ಉಡುಪಿ | ಜೋಗಿ ಸಮಾಜ ಸೇವಾ ಸಮಿತಿಯ 16ನೇ ವಾರ್ಷಿಕೋತ್ಸವ

Date:

ಉಡುಪಿ ನಗರದ ಎಂ.ಜಿ.ಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಜೋಗಿ ಸಮಾಜ ಸೇವಾ ಸಮಿತಿ (ರಿ.) ಉಡುಪಿ – ಕಾರ್ಕಳ ಘಟಕದ 16ನೇ ವಾರ್ಷಿಕೋತ್ಸವ ಕಾರ್ಯಕ್ರಮವು ಅಧ್ಯಕ್ಷರಾದ ಗೋವಿಂದ ಜೋಗಿಪಳ್ಳಿ ಅವರ ಅಧ್ಯಕ್ಷತೆಯಲ್ಲಿ ವಿಜೃಂಭಣೆಯಿಂದ ಜರುಗಿತು.

- Advertisement -

ಬೆಳಿಗ್ಗೆ ಸಾಮೂಹಿಕ ಸತ್ಯನಾರಾಯಣ ಪೂಜೆಯಿಂದ ಕಾರ್ಯಕ್ರಮಕ್ಕೆ ಆರಂಭವಾಗಿದ್ದು, ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಸಮಾಜದ ಹಿರಿಯರು ಹಾಗೂ ಸಮಾಜದ ಏಳಿಗೆಗೆ ಶ್ರಮಿಸಿರುವ ಗಣ್ಯರನ್ನು ಸನ್ಮಾನಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಸಮಾಜ ಸೇವೆ ಹಾಗೂ ನಾಯಕತ್ವಕ್ಕಾಗಿ ಕೆ.ಎನ್. ಶ್ರೀನಿವಾಸ ಜೋಗಿ ಬೆಂಗಳೂರು ಅವರಿಗೆ “ಜೋಗಿ ರತ್ನ”, ಶ್ರೀ ದೇವರಾಜ ಬಳೆಗಾರ್ ಬೈಂದೂರು ಅವರಿಗೆ “ಜೋಗಿ ಭಾರ್ಗವ” ಹಾಗೂ ಪುರುಷೋತ್ತಮ ಹೆಚ್.ಕೆ ಮಂಗಳೂರು ಅವರಿಗೆ “ಜೋಗಿ ಸಾಮ್ರಾಟ್” ಬಿರುದು ನೀಡಿ ಗೌರವಿಸಲಾಯಿತು.

ಅದೇ ರೀತಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಹಿರಿಯರು ಹಾಗೂ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಿತು. ಸಮಾಜದ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿರುವ ನಿತ್ಯಾನಂದ ಒಳಕಾಡು ಮತ್ತು ವಿಶು ಶೆಟ್ಟಿ ಇವರಿಗೂ ಸಮಾಜದ ಮುಖಂಡರಾದ ನವೀನಚಂದ್ರ ಜೋಗಿ ಹಾಗೂ ಕೆ.ಎನ್. ಮುರಲೀಧರ ಜೋಗಿ ಕಮ್ಮರಡಿ ಅವರಿಂದ ಸನ್ಮಾನ ನೆರವೇರಿತು.

ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ಕೆ.ಎನ್. ಚಂದ್ರಶೇಖರ ಜೋಗಿ ಬೆಂಗಳೂರು, ಸ್ಥಾಪಕಾಧ್ಯಕ್ಷ ನವೀನಚಂದ್ರ ಜೋಗಿ, ಮಾಜಿ ಅಧ್ಯಕ್ಷರು ಪಿ. ಸುರೇಶ್ ಕುಮಾರ್ ಹೆಬ್ರಿ, ಗೌರವಾಧ್ಯಕ್ಷ ಹರೀಶ್ಚಂದ್ರ ಜೋಗಿ ಕಟಪಾಡಿ, ಕರ್ನಾಟಕ ಜೋಗಿ ಸುಧಾರಕ ಸಂಘದ ಅಧ್ಯಕ್ಷ ಕಿರಣ್ ಕುಮಾರ್ ಜೋಗಿ ಮಂಗಳೂರು, ಹಿಂದುಳಿದ ವರ್ಗಗಳ ವಿಸ್ತರಣಾ ಅಧಿಕಾರಿ ಶ್ರೀಕಾಂತ್, ಕುಂದಾಪುರ ಸಂಘದ ಅಧ್ಯಕ್ಷ ರಮೇಶ್ ಜೋಗಿ ಹೆಮ್ಮಾಡಿ, ಮಹಿಳಾ ಸಂಘದ ಅಧ್ಯಕ್ಷೆ ರಜನಿ ಜೋಗಿ ಸೂಡಾ, ಉದ್ಯಮಿಗಳು ಉದಯಕುಮಾರ್ ಜೋಗಿ ಬೆಂಗಳೂರು ಹಾಗೂ ಉದಯ ಜೋಗಿ ಗೋಳಿಯಂಗಡಿ, ಉ.ಕ. ಅಧ್ಯಕ್ಷ ಶಿವರಾಮ ಜೋಗಿ ಮುರ್ದೆಶ್ವರ, ವೈ. ದಿಲೀಪ್ ಜೋಗಿ, ಉಡುಪಿ ಜೋಗಿ ವಿವಿದೋದ್ದೇಶ ಸಹಕಾರಿ ಸಂಸ್ಥೆಯ ಅಧ್ಯಕ್ಷ ವಸಂತ ಜೋಗಿ ಏರ್ಮಾಳು, ಕುಂದಾಪುರ ಸಂಸ್ಥೆಯ ಅಧ್ಯಕ್ಷ ಶೇಖರ ಜೋಗಿ, ಪ್ರಧಾನ ಕಾರ್ಯದರ್ಶಿ ಅಶೋಕ ಜೋಗಿ ಕಾರ್ಕಳ ಹಾಗೂ ಕೋಶಾಧಿಕಾರಿ ರಾಕೇಶ್ ಜೋಗಿ ನಿಟ್ಟೂರು ಉಪಸ್ಥಿತರಿದ್ದರು.

ರಾಕೇಶ್ ಜೋಗಿ ಪ್ರಾಸ್ತವಿಕವಾಗಿ ಮಾತನಾಡಿದರು. ಪ್ರಭಾಕರ ಜೋಗಿ ಬಂಟಕಲ್ಲು ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಲ್ಪೆಯಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿ ಕೊಲೆ

ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ಮಂಗಳವಾರ ಬೆಳಗ್ಗೆ...

ಗ್ರಾಮೀಣ ಬದುಕು, ಕೃಷಿ ಸಂಸ್ಕೃತಿ ಪ್ರವಾಸಿಗರಿಗೆ ಪರಿಚಯಿಸಲು ಹೊಸ ಪ್ರವಾಸೋದ್ಯಮ ಪ್ಯಾಕೇಜ್‌ಗಳ ಚಿಂತನೆ

ಉಡುಪಿ ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳೊಂದಿಗೆ ಗ್ರಾಮೀಣ...

ವಿಜಯಪುರ | ಬರ ಪರಿಹಾರ ಹೆಚ್ಚಳ, ಸಾಲಮನ್ನಾಕ್ಕೆ ರಾಜ್ಯ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ಮಳೆ ಕೈಕೊಟ್ಟು ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿರುವ...