ಉಡುಪಿ | ನೀರಿಗಾಗಿ ಕಣ್ಣೀರಿಡುವ ದುರಂತ ಕಾಲವನ್ನು ದೂರ ಮಾಡೋಣ

Date:

ನಮ್ಮ ಬದುಕಿಗೆ ನೆಲೆ ಒದಗಿಸಿದ ಈ ನೆಲದೊಡಲಿನ ನೀರ ಖಜಾನೆಯನ್ನು ಬರಿದಾಗದಂತೆ ಕಾದುಕೊಳ್ಳದಿದ್ದರೆ ನೀರಿಗಾಗಿ ಕಣ್ಣೀರಿಡುವ ದುರಂತ ಕಾಲ ನಮ್ಮಿಂದ ಬಹಳ ದೂರವೇನೂ ಇಲ್ಲ ಎಂದು ಜಲಜೀವನ್‌ ಮಿಶನ್‌ನ ರಾಜ್ಯ ಸಂಪನ್ಮೂಲ ವ್ಯಕ್ತಿ ರತ್ನಶ್ರೀ ಜೋಸೆಫ್ ಜಿ ಎಂ‌ ರೆಬೆಲ್ಲೋ ಹೇಳಿದರು.

- Advertisement -

ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಉಡುಪಿ ಜಿಲ್ಲಾ ಪಂಚಾಯತ್‌ ಜಲಜೀವನ್‌ ಮಿಶನ್‌ ವತಿಯಿಂದ ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ರಾ.ಸೇ.ಯೋ. ಘಟಕ, ಯೂತ್‌ ರೆಡ್‌ಕ್ರಾಸ್‌ ಘಟಕಗಳ ಸಹಯೋಗದಲ್ಲಿ ಆಯೋಜಿಸಿದ ʼಮಳೆನೀರು ಕೊಯ್ಲು ಮತ್ತು ಮಳೆನೀರು ಪುನರ್‌ ಬಳಕೆʼ ಕಾರ್ಯಕ್ರಮದ ಅಂಗವಾಗಿ ಪ್ರಾತ್ಯಕ್ಷಿಕೆ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರವನ್ನು ನಡೆಸಿಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...
WhatsApp Image 2025 10 10 at 10.10.12 AM

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಡಾ. ಜಯಪ್ರಕಾಶ್‌ ಶೆಟ್ಟಿ ಹೆಚ್‌. ʼನಮ್ಮ ಹಿರೀಕರು ನೀರನ್ನೇ ನಿಧಿಯಾಗಿ ಕಾದುಕೊಳ್ಳುವ ಸಲುವಾಗಿಯೇ ಅದಕ್ಕೆ ಆಸ್ತಿಕತೆಯ ಆವರಣವನ್ನು ಬೆಸೆದು ಮಳೆನೀರು ಕೊಯ್ಲಿನ ನಿಸರ್ಗ ಸಹಜ ಮಾದರಿಗಳಾದ ಹುತ್ತಗಳನ್ನು ಹೇಗೆ ಜತನವಾಗಿ ಕಾದುಕೊಂಡಿದ್ದರು ಎಂಬ ಅರಿವು ನಮಗೆ ಅಗತ್ಯವಿದೆʼ ಎಂದರು.

ಕಾರ್ಯಕ್ರಮದಲ್ಲಿ ಜಲಜೀವನ್‌ ಮಿಶನ್‌ನ ಐ.ಎಸ್‌.ಎ. ಟೀಮ್‌ ಲೀಡರ್‌ ಶ್ರೀಮತಿ ಉಷಾ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸೌಮ್ಯಲತಾ ಪಿ., ಐಕ್ಯುಎಸಿ ಸಂಚಾಲಕ ಡಾ. ಲಿತಿನ್‌ ಬಿ.ಎಂ., ರಾ.ಸೇ.ಯೋ. ಮತ್ತು ಯೂತ್‌ ರೆಡ್‌ಕ್ರಾಸ್‌ ಕಾರ್ಯಕ್ರಮಾಧಿಕಾರಿ ನಂದೀಶ್‌ಕುಮಾರ್‌ ಕೆ.ಸಿ. ಮತ್ತು ವಿದ್ಯಾರ್ಥಿ ನಾಯಕ ಈರಬಸು ಉಪಸ್ಥಿತರಿದ್ದರು. ಸುಹಾ ಸ್ವಾಗತಿಸಿ, ಯಮನಪ್ಪ ಅತಿಥಿಗಳನ್ನು ಪರಿಚಯಿಸಿ, ಖುಷಿ ವಂದಿಸಿದ ಈ ಕಾರ್ಯಕ್ರಮವನ್ನು ವೈಷ್ಣವಿ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...