ಉಡುಪಿ | ಮಕ್ಕಳಲ್ಲಿ ಪರಿಸರ ಪ್ರೇಮ ಮತ್ತು ಉದಾತ್ತ ಮೌಲ್ಯಗಳನ್ನು ಬಿತ್ತೋಣ

Date:

ದೇಶದ ಉಜ್ವಲ ಭವಿಷ್ಯಕ್ಕಾಗಿ ಮಕ್ಕಳಲ್ಲಿ ಪರಿಸರ ಪ್ರೇಮ ಮತ್ತು ಉದಾತ್ತ ಮೌಲ್ಯಗಳನ್ನು ಬಿತ್ತಬೇಕು ಎಂದು ಜಮಾಅತೆ ಇಸ್ಲಾಮೀ ಹಿಂದ್‌ನ ರಾಜ್ಯ ಕಾರ್ಯದರ್ಶಿ ರಿಯಾಝ್ ಅಹಮದ್ ರೋಣ್ ಅವರು ಅಭಿಪ್ರಾಯಪಟ್ಟರು, ಅವರು ನಗರದಲ್ಲಿ ಸಿಐಓ ವತಿಯಿಂದ ಅಯೋಜಿಸಿದ್ದ “ಹ್ಯಾಂಡ್ಸ್ ಆನ್ ಸಾಯ್ಲ್, ಹಾರ್ಟ್ ವಿದ್ ಇಂಡಿಯಾ” – “ಕೈಯಲ್ಲಿ ಮಣ್ಣು-ಹೃದಯದಲ್ಲಿ ಭಾರತ” ಎಂಬ ರಾಷ್ಟ್ರೀಯ ಅಭಿಯಾನದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.

- Advertisement -

ಕಳೆದ ಒಂದು ತಿಂಗಳಿನಿAದ ರಾಷ್ಟ್ರಾದ್ಯಂತ ಚಿಲ್ಡ್ರನ್ಸ್ ಸರ್ಕಲ್ ಇಸ್ಲಾಮಿಕ್ ಆರ್ಗನೈಝೇಶನ್ (ಸಿಐಓ) ವತಿಯಿಂದ ಮಕ್ಕಳ ಮೂಲಕ ಪರಿಸರ ಜಾಗೃತಿ, ಪ್ರಕೃತಿ ಸಂರಕ್ಷಣೆಯ ಕುರಿತು ವೈವಿದ್ಯಮಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಮಕ್ಕಳು ತಮ್ಮ ತಮ್ಮ ಪರಿಸರದಲ್ಲಿ, ಶಾಲಾ-ಕಾಲೇಜು, ಕಛೇರಿ ಪಾರ್ಕು, ಉದ್ಯಾನವನ, ಮಸೀದಿ, ಮದ್ರಸಾ, ಮಂದಿರ, ಚರ್ಚ್ ವೃದ್ಧಾಶ್ರಮಗಳ ವಠಾರದಲ್ಲಿ ತೆರಳಿ ಗಿಡ ನೆಡುವ ಹಾಗೂ ಪರಿಸರ ಸಂರಕ್ಷಣೆಯ ಕುರಿತು ಭಾಷಣಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಪತ್ರಿಕಾಗೋಷ್ಠಿ, ರ‍್ಯಾಲಿಗಳ ಮೂಲಕ ಜಾಗೃತಿ ಮೂಡಿಸುವ ವೈವಿದ್ಯಮ ಕಾರ್ಯಕ್ರಮಗಳನ್ನು ಹಮಿಕೊಂಡಿದ್ದರು. ಉಡುಪಿ ಜಿಲ್ಲೆಯಲ್ಲೂ ಮಕ್ಕಳು ಸಕ್ರೀಯವಾಗಿ ಈ ಚಟುವಟಿಕೆಗಳಲ್ಲಿ ಪಾಲ್ಗೊಂಡರು ಮತ್ತು ಉಡುಪಿ ಜಿಲ್ಲೆಯಾದ್ಯಂತ 3,000ಕ್ಕೂ ಮಿಕ್ಕಿ ಗಿಡಗಳನ್ನು ನೆಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ವೇದಿಕೆಯಲ್ಲಿ ಸಿಐಓ ರಾಜ್ಯಘಟಕ ಸದಸ್ಯೆ ಮೆಹರುನ್ನಿಸಾ ಮಣಿಪಾಲ್, ಜಮಾಅತೆ ಇಸ್ಲಾಮೀ ಹಿಂದ್‌ನ ಉಡುಪಿ ನಗರ ಶಾಖೆಯ ಅಧ್ಯಕ್ಷ ನಿಸಾರ್ ಅಹಮದ್, ಮಹಿಳಾ ವಿಭಾಗದ ಅಧ್ಯಕ್ಷೆ ವಾಜಿದಾ ತಬಸ್ಸುಮ್ ಉಪಸ್ಥಿತರಿದ್ದರು. ನೂರ್‌ಜಹಾನ್ ಕಟಪಾಡಿ ಪ್ರಸ್ತಾವನೆಗೈದರು. ಶಮ್ಶಾದ್ ಹಸನ್ ನಿರೂಪಣೆಗೈದು ಕೊನೆಯಲ್ಲಿ ಧನ್ಯವಾದವಿತ್ತರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...