ಉಡುಪಿ | ಕೋಮುವಾದಿಗಳಲ್ಲಿ ಮುಸ್ಲಿಂ ಸಮುದಾಯದ ಪ್ರಗತಿಯ ಬಗ್ಗೆ ಆತಂಕವಿದೆ – ಮೌ ಸಯ್ಯದ್ ತನ್ವೀರ್ ಹಾಶ್ಮಿ

Date:

ಇಂದು ಕೋಮುವಾದಿಗಳಲ್ಲಿ ಮುಸ್ಲಿಂ ಸಮುದಾಯದ ಪ್ರಗತಿಯ ಬಗ್ಗೆ ಆತಂಕವಿದೆ. ಆ ಕಾರಣಕ್ಕಾಗಿ ಸಮುದಾಯವನ್ನು ಗುರಿ ಮಾಡಲಾಗುತ್ತಿದೆ. ನಾವು ನಮ್ಮ ಸಮುದಾಯವನ್ನು ಮತ್ತಷ್ಟು ಅಭಿವೃದ್ಧಿ ಹೊಂದಲು, ಶ್ರೈಕ್ಷಣಿಕವಾಗಿ ಬೆಳವಣಿಗೆ ಹೊಂದಲು ಸಂಪೂರ್ಣ ಪ್ರಯತ್ನದಲ್ಲಿ ತೊಡಗಿಸಿಕೊಳ್ಳಬೇಕು. ಮುಸ್ಲಿಂ ಸಮುದಾಯದ ಯುವಜನತೆ ನಾಗರೀಕ ಸೇವಾ ಪರೀಕ್ಷೆ ಬರೆಯುವಂತಹ ವಾತಾವರಣ ಸೃಷ್ಟಿಸಬೇಕು ಎಂದು ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಮತ್ತು ಅಖಿಲ ಭಾರತ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿಯ ಸದಸ್ಯ ಮೌಲಾನ ಸಯ್ಯದ್ ತನ್ವೀರ್ ಹಾಶ್ಮಿ ಸಾಹೇಬ್ ಬಿಜಾಪುರ ಹೇಳಿದ್ದಾರೆ.

- Advertisement -

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಉಡುಪಿ ಪುರಭವನದ ಮಿನಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾದ ‘ಪ್ರಸಕ್ತ ಸನ್ನಿವೇಶ ಮತ್ತು ನಮ್ಮ ಜವಾಬ್ದಾರಿಗಳು’ ಕುರಿತು ವಿಚಾರಗೋಷ್ಠಿಯಲ್ಲಿ ಅವರು ವಿಷಯ ಮಂಡನೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಸಮಾಜದಲ್ಲಿ ಅಸ್ತಿತ್ವದಲ್ಲಿರುವ ಸಮಸ್ಯೆಗಳನ್ನು ಸುಧಾರಿಸಲು, ಇಸ್ಲಾಮಿ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಸಂಪೂರ್ಮ ಅಳವಡಿಸಿಕೊಳ್ಳುವುದು ಅತೀ ಅಗತ್ಯವಾಗಿದೆ. ಸಮುದಾಯವು ಸಮಾಜ ಸೇವೆಯಲ್ಲಿ ವ್ಯಾಪಕವಾಗಿ ತೊಡಗಿಸಿ ಕೊಳ್ಳಬೇಕು. ಬಡವರ ನೆರವಿಗೆ ಧಾವಿಸಬೇಕು. ಮುಸ್ಲಿಮೇತರೊಂದಿಗೆ ಉತ್ತಮ ಸಂಬಂಧವನ್ನು ಬೆಳೆಸಬೇಕು. ಹಬ್ಬಗಳ ಸಂದರ್ಭದಲ್ಲಿ ಮುಸ್ಲಿಮೇತರ ಸಹೋದರರನ್ನು ಕರೆದು ಹಬ್ಬದ ಸಂತೋಷವನ್ನು ಹಂಚಿಕೊಳ್ಳಬೇಕು ಎಂದರು.

