ಉಡುಪಿ | ಗೃಹರಕ್ಷಕರಿಂದ ಸಮಾಜಕ್ಕೆ ನಿಸ್ವಾರ್ಥ ಸೇವೆ – ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

Date:

Advertisements

ಪ್ರಕೃತಿಕ ವಿಕೋಪ ಸೇರಿದಂತೆ ಮುಂತಾದ ತುರ್ತು ಸಂದರ್ಭದಲ್ಲಿ ಗೃಹರಕ್ಷಕದಳದ ಸಿಬ್ಬಂದಿಗಳು ತಮ್ಮ ಜೀವವನ್ನು ಪಣಕಿಟ್ಟು ತಕ್ಷಣ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ಸಮಾಜಕ್ಕೆ ನಿಸ್ವಾರ್ಥ ಸೇವೆ ನೀಡುತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.
ಅವರು ಇಂದು ನಗರದ ಜಿಲ್ಲಾ ಗೃಹರಕ್ಷಕ ದಳ ಕಚೇರಿ ಆವರಣದಲ್ಲಿ ಜಿಲ್ಲಾ ಗೃಹರಕ್ಷಕ ದಳ ಉಡುಪಿ ಜಿಲ್ಲೆ ಇವರ ವತಿಯಿಂದ ನಡೆದ ಅಖಿಲ ಭಾರತ ಗೃಹರಕ್ಷಕ ದಿನಾಚರಣೆ ಕಾರ್ಯಕ್ರಮವು ಉದ್ಘಾಟಿಸಿ ಮಾತನಾಡುತ್ತಿದ್ದರು.

ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸ್ ಇಲಾಖೆಯ ಜೊತೆಗೂಡಿ, ಅವರಿಗೆ ಸಹಕಾರ ನೀಡಿ, ಕರ್ತವ್ಯ ನಿರ್ವಹಿಸುತ್ತಿರುವ ಗೃಹರಕ್ಷಕ ದಳದ ಕಾರ್ಯ ಶ್ಲಾಘನೀಯ ಎಂದ ಅವರು, ಮುಂದಿನ ದಿನಗಳಲ್ಲಿ ಗೃಹ ರಕ್ಷಕ ದಳದ ಸಿಬ್ಬಂದಿಗಳೂ ಇದೇ ರೀತಿಯಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆಗಳನ್ನು ನೀಡುವಂತೆ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಮಾತನಾಡಿ, ಗೃಹರಕ್ಷಕ ದಳವು ಪೊಲೀಸ್ ಇಲಾಖೆಯ ಒಂದು ಪ್ರಮುಖ ಅಂಗವಾಗಿದ್ದು, ಬೇರೆ ಇಲಾಖೆಯನ್ನು ಹೋಲಿಸಿದರೆ ಗೃಹ ರಕ್ಷಕದಳ ಇಲಾಖೆಯು ಪೊಲೀಸ್ ಇಲಾಖೆಯನ್ನು ಅತಿ ಸಮೀಪದಿಂದ ತಿಳಿದಿದೆ. ಯಾವುದೇ ಸಮಯದಲ್ಲಾದರೂ ಪೊಲೀಸ್ ಇಲಾಖೆಯ ಕೆಲಸಗಳಿಗೆ ಗೃಹರಕ್ಷಕರು ಸಹಕಾರ ನೀಡುತ್ತಿದ್ದಾರೆ ಎಂದರು.

Advertisements

ಜಿಲ್ಲಾ ಗೃಹರಕ್ಷಕ ದಳ ಸಮಾದೇಷ್ಟ ಡಾ. ರೋಶನ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ವಾರ್ಷಿಕ ವರದಿ ವಾಚಿಸಿ ಮಾತನಾಡಿ, ಗೃಹರಕ್ಷಕ ದಳದ ಸಿಬ್ಬಂದಿಗಳನ್ನು ಮುಂದಿನ ದಿನಗಳಲ್ಲಿ ಬೀಚ್‌ಗಳಲ್ಲಿ ಪ್ರವಾಸಿಗರ ಜೀವರಕ್ಷಕರ ಸೇವೆಯಲ್ಲಿ ಕಾರ್ಯನಿರ್ವಹಿಸಲು ನಿಯೋಜಿಸಲಾಗುವುದು ಎಂದ ಅವರು, ಪ್ರತಿಯೊಬ್ಬರೂ ಶಿಸ್ತು, ಬದ್ಧತೆಯಿಂದ ತಮಗೆ ಸೂಚಿಸುವ ಕಾರ್ಯವನ್ನು ನಿರ್ವಹಿಸಿ, ಸಂಸ್ಥೆಗೆ ಉತ್ತಮ ಹೆಸರನ್ನು ತರಬೇಕು ಎಂದರು.

ಕಾರ್ಯಕ್ರಮದ ಅಂಗವಾಗಿ ಗೃಹರಕ್ಷಕ ದಳ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಕಾರ್ಕಳ ಘಟಕದ ಶಿವಪ್ರಸಾದ್, ಬ್ರಹ್ಮಾವರ ಘಟಕದ ವಿಜಯ ಕುಮಾರ್, ಉಡುಪಿ ಘಟಕದ ಪೂರ್ಣಿಮಾ ಹಾಗೂ ಮಣಿಪಾಲ ಘಟಕದ ವಿಲ್ಮಾ ಜ್ಯೋತಿ ರೊಡ್ರೆಗಸ ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಗೃಹರಕ್ಷಕ ದಳ ಕಛೇರಿಯ ಅಧೀಕ್ಷಕ ರತ್ನಾಕರ್ ಎಂ ಸನ್ಮಾನಿತರ ವಿವರ ವಾಚಿಸಿದರು. ಜಿಲ್ಲೆಯ ವಿವಿಧ ಘಟಕಗಳ ಗೃಹ ರಕ್ಷಕ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗೃಹರಕ್ಷಕದಳದ ಸೆಕೆಂಡ್ ಇನ್ ಕಮಾಂಡ್ ಕೆ.ಸಿ.ರಾಜೇಶ್ ಸ್ವಾಗತಿಸಿ, ಪ್ರತಿಜ್ಞಾ ವಿಧಿ ಬೋಧಿಸಿದರು. ಸ್ಟೀವಸ್ ಪ್ರಕಾಶ್ ಲೂವಿಸ್ ನಿರೂಪಿಸಿದರೆ, ಕಾರ್ಕಳ ಘಟಕದ ಪ್ಲಟೂನ್ ಕಮಾಂಡರ್ ಪ್ರಭಾಕರ ಸುವರ್ಣ ವಂದಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X