಸ್ಥಾನಗಳಿಗೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ರ ಪ್ರಕರಣ 308 ಎಎ ಮತ್ತು 308 ಎಬಿ ಮತ್ತು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಚುನಾವಣೆ ನಡೆಸುವ) ನಿಯಮಗಳು 1993 ರ ನಿಯಮ 12 ರ ಅನ್ವಯ ಉಪ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ನಿಗಧಿಪಡಿಸಿ ರಾಜ್ಯ ಚುನಾವಣಾ ಆಯೋಗವು ಆದೇಶ ಹೊರಡಿಸಿದೆ.
  • ಜಿಲ್ಲಾಧಿಕಾರಿಗಳು ಏಪ್ರಿಲ್ 22 ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದು, ನಾಮಪತ್ರಗಳನ್ನು ಸಲ್ಲಿಸಲು ಏಪ್ರಿಲ್ 28 ಕೊನೆಯ ದಿನ. ಏ. 29 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮೇ 2 ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಮೇ 11 ರಂದು ಬೆಳಗ್ಗೆ 7 ರಿಂದ ಸಂಜೆ 5 ರ ವರೆಗೆ ಮತದಾನ ನಡೆಯಲಿದ್ದು, ಮೇ 14 ರಂದು ತಾಲೂಕು ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮತಗಳ ಎಣಿಕಾ ಕಾರ್ಯಗಳು ನಡೆಯಲಿದೆ.
  • ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ರ ಪ್ರಕರಣ 308 ಎಸಿ ರಂತೆ ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಏಪ್ರಿಲ್ 22 ರಿಂದ ಮೇ 14 ರ ವರೆಗೆ ಜಾರಿಯಲ್ಲಿರಲಿದೆ ಎಂದು ರಾಜ್ಯ ಚುನಾವಣಾ ಆಯೋಗದ ಕಚೇರಿ ಪ್ರಕಟಣೆ ತಿಳಿಸಿದೆ.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...