ಮುಸ್ಲಿಮರು ಧಾರ್ಮಿಕ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಸಂಪೂರ್ಣವಾಗಿ ಅಳವಡಿಸಬೇಕು. ನಮ್ಮ ನಮ್ಮ ಕುಟುಂಬದಲ್ಲಿ ಇಸ್ಲಾಮಿ ಮೌಲ್ಯಗಳನ್ನು ಸಂಸ್ಥಾಪಿಸಬೇಕಾಗಿದೆ. ನಮ್ಮ ಮಕ್ಕಳಲ್ಲಿ, ಮಹಿಳೆಯರಲ್ಲಿ, ಪುರುಷರಲ್ಲಿ ಇಸ್ಲಾಮಿ ಮೌಲ್ಯಗಳನ್ನು ಬೆಳೆಸಬೇಕು. ಮಕ್ಕಳಿಗೆ ಶಿಕ್ಷಣದ ಅರಿವು ಮೂಡಿಸಿ ಸಮುದಾಯದಲ್ಲಿ ಶ್ರೈಕ್ಷಣಿಕ ಮೂಡಿಸಬೇಕಾಗಿದೆ ಎಂದು ಅವರು ತಿಳಿಸಿದರು.

‘ಸಾಮಾಜಿಕ ಜಾಲಾತಾಣದಲ್ಲಿ ಸಮುದಾಯದ ಯುವಕರು ಆಕ್ಷೇಪಾರ್ಹ ಪೋಸ್ಟ್ಗಳು ಮಾಡದಂತೆ ಜಾಗೃತಿ ಮೂಡಿಸಬೇಕು. ಗೋಧಿ ಮಿಡಿಯಾ, ಸಾಮಾಜಿಕ ಜಾಲಾತಾಣದ ದ್ವೇಷಪೂರಿತ ವಾತಾವರಣ ಹಾಗೂ ಕೋಮು ವಾದದ ಕ್ಷೋಭೆಗಳಿಂದ ನಮ್ಮ ಸಮುದಾಯ ದೂರ ಇರಬೇಕು’ ಎಂದರು

ಅಖಿಲ ಭಾರತ ಮಿಲ್ಲಿ ಕೌನ್ಸಿಲ್‌ನ ಸಹಾಯಕ ಪ್ರಧಾನ ಕಾರ್ಯದರ್ಶಿ ಮತ್ತು ವಕ್ಫ್ ಉಳಿಸಿ ಸಂವಿಧಾನ ರಕ್ಷಿಸಿ ಆಂದೋಲನದ ಕರ್ನಾಟಕ ಸಹ ಸಂಚಾಲಕ ಸುಲೈಮಾನ್ ಖಾನ್ ಸಾಹೇಬ್ ಬೆಂಗಳೂರು ಮಾತನಾಡಿದರು. ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ವೌಲಾ ವಹಿಸಿದ್ದರು.

ಈ ಸಂದರ್ಭದಲ್ಲಿ ಒಕ್ಕೂಟದ ಸದಸ್ಯ, ಲೇಖಕ ಮುಸ್ತಾಕ್ ಹೆನ್ನಾಬೈಲ್ ಬರೆದ ಧರ್ಮಾಧರ್ಮ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ವೇದಿಕೆಯಲ್ಲಿ ಒಕ್ಕೂಟದ ಹಿರಿಯ ಉಪಾಧ್ಯಕ್ಷ ರಫೀಕ್ ಕುಂದಾಪುರ, ಉಪಾಧ್ಯಕ್ಷರಾದ ಶಭಿ ಕಾಝಿ, ಫರೀದ್ ಶೇಖ್, ಫಯಾಝ್ ಬೈಂದೂರು ಉಪಸ್ಥಿತರಿದ್ದರು.

ಉಡುಪಿ ಜಾಮೀಯ ಮಸೀದಿಯ ಇಮಾಮ್ ವೌಲಾನ ರಶೀದ್ ಉಮ್ರಿ ಕುರಾನ್ ಪಠಿಸಿದರು. ಕಾರ್ಯಕ್ರಮ ಸಂಚಾಲಕ ವೌಲಾನ ಝಮೀರ್ ಅಹ್ಮದ್ ರಶಾದಿ ಸ್ವಾಗತಿಸಿದರು. ಒಕ್ಕೂಟದ ಮಾಜಿ ಜಿಲ್ಲಾಧ್ಯಕ್ಷ ಎಂ.ಪಿ.ಮೊದಿನಬ್ಬ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಹುಸೇನ್ ಕಟಪಾಡಿ ವಂದಿಸಿದರು. ಯಾಸೀನ್ ಕೋಡಿಬೆಂಗ್ರೆ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...

ವಿಜಯಪುರ | ವಿಜಯಪುರಕ್ಕೆ 371(ಜೆ) ಮೀಸಲಾತಿ ನೀಡಲು ಆಗ್ರಹ; ಎಸ್.ಕೆ. ಬೆಳ್ಳುಬ್ಬಿ

ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಹೊರಗಿಟ್ಟಿರುವುದು ದೊಡ್ಡ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...