ಉಡುಪಿ | ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಅನ್ಯಾಯ; ಚೆಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ

Date:

ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಚೆಂಬು ಹಿಡಿದುಕೊಂಡು ಉಡುಪಿ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ ಮಾಡುವ ಮೂಲಕ ಲೋಕಸಭಾ ಚುನಾವಣೆಯ ಪ್ರಚಾರ ನಡೆಸಿತು.

- Advertisement -

ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ತೆರಿಗೆ ಪಾಲನ್ನು ನೀಡದೇ, ಜನರಲ್ಲಿ ಸುಳ್ಳನ್ನು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿಯ ಜನವಿರೋಧಿ ವರ್ತನೆಯನ್ನು ಖಂಡಿಸುವ ಸಲುವಾಗಿ ಇಡೀ ಬ್ಲಾಕ್ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಭಿನ್ನ ಅಭಿಯಾನ ನಡೆಸಿದರು. ಉಡುಪಿ ಬ್ಲಾಕ್ ನ 133 ಬೂತ್‌ಗಳಲ್ಲಿ ಕೂಡ ಪ್ರಚಾರಕ್ಕೆ ಹೋಗುವ ಕಾರ್ಯಕರ್ತರು ಈ ವಿಭಿನ್ನ ಅಭಿಯಾನದ ಮೂಲಕ ಮತಪ್ರಚಾರ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ವೇಳೆ ಮಾತನಾಡಿದ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದರೂ ಕೂಡ ಬಿಜೆಪಿಯ ಸಂಸದರು ಕೇಂದ್ರದ ಮುಂದೆ ಬಾಯಿ ಬಿಚ್ಚುತ್ತಿಲ್ಲ. ದೇಶದಲ್ಲಿಯೇ ಅತೀ ಹೆಚ್ಚು ತೆರಿಗೆ ಸಂಗ್ರಹ ಮಾಡುವ ರಾಜ್ಯವಿದ್ದರೆ, ಅದು ಕರ್ನಾಟಕ ಆಗಿದ್ದು ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲು ನೀಡುವಂತೆ ಪರಿಪರಿಯಾಗಿ ಬೇಡಿಕೊಂಡರೂ ಕೂಡ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ನೀಡದೆ ಸುಳ್ಳು ಹೇಳಿಕೊಂಡು ತಿರುಗಾಡುತ್ತಿದೆ. ಕೇಂದ್ರದ ಬಿಜೆಪಿ ಸರ್ಕಾರ ನೀಡಿದ ಯಾವುದೇ ಭರವಸೆಗಳು ಈ ವರೆಗೆ ಈಡೇರಿಲ್ಲ. ಈ ಬಾರಿ ಮತ್ತೆ ದೇಶದ ಮತದಾರರು ಬಿಜೆಪಿಯನ್ನು ಬೆಂಬಲಿಸಿದರೆ ಮುಂದೆ ಪ್ರತಿಯೊಬ್ಬರಿಗೂ ಚೊಂಬೇ ಗತಿಯಾಗಲಿದೆ ಎಂದು ಹೇಳಿದರು.

ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾದ ಹರೀಶ್ ಕಿಣಿ, ನಾಯಕರಾದ ನಾಗೇಶ್ ಉದ್ಯಾವರ, ಮಹಾಬಲ ಕುಂದರ್, ಆನಂದ ಪೂಜಾರಿ, ಸತೀಶ್ ಮಂಚಿ, ಸದಾಶಿವ ಪೂಜಾರಿ ಕಟ್ಟೆಗುಡ್ಡೆ ಸಂಧ್ಯಾ ತಿಲಕರಾಜ್, ಅರ್ಚನಾ, ನರಸಿಂಹ ಮೂರ್ತಿ, ರಾಜೇಶ್ ನಾಯಕ್, ಶರತ್ ಶೆಟ್ಟಿ, ಸತೀಶ್ ಪುತ್ರನ್, ಭರತ್, ಪ್ರಮೀಳಾ ಸುವರ್ಣ ಹಾಗೂ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹ: ಅ.9ರಂದು ಮತ ಕಾವಲು ಸಮಿತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್...