ಉಡುಪಿ | ಕರಾವಳಿ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಆಗ್ರಹ

Date:

Advertisements

ರಾಜ್ಯದ ಪ್ರವಾಸೋದ್ಯಮದಲ್ಲಿ ಕರಾವಳಿ ಕರ್ನಾಟಕದ ಪಾತ್ರ ಮಹತ್ತರವಾಗಿದೆ. ಆದರೆ ದೀಪದ ಕೆಳಗೆ ಕತ್ತಲು ಎಂಬಂತೆ ಕರಾವಳಿ ಜಿಲ್ಲೆಗಳಲ್ಲಿ ಪರಿಣಾಮಕಾರಿ ಅಭಿವೃದ್ಧಿಯಾಗಿಲ್ಲ ಎಂದು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಜಿಲ್ಲಾಧ್ಯಕ್ಷ ಡಿ ಆರ್ ರಾಜು ಕಳವಳ ವ್ಯಕ್ತಪಡಿಸಿದರು.

ಉಡುಪಿ ಜಿಲ್ಲೆಯ ಕಾರ್ಕಳದ ಕಟೀಲು ಇಂಟರ್ ನ್ಯಾಷನಲ್ ಹೊಟೇಲ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತಮಾಡಿದರು.

“ಕರಾವಳಿ ಕರ್ನಾಟಕದ ಉಳ್ಳಾಲದಿಂದ ಕಾರವಾರದವರೆಗಿನ ಸುಮಾರು 320 ಕಿಮೀ ಸಮುದ್ರ ತೀರವು ನಿರಂತರವಾಗಿ ಪ್ರತಿ ವರ್ಷ ಕಡಲ್ಕೊರೆತದ ಹೊಡೆತಕ್ಕೆ ಸಿಲುಕಿದರೂ ಕೂಡ ಈವರೆಗೆ ಕಡಲ್ಕೊರೆತ ತಡೆಗಟ್ಟುವ ನಿಟ್ಟಿನಲ್ಲಿ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಿಲ್ಲ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸೂಕ್ತ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು” ಎಂದು ಒತ್ತಾಯಿಸಿದರು.

Advertisements

“ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಅಭಿವೃದ್ಧಿ ವಿಚಾರದಲ್ಲಿ ಕರಾವಳಿಯ ಜಿಲ್ಲೆಗಳು ತೀರಾ ಹಿಂದುಳಿದಿವೆ. ಪ್ರಮುಖವಾಗಿ ನಮ್ಮ ಜಿಲ್ಲೆಗಳಿಗೆ ಸಂಪರ್ಕ ಕೊಂಡಿಯಾಗಿರುವ ಪಶ್ಚಿಮ ಘಟ್ಟದ ಶ್ರೇಣಿಯ ರಸ್ತೆಗಳ ಅಭಿವೃದ್ಧಿಯಾಗಬೇಕು. ಎಲ್ಲ ಪ್ರಮುಖ ಸಂಪರ್ಕ ರಸ್ತೆಗಳು ಚತುಷ್ಪಥ ರಸ್ತೆಗಳಾದರೆ ಮೂಲಸೌಕರ್ಯ ಅಭಿವೃದ್ಧಿಯಾಗುತ್ತದೆ. ಜತೆಗೆ ಪ್ರವಾಸೋದ್ಯಮವೂ ಬೆಳೆಯಲು ಸಾಧ್ಯವಿದೆ” ಎಂದರು.

“ಕಡಲ್ಕೊರೆತ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಸ್ಥಳೀಯರ ತಾಂತ್ರಿಕ ಪರಿಣಿತ ತಂತ್ರಜ್ಞರ ಜತೆ ಸಭೆ ನಡೆಸಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕಿದೆ. ಅಲ್ಲದೆ ಕರಾವಳಿ ಜಿಲ್ಲೆಗಳ ಯುವಜನರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಹೊಸ ಕಂಪೆನಿಗಳು ಬರಬೇಕು. ಹಾಲಿ ಇರುವ ಎಂಆರ್‌ಪಿಎಲ್, ನಾಗಾರ್ಜುನ ವಿದ್ಯುತ್ ಕಂಪೆನಿಗಳಲ್ಲಿ ಶೇ. 95ರಷ್ಟು ಮಂದಿ ಕಾರ್ಮಿಕರು ಹೊರರಾಜ್ಯದವರೇ ತುಂಬಿದ್ದು, ಸ್ಥಳೀಯರು ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ. ಆದ್ದರಿಂದ ಕರಾವಳಿ ಜಿಲ್ಲೆಗಳಲ್ಲಿ ಕೈಗಾರಿಕೆ ಹಾಗೂ ವಾಣಿಜ್ಯ ಚಟುವಟಿಕೆಗಳು ಬೆಳೆಯಬೇಕಿದೆ” ಎಂದು ಡಿ.ಆರ್ ರಾಜು ಹೇಳಿದರು.

“ಪರಿಸರ ಸಂರಕ್ಷಣೆ, ನೆಲ, ಜಲದ ಸಂರಕ್ಷಣೆಯಲ್ಲಿ ನಮ್ಮ ಸಂಘಟನೆ ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿದೆ. ಅರಣ್ಯ ನಾಶವನ್ನು ತಡೆಯುವ ನಿಟ್ಟಿನಲ್ಲಿ ಸ್ಮಶಾನ ಭೂಮಿಗಳಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣ ಮಾಡಬೇಕೆಂದು ಸರ್ಕಾರವನ್ನು ಒತ್ತಾಯಿಸಿ, ನವೆಂಬರ್ 18ರಂದು ಬೆಳಿಗ್ಗೆ 10.30ಕ್ಕೆ ಉಡುಪಿಯ ಹೊಟೇಲ್ ಕಿದಿಯೂರು ಸಭಾಂಗಣದಲ್ಲಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಜನಪ್ರತಿನಿಧಿಗಳ ಸಭೆ ಕರೆಯಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ?

“ಈ ಕಾರ್ಯಕ್ರಮವನ್ನು ಮೀನುಗಾರಿಕಾ ಹಾಗೂ ಬಂದರು ಸಚಿವ ಮಾಂಕಾಳ ವೈದ್ಯ ಉದ್ಘಾಟಿಸಲಿದ್ದು, ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಅಧ್ಯಕ್ಷ ಎಲ್ ವಿ ಅಮೀನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೇಂದ್ರ ಪ್ರವಾಸೋದ್ಯಮ ಮತ್ತು ಬಂದರು ಹಾಗೂ ಜಲಸಾರಿಗೆ ಸಚಿವ ಶ್ರೀಪಾದ ನಾಯ್ಕ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಶಾಸಕರುಗಳಾದ ಯಶಪಾಲ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ ಸೇರಿದಂತೆ ಬಹುತೇಕರು ಭಾಗವಹಿಸಲಿದ್ದಾರೆ” ಎಂದು ಡಿ ಆರ್ ರಾಜು ಹೇಳಿದರು.

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ ಶೆಟ್ಟಿ, ಮುಂಡ್ಕೂರು ಸುರೇಂದ್ರ ಸಾಲಿಯಾನ್, ಅರುಣ್ ಶೆಟ್ಟಿ ಮೂಡಬಿದ್ರೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X