ಉಡುಪಿ | ಮುಸ್ಲಿಂ ಸಮುದಾಯದ ಹಕ್ಕುಗಳಿಗಾಗಿ ರಾಜ್ಯ ಮಟ್ಟದ ಒಕ್ಕೂಟ ರಚನೆಗೆ ತೀರ್ಮಾನ

Date:

ಕಾಂಗ್ರೆಸ್ ಸರ್ಕಾರವು ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಚುನಾವಣಾ ಭರವಸೆಗಳನ್ನು ಇನ್ನೂ ಪೂರ್ಣವಾಗಿ ಈಡೇರಿಸದಿರುವ ಹಿನ್ನೆಲೆಯಲ್ಲಿ, ರಾಜ್ಯ ಮಟ್ಟದಲ್ಲಿ ಮುಸ್ಲಿಂ ಸಂಘಟನೆಗಳ ಒಕ್ಕೂಟವನ್ನು ರಚಿಸಿ ಸಂಘಟಿತ ಹೋರಾಟ ನಡೆಸಬೇಕೆಂದು ಇಂದು ಉಡುಪಿಯಲ್ಲಿ ತೀರ್ಮಾನಿಸಲಾಯಿತು.

- Advertisement -
1008178265

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ರಾಜ್ಯದ ಮುಸ್ಲಿಮ್ ಸಂಘಟನೆಯ ನಾಯಕರ ಸಭೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದ ಪ್ರತಿನಿಧಿಗಳು ಸಮ್ಮುಖದಲ್ಲಿ ತೀರ್ಮಾನಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಸಭೆಯಲ್ಲಿ ಮಾತನಾಡಿದ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಎಲ್.ಕೆ. ಅತೀಕ್, ಮುಸ್ಲಿಂ ಸಮುದಾಯ ಸರ್ಕಾರದಿಂದ ನಿರೀಕ್ಷಿಸುವ ಕ್ರಮಗಳಿಗೆ ಇರುವ ರಾಜಕೀಯ, ಕಾನೂನು ಮತ್ತು ಆಡಳಿತಾತ್ಮಕ ಸವಾಲುಗಳ ಕುರಿತು ವಿವರಿಸಿದರು. ಸಮುದಾಯದ ಸ್ವಯಂ ಅಭಿವೃದ್ಧಿ, ಇತರ ಸಮುದಾಯಗಳೊಂದಿಗೆ ಸೌಹಾರ್ದಯುತ ಸಹಕಾರ ಮತ್ತು ಅದಕ್ಕಾಗಿ ಬೇಕಾದ ಕ್ರಮಗಳ ಬಗ್ಗೆ ಅವರು ಸಲಹೆ ನೀಡಿದರು.

ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಮಾಜಿ ಅಧ್ಯಕ್ಷ ಯಾಸೀನ್ ಮಲ್ಪೆ ಮಾತನಾಡಿ, ಕಾಂಗ್ರೆಸ್ ಭರವಸೆಗಳ ಅನುಷ್ಠಾನ, ಸರ್ಕಾರದ ಧೋರಣೆ ಹಾಗೂ ಮುಂದಿನ ಎರಡುವರೆ ವರ್ಷಗಳಲ್ಲಿ ಸಮುದಾಯ ಸರಕಾರದೊಂದಿಗೆ ಹೇಗೆ ವ್ಯವಹರಿಸಬೇಕು ಎಂಬುದರ ಕುರಿತು ಚರ್ಚೆಗೆ ಪೀಠಿಕೆ ನೀಡಿದರು.

1008178269

ಕಾನೂನಾತ್ಮಕ ಅಡಚಣೆಗಳ ಬಗ್ಗೆ ಬೆಂಗಳೂರಿನ ವಕೀಲ ಮುಝಫರ್ ಅಹ್ಮದ್ ಮಾಹಿತಿ ನೀಡಿದರು. ರಾಜ್ಯದ ಸುಮಾರು 15 ಜಿಲ್ಲೆಗಳಿಂದ ಆಗಮಿಸಿದ ವಿವಿಧ ಮುಸ್ಲಿಂ ಸಂಘಟನೆಗಳ ಪ್ರತಿನಿಧಿಗಳು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.

ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮೊಹಮ್ಮದ್ ಮೌಲಾ ಸ್ವಾಗತಿಸಿದರು. ಮೌಲಾನಾ ಝಮೀರ್ ಅಹ್ಮದ್ ರಶಾದಿ ಚರ್ಚೆಯನ್ನು ನಡೆಸಿದರು. ಜಿ.ಎಂ. ಶರೀಫ್ ಹೂಡೆ ನಿರೂಪಿಸಿದರು. ಝಫರುಲ್ಲಾ ಹೂಡೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...