ಉಡುಪಿ | ಮಳೆ ಹಾನಿ : ಮಾಹಿತಿ ಪಡೆದು ಕ್ರಮಕ್ಕೆ ಸೂಚಿಸಿದ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

ಉಡುಪಿ ಜಿಲ್ಲೆಯ ಕೆಲವೆಡೆ ಗಾಳಿ ಮತ್ತು ಮಳೆಯಿಂದ ಹಾನಿಯಾಗಿರುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ಪಡೆದಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

- Advertisement -

ಬೆಂಗಳೂರಿನಲ್ಲಿರುವ ಸಚಿವರು ಸಚಿವ ಸಂಪುಟ ಸಭೆಗೆ ಹೊರಡುವುದಕ್ಕೂ ಮುನ್ನ, ಉಡುಪಿ ಜಿಲ್ಲೆಯಾದ್ಯಂತ ಮಳೆಹಾನಿಯಿಂದ ಉಂಟಾದ ಸಮಸ್ಯೆಗಳು ಹಾಗೂ ಸದ್ಯದ ಪರಿಸ್ಥಿತಿಯ ಕುರಿತು ಅಧಿಕಾರಿಗಳ ಜೊತೆ ದೂರವಾಣಿ ಮೂಲಕ ಚರ್ಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಜಿಲ್ಲೆಯ ಅಮಾಸೆಬೈಲು ಸೇರಿದಂತೆ ಕೆಲವೆಡೆ ಮಳೆ, ಗಾಳಿಯಿಂದ ಉಂಟಾಗಿರುವ ಹಾನಿಯ ಮಾಹಿತಿ ಪಡೆದರು. ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದ ಸಚಿವರು, ಪರಿಹಾರಕ್ಕೆ ಕ್ರಮ ಕೈಗಳ್ಳುವಂತೆ ತಿಳಿಸಿದರು. ಜೊತೆಗೆ, ಜನರಿಗೆ ಎಚ್ಚರಿಕೆ ಕ್ರಮಗಳ ಕುರಿತು ತಿಳಿಸಬೇಕೆಂದೂ ಸೂಚಿಸಿದರು.

ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆ ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜು.4ರ ಗುರುವಾರ ರಜೆ ಘೋಷಿಸಲಾಗಿದೆ.

ಗಾಳಿ-ಮಳೆ ಹೆಚ್ಚಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ, ಜಿಲ್ಲಾಧಿಕಾರಿಗಳು ಸೂಚನೆಯಂತೆ ರಜೆ ನೀಡಲಾಗಿದೆ ಎಂದು ಬೈಂದೂರು ಬಿಇಒ ತಿಳಿಸಿದ್ದಾರೆ. ಉಡುಪಿಯ ಇತರ ವಿಭಾಗಗಳಲ್ಲಿ ಎಂದಿನಂತೆ ತರಗತಿ ನಡೆಯಲಿವೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...