ಉಡುಪಿ | ಮಹಾಲಕ್ಷ್ಮೀ ಬ್ಯಾಂಕ್‌ ಅವ್ಯವಹಾರ: ಸರ್ಕಾರದ ಮಧ್ಯಸ್ಥಿಕೆಗೆ ಬಿ ಕೆ ಹರಿಪ್ರಸಾದ್‌ ಆಗ್ರಹ

Date:

ಉಡುಪಿ ಜಿಲ್ಲೆಯ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ಭಾರೀ ಅವ್ಯವಹಾರ ನಡೆದಿರುವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ‌ ಬಿ ಕೆ ಹರಿಪ್ರಸಾದ್‌ ಆಗ್ರಹಿಸಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಪತ್ರಿಕೆ ಹೇಳಿಕೆ ನೀಡಿರುವ ಅವರು, “ಉಡುಪಿ ಜಿಲ್ಲೆಯ ಮಲ್ಪೆ ನಗರದ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದ್ದು, ಬ್ಯಾಂಕ್‌ನ ಅಮಾಯಕ ಗ್ರಾಹಕರು ಅನ್ಯಾಯಕ್ಕೆ ಒಳಗಾಗಿದ್ದಾರೆ. ಸುಮಾರು 1,413 ಮಂದಿ ಗ್ರಾಹಕರು ತಲಾ ₹20 ಸಾವಿರದಂತೆ ಸಾಲ ಪಡೆದಿದ್ದಾರೆ. ಆದರೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ತಲಾ ₹2 ಲಕ್ಷ ಸಾಲ ಪಡೆದಿರುವುದಾಗಿ ದಾಖಲೆಗಳಲ್ಲಿ ನಮೂದಿಸಿದ್ದಾರೆ. ಇದರಿಂದ ಬರೋಬ್ಬರಿ ₹20 ಕೋಟಿಗೂ ಹೆಚ್ಚು ಅವ್ಯವಹಾರ ನಡೆದಿರುವ ಆರೋಪಗಳು ಕೇಳಿಬರುತ್ತಿವೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

“ನೂರಾರು ಗ್ರಾಹಕರು ತಾವು ಪಡೆದುಕೊಂಡ ಸಾಲದ ಹಣಕ್ಕಿಂತಲೂ ಹೆಚ್ಚಿನ ಹಣವನ್ನು ಈಗಾಗಲೇ ಪಾವತಿ ಮಾಡಿದ್ದಾರೆ. ಆದರೂ ಬ್ಯಾಂಕಿನ ಸಿಬ್ಬಂದಿ ದಬ್ಬಾಳಿಕೆ ದೌರ್ಜನ್ಯ ನಡೆಸಿ ಗ್ರಾಹಕರಿಂದ ಮತ್ತಷ್ಟು ಹಣ ಕೀಳುತ್ತಿರುವುದಾಗಿ ಗ್ರಾಹಕರು ಅಳಲು ತೋಡಿಕೊಳ್ಳುತ್ತಿದ್ದಾರೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಮೋಸ ಮಾಡಿದ್ದಲ್ಲದೆ ಗ್ರಾಹಕರ ಮೇಲೆಯೇ ದಬ್ಬಾಳಿಕೆ ನಡೆಸುತ್ತಿರುವುದು ಅಕ್ಷಮ್ಯ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಲಾಟರಿ ಹಾವಳಿಯ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಿದೆ: ಜಿಲ್ಲಾಧಿಕಾರಿ ಕುಮಾರ್

“ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕಿನಲ್ಲಿ ಈ ಹಿಂದೆಯೂ ಹಲವು ಆರೋಪಗಳು ಕೇಳಿಬಂದಿವೆ. ಕಳೆದ ವರ್ಷ ಬ್ಯಾಂಕಿನ ಮ್ಯಾನೇಜರ್ ಕೂಡ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ಹಲವು ಪ್ರಭಾವಿಗಳ ಕೈವಾಡ ಇರುವುದು ಸ್ಪಷ್ಟವಾಗಿದೆ. ಪ್ರಕರಣವೂ ಗಂಭೀರವಾಗಿದೆ. ಹಾಗಾಗಿ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ, ಸರ್ಕಾರ ಕೂಡಲೇ ವಿಶೇಷ ತನಿಖಾ ತಂಡ ರಚಿಸಿ, ಅನ್ಯಾಯಕ್ಕೊಳಗಾದ ಗ್ರಾಹಕರಿಗೆ ನ್ಯಾಯ ಒದಗಿಸಿಕೊಡಬೇಕಾಗಿದೆ” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...