ಉಡುಪಿ | ಮಧ್ಯಪ್ರಾಚ್ಯ ದೇಶಗಳಲ್ಲಿ ಬಿಕ್ಕಟ್ಟು : ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ

Date:

ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ, ಉಡುಪಿ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಈ ಕೆಳಗಿನ ಮಾಹಿತಿಯನ್ನು ಹಂಚಿಕೊಂಡಿದೆ.

- Advertisement -

ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ ಸ್ಥಿತಿ ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು ಮಾರ್ಚ್ 2 ರವರೆಗೆ ಮುಚ್ಚಲಾಗಿದೆ. ಈ ಅನಿರೀಕ್ಷಿತ ಅಡಚಣೆಯಿಂದಾಗಿ ಹಾಗೂ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

ಜಿಲ್ಲಾಡಳಿತದ ಕ್ರಮಗಳು : ಮಾನ್ಯ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ, ರಾಜ್ಯ ಮತ್ತು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 24×7 ಕಾರ್ಯನಿರ್ವಹಿಸುತ್ತಿವೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರಿ ಕಚೇರಿಗಳು ನೀಡುವ ಸೂಚನೆಗಳನ್ನು ಜಿಲ್ಲಾಡಳಿತವು ನಿರಂತರವಾಗಿ ಗಮನಿಸುತ್ತಿದೆ.

ಉಡುಪಿ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಹೆಚ್ಚಿನ ಮಾಹಿತಿಗಾಗಿ ಮತ್ತು ಸಹಾಯಕ್ಕಾಗಿ ಉಡುಪಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ : 0820-2574802 (1077-ಟೋಲ್ ಫ್ರೀ), ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ದೂ.ಸಂಖ್ಯೆ: 080-22340676, 080-22253707, ಟೋಲ್ ಫ್ರೀ ಸಂಖ್ಯೆ: 1070 ಗೆ ಕರೆ ಮಾಡಿ ಮಾಹಿತಿ ಹಾಗೂ ಸಹಾಯ ಪಡೆಯಬಹುದಾಗಿದೆ.

ಸಾರ್ವಜನಿಕರಿಗೆ ಪ್ರಮುಖ ಸೂಚನೆಗಳು: ಮಧ್ಯಪ್ರಾಚ್ಯ ದೇಶಗಳಲ್ಲಿರುವ ಕರ್ನಾಟಕದ ನಿವಾಸಿಗಳು ಹಾಗೂ ಜಿಲ್ಲೆಯವರಿದ್ದಲ್ಲಿ ಅಲ್ಲಿನ ಸ್ಥಳೀಯ ಸರ್ಕಾರಗಳು ನೀಡುವ ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಕಷ್ಟದಲ್ಲಿರುವವರು ಆಯಾ ದೇಶದ ಭಾರತೀಯ ರಾಯಭಾರಿ ಕಚೇರಿಯ ಸಹಾಯವಾಣಿ ಅಥವಾ “ಸಾರಥಿ ಸಹಾಯತಾ” ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ವಿಸಾ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಹತ್ತಿರದ ಎಫ್.ಆರ್.ಆರ್.ಒ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ...

ಉಡುಪಿ | ಕೃಷಿ ಮೇಳದಿಂದ ರೈತರ ಬದುಕಿಗೆ ಆತ್ಮಸ್ಥೈರ್ಯ ತುಂಬಲಿ: ಕೋಟ ಶ್ರೀನಿವಾಸ ಪೂಜಾರಿ

ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು...