ಮಲ್ಪೆ ಬಂದರಿನಲ್ಲಿ ಕಾರ್ಮಿಕನ ಮೇಲಿನ ಹಲ್ಲೆ: ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಖಂಡನೆ

Date:

ಮಲ್ಪೆ ಬಂದರಿನಲ್ಲಿ ಮೀನು ಯಾಲಂ ನಡೆಸುತ್ತಿದ್ದ ಕಾರ್ಮಿಕ ಅಯ್ಯುಬ್ ಅವರ ಮೇಲೆ ನಡೆದಿರುವ ಕಾನೂನುಬಾಹಿರ ಹಲ್ಲೆಯನ್ನು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ತೀವ್ರವಾಗಿ ಖಂಡಿಸಿದೆ.

- Advertisement -

ಫೆ 26ರ ಬೆಳಗ್ಗೆ ಸುಮಾರು 7.30ರ ವೇಳೆಗೆ ಅಯ್ಯುಬ್ ಅವರು ತಮ್ಮ ನಿತ್ಯದ ಉದ್ಯೋಗದಲ್ಲಿ ತೊಡಗಿದ್ದ ಸಂದರ್ಭದಲ್ಲಿ, ಮಿಥುನ್ ಕರ್ಕೆರ ಎಂಬ ವ್ಯಕ್ತಿ ಕಳ್ಳತನದ ಆರೋಪ ಮಾಡುತ್ತಾ ಏಕಾಏಕಿ ಹಲ್ಲೆಗೆ ಇಳಿದಿರುವುದು ಅತ್ಯಂತ ಖಂಡನೀಯವಾಗಿದೆ ಎಂದು ಒಕ್ಕೂಟ ತಿಳಿಸಿದೆ. ಅಯ್ಯುಬ್ ಅವರು ತಮಗೆ ಬಂದ ಸರಕನ್ನೇ ಯಾಲಂ ಮಾಡುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದರೂ, ಅವರ ಮನವಿಯನ್ನು ಲೆಕ್ಕಿಸದೇ ಹಲ್ಲೆ ನಡೆಸಿರುವುದು ದುಃಖಕರ ಮತ್ತು ಅಸ್ವೀಕಾರಾರ್ಹ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಮಲ್ಪೆ ಬಂದರು ವಿವಿಧ ಜಾತಿ–ಮತಗಳ ಕಾರ್ಮಿಕರು ಶಾಂತಿಯುತವಾಗಿ ದುಡಿಯುವ ಸ್ಥಳವಾಗಿದೆ. ಇಂತಹ ಸ್ಥಳದಲ್ಲಿ ಕಾನೂನನ್ನು ಕೈಗೆತ್ತಿಕೊಂಡು ಹಿಂಸಾಚಾರ ನಡೆಸುವುದು ಶ್ರಮಿಕ ವರ್ಗದ ಬದುಕಿನ ಹಕ್ಕಿನ ಮೇಲಿನ ನೇರ ದಾಳಿಯಾಗಿದೆ ಎಂದು ಒಕ್ಕೂಟ ಅಭಿಪ್ರಾಯಪಟ್ಟಿದೆ.

ಘಟನೆಯ ವೇಳೆ ಅಯ್ಯುಬ್ ಅವರು ಉಪವಾಸದಲ್ಲಿದ್ದೇನೆ, ಆರೋಗ್ಯ ಸಮಸ್ಯೆ ಇದೆ ಎಂದು ಮನವಿ ಮಾಡಿಕೊಂಡಿದ್ದರೂ ಹಲ್ಲೆ ನಿಲ್ಲಿಸದಿರುವುದು ಮಾನವೀಯ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ತಿಳಿಸಿದ್ದಾರೆ.

ಘಟನೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಬಂದರು ಪ್ರದೇಶದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ತಕ್ಷಣ ಕ್ರಮವಹಿಸಬೇಕು ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಮಾಧ್ಯಮ ವಕ್ತಾರ ಇಕ್ಬಾಲ್ ಮನ್ನಾ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...