ಉಡುಪಿ | ಹನಿ ಟ್ರ್ಯಾಪ್ ಮೂಲಕ ಹಲ್ಲೈಗೈದು ಲೂಟಿಗೆ ಯತ್ನ, ಆರೋಪಿಗಳ ಬಂಧನ

Date:

Advertisements

ವ್ಯಕ್ತಿಯೊಬ್ಬನನ್ನು ಹನಿ ಟ್ರ್ಯಾಪ್ ಖೆಡ್ಡಾಕ್ಕೆ ಬೀಳಿಸಿ ಆತನಿಗೆ ಹಲ್ಲೆಗೈದು ಸಾವಿರಾರು ರೂ. ಲೂಟಿಗೈದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಈ ಕುರಿತು ಸಂದೀಪ್ ಕುಮಾರ್ ಎಂಬವರು ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಂಧಿತರನ್ನು ಬೈಂದೂರು ನಾವುಂದ ಗ್ರಾಮದ ಸವದ್ (28), ಕುಂದಾಪುರ ಗುಲ್ವಾಡಿ ಗ್ರಾಮದ ಸೈಪುಲ್ಲಾ (38), ಕುಂದಾಪುರ ಹಂಗಳೂರು ಗ್ರಾಮದ ಮೊಹಮ್ಮದ್ ನಾಸೀರ್ ಶರೀಫ್ ( 36), ಕುಂದಾಪುರ ಕುಂಭಾಶಿ ಗ್ರಾಮದ ಅಬ್ದುಲ್ ಸತ್ತಾರ್ ( 23), ಶಿವಮೊಗ್ಗ ಜಿಲ್ಲೆಯ ಹೊಸನಗರದ ಅಬ್ದುಲ್ ಅಜೀಜ್ (26) ಹಾಗೂ ಕುಂದಾಪುರ ಕೋಡಿ ನಿವಾಸಿ ಆಸ್ಮಾ (43) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಎರಡು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಘಟನೆ ವಿವರ: ಸಂದೀಪ್ ಕುಮಾರ್ ಎಂಬವರಿಗೆ ಮೂರು ತಿಂಗಳ ಹಿಂದೆ ಅಬ್ದುಲ್ ಸವಾದ್

ಎಂಬಾತ ಪರಿಚಯವಾಗಿದ್ದು, ಆತ ಆನ್ಮಾನ ಎಂಬಾಕೆಯ ಪರಿಚಯ ಮಾಡಿಕೊಟ್ಟು ಮೊಬೈಲ್ ಸಂಖ್ಯೆ ನೀಡಿ ಆಕೆಯೊಂದಿಗೆ ಲೈಂಗಿಕ ಸಂಪರ್ಕಬಹುದು ಎಂದು ತಿಳಿಸಿದ್ದನು. ಅದರಂತೆ ಸಂದೀಪ್, ಆರೋಪಿ ಆಸ್ಮಾಳಿಗೆ ಕರೆಮಾಡಿದ್ದರು. ಆಕೆ ಸೆ.2ರಂದು ಸಂಜೆ 6.30ಕ್ಕೆ ಕುಂದಾಪುರದ ಮಲ್ನಾಡ್ ಪೆಟ್ರೋಲ್ ಬಂಕ್ ಬಳಿಯ ಆರ್ ಆರ್ ಪ್ಲಾಝಾ ಬಳಿ ಬರಲು ತಿಳಿಸಿದ್ದಳು. ಅದರಂತೆ ಸಂದೀಪ್ ಆಟೋ ರಿಕ್ಷಾದಲ್ಲಿ ಅಲ್ಲಿಗೆ ಹೋಗಿದ್ದನು. ಬಳಿಕ ಆರೋಪಿ ಆಸ್ಮಾ ಅವಳ ಮನೆಗೆ ಕರೆದುಕೊಂಡು ಹೋಗಿದ್ದಳು. ಬಳಿಕ ಉಳಿದ ಆರೋಪಿಗಳನ್ನು ಕರೆ ಮಾಡಿ ಕರೆಯಿಸಿಕೊಂಡು 3 ಲಕ್ಷ ಹಣ ಕೊಟ್ಟು ಹೋಗಬೇಕು ಎಂದು ಚಾಕು ತೋರಿಸಿ ಹಣ ಕೊಡುವಂತೆ ಬೆದರಿಸಿದ್ದಾರೆ. ಬಳಿಕ ಸಂದೀಪ್ ಓಡಿ ಹೋಗಲು ಪ್ರಯತ್ನಿಸಿದಾಗ ಆರೋಪಿತಗಳಾದ ಸವದ್, ಸೈಪುಲ್ಲಾ, ಮೊಹಮ್ಮದ್ ನಾಸೀರ್ ಶರೀಫ್, ಅಬ್ದುಲ್ ಸತ್ತಾ‌ರ್ ಮತ್ತು ಅಬ್ದುಲ್ ಅಜೀಜ್ ಸೇರಿಕೊಂಡು ಸಂದೀಪ್ ಕೈಗಳನ್ನು ನೈಲಾನ್ ಹಗ್ಗದಿಂದ ಕಟ್ಟಿ ಕೈಯಿಂದ ಹಲ್ಲೆ ಮಾಡಿದ್ದಾರೆ. ರಾಡ್ ನಿಂದ ಎಡ ಭುಜ ಹಾಗೂ ಬೆನ್ನಿಗೆ ಹೊಡೆದು ಬಳಿಕ ಪ್ಯಾಂಟ್ ಜೇಬಿನಲ್ಲಿದ್ದ 6,200 ರೂಪಾಯಿನ್ನು ಬಲವಂತದಿಂದ ಕಸಿದುಕೊಂಡಿದ್ದಾರೆ. ಆರೋಪಿಗಳು ಇನ್ನೂ ಹಣ ನೀಡುವಂತೆ ಬೆದರಿಸಿದ್ದಾರೆ. ಆಗ ಸಂದೀಪ್ ಹಣ ಇಲ್ಲ ಎಂದು ಹೇಳಿದಕ್ಕೆ, ನಿನ್ನನ್ನು ಇಲ್ಲಿಯೇ ಕೊಲೆ ಮಾಡಿ ಹುಗಿದು ಹಾಕುತ್ತೇವೆಂದು ಬೆದರಿಸಿ ಮತ್ತೆ ಕೈಯಿಂದ ಹೊಡೆದಿದ್ದಾರೆ. ಇದಕ್ಕೆ ಹೆದರಿದ ಸಂದೀಪ್, ಸೈಪುಲ್ಲಾ ಖಾತೆಗೆ 30 ಸಾವಿರ ಹಣ ಹಾಕಿದ್ದಾರೆ. ಆ ಬಳಿಕ ಬಲತ್ಕಾರವಾಗಿ ಎಟಿಎಂ ಕಾರ್ಡ್ ನ್ನು ಕಿತ್ತುಕೊಂಡು ಪಿನ್ ನಂಬ್ರ ಪಡೆದು ಕೊಂಡು 40 ಸಾವಿರ ಹಣ ಡ್ರಾ ಮಾಡಿಕೊಂಡಿದ್ದಾರೆ ಎಂದು ಸಂದೀಪ್ ದೂರಿನಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

Download Eedina App Android / iOS

